Advertisement
ಗ್ರಾಮ ಒನ್ ಯೋಜನೆಯ ಪ್ರಗತಿ ಕುರಿತು ಜಿಲ್ಲಾಡಳಿತ ಹಾಗೂ ಗ್ರಾಮ ಒನ್ ಕಂಪ್ಯೂಟರ್ ಆಪರೇಟರ್‍ಗಳೊಂದಿಗೆ ಇಂದು ನಡೆದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು.
ಜನರ ಎಲ್ಲ ಮಾಹಿತಿಗಳು ಕಾಗದರೂಪದಲ್ಲಿಯೇ ಪಡೆಯುವ ಅವಶ್ಯಕತೆಯಿಲ್ಲ. ‘ಕುಟುಂಬ’ ಜನಸೇವಕ ಸಾಫ್ಟ್‍ವೇರ್‍ಗಲ್ಲಿಯೂ ಮಾಹಿತಿಗಳು ಲಭಿಸುತ್ತದೆ. ಜನರು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ ತ್ವರಿತವಾಗಿ ಸರ್ಕಾರದ ಸೇವೆಯನ್ನು ಪೂರೈಸಬೇಕು. ಮಾಹಿತಿ ಕೊರತೆ ಇದ್ದರೆ ಸ್ಪಷ್ಟೀಕರಣ ನೀಡಬೇಕು. ಸೇವೆ ಪೂರೈಸಲು ಕಾನೂನಾತ್ಮಕವಾಗಿ ಸಾಧ್ಯವಾಗದಿದ್ದಲ್ಲಿ ಅರ್ಜಿಯ ತಿರಸ್ಕಾರಕ್ಕೆ ಸಕಾರಣವನ್ನು ನೀಡಬೇಕು. ತಿರಸ್ಕøತ ಅರ್ಜಿಗಳ ಸಂಖ್ಯೆಯನ್ನು ಕಡಿಮೆಗೊಳಿಸಲು ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಅವುಗಳನ್ನು ಬಗೆಹರಿಸಬೇಕು. ಪಂಚಾಯತ್ ಅಭಿವೃದ್ಧಿ ಅಧಿಕಾರಿ, ತಹಶೀಲ್ದಾರ್ ಸಿಬ್ಬಂದಿಗಳೊಂದಿಗೆ ಸೌಹಾರ್ದತೆಯಿಂದಿರಬೇಕು. ಗ್ರಾಮ ಪಂಚಾಯತಿ ವ್ಯಾಪ್ತಿಗೆ ಮೀರಿದ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಸೇವೆಗಳನ್ನು ಜನರಿಗೆ ಮುಟ್ಟಿಸುವ ಕೆಲಸವನ್ನು ಮಾಡುವ ಅರಿವು ಇರಬೇಕು ಎಂದರು.
Related Articles
Advertisement
ಕಾರ್ಯಕ್ಷಮತೆ ಆಧರಿಸಿ ಬಹುಮಾನಗ್ರಾಮ ಒನ್ ಕಂಪ್ಯೂಟರ್ ಆಪರೇಟರ್ಸ್‍ಗಳು ತಮ್ಮ ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಳ್ಳಲು ಪ್ರೋತ್ಸಾಹಿಸುವ ಉದ್ದೇಶದಿಂದ ಮುಂದಿನ 12 ತಿಂಗಳ ಅವಧಿಯಲ್ಲಿ ಪ್ರತಿ ವಾರ ಮೂರು ಉತ್ತಮ ಆಪರೇಟರ್ಸ್ ಗಳನ್ನು ಆಯ್ಕೆ ಮಾಡಿ ಪ್ರಥಮ ಬಹುಮಾನ 10,000 ರೂ. ದ್ವಿತೀಯ ಬಹುಮಾನ ರೂ.7,000 ಹಾಗೂ ತೃತೀಯ ಬಹುಮಾನ ರೂ.5,000 ಗಳನ್ನು ಇ ಆಡಳಿತ ಇಲಾಖೆ ವತಿಯಿಂದ ನೀಡಲಾಗುವುದು. ಜಿಲ್ಲಾಮಟ್ಟದಲ್ಲಿ ಉತ್ತಮ ಕಾರ್ಯಕ್ಷಮತೆಯನ್ನು ಪ್ರದರ್ಶಿಸಿದ ಜಿಲ್ಲೆ ತಿಂಗಳಿಗೊಮ್ಮೆ 1 ಲಕ್ಷ ರೂ. ಬಹುಮಾನವನ್ನು ನೀಡಲಾಗುವುದು ಎಂದು ತಿಳಿಸಿದರು. ಸರ್ಕಾರದ ಪ್ರತಿನಿಧಿಗಳು
ಗ್ರಾಮ ಒನ್ ಕಂಪ್ಯೂಟರ್ ಆಪರೇಟರ್‍ಗಳು ಸರ್ಕಾರದ ಪ್ರತಿನಿಧಿಗಳಾಗಿದ್ದು, ತಮ್ಮ ಕಾರ್ಯವೈಖರಿಯ ಮೇಲೆ ಸರ್ಕಾರದ ವರ್ಚಸ್ಸು ಅವಲಂಬಿಸಿದೆ. ಗ್ರಾಮ ಒನ್ ಆಪರೇಟರ್ ಗಳು ಗ್ರಾಮ ಒನ್ ಸೇವೆಗಳನ್ನು ಜನರಿಗೆ ಯಶಸ್ವಿಯಾಗಿ ತಲುಪಿಸುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಜಿಲ್ಲಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬಾಕಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ಆದ್ಯತೆ ಮೇಲೆ ಪ್ರಾರಂಭಿಸಲು ಹಾಗೂ ಸಾರ್ವಜನಿಕರು ಗ್ರಾಮ ಒನ್‍ನಲ್ಲಿ ಸೇವೆಗಳ ಬಗ್ಗೆ ಹೆಚ್ಚಿನ ಪ್ರಚಾರವನ್ನು ನೀಡಬೇಕೆಂದು ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.