ಯಾದಗಿರಿ: ಭಾರತ ಚುನಾವಣಾ ಆಯೋಗವು ಪ್ರತಿ ವರ್ಷ ಜ.25ಕ್ಕೆ ರಾಷ್ಟ್ರೀಯ ಮತದಾರರ ದಿನವನ್ನು ಜಿಲ್ಲಾ ಹಂತ, ತಾಲೂಕು ಹಾಗೂ ಎಲ್ಲ ಮತಗಟ್ಟೆಗಳಲ್ಲಿ ಆಚರಿಸಲಾಗುತ್ತಿದ್ದು, ಬೆಳಗ್ಗೆ 11 ಗಂಟೆಗೆ ಚುನಾವಣಾ ಆಯೋಗ ಸಿದ್ಧಪಡಿಸಿರುವ ಪ್ರತಿಜ್ಞಾ ವಿಧಿಯನ್ನು ಸರ್ಕಾರದ ಎಲ್ಲ ಇಲಾಖೆಗಳ ಸಿಬ್ಬಂದಿ ಮತ್ತು ಅಧಿಕಾರಿಗಳು ಹಾಗೂ ಶಾಲಾ-ಕಾಲೇಜುಗಳಲ್ಲಿ ಸ್ವೀಕರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯ ಆರ್. ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕರಡು ಮತದಾರರ ಪಟ್ಟಿ ಪ್ರಕಟವಾದ ನಂತರ ಅಂತಿಮ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ 18 ವರ್ಷ
ತುಂಬಿದ 7597 ಯುವ ಮತದಾರರು ಪ್ರಥಮವಾಗಿ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವುದರಿಂದ ಜಿಲ್ಲಾ ಮತ್ತು ತಾಲೂಕು ಹಂತದ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಎಪಿಕ್ ಕಾರ್ಡ್‌ಗಳನ್ನು ಉಚಿತವಾಗಿ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಸ್ವೀಪ್ ಚಟುವಟಿಕೆಗಳ ಮೂಲಕ ಶಾಲಾ- ಕಾಲೇಜುಗಳಲ್ಲಿ ಮತದಾನದ ಮಹತ್ವ ಮತ್ತು ಜಾಗೃತಿಗಾಗಿ ಕೈಗೊಂಡ ತಾಲೂಕು-ಜಿಲ್ಲಾ ಹಂತದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಗುವುದು.
ಪ್ರತಿ ವಿಧಾನಸಭಾ ಕ್ಷೇತ್ರವಾರು ಉತ್ತಮವಾಗಿ ಕಾರ್ಯನಿರ್ವಹಿದ ಬಿಎಲ್‌ಒ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಬೇಕಾಗಿರುವುದರಿಂದ ಮತಕ್ಷೇತ್ರವಾರು ಒಬ್ಬ ಉತ್ತಮ ಕೆಲಸ ನಿರ್ವಹಿಸಿದ ಬಿಎಲ್‌ಒ ಅವರಿಗೆ ಹಾಗೂ ಅತ್ಯುತ್ತಮ ಕಾರ್ಯನಿರ್ವಹಿಸಿದ ಇಎಲ್‌ಸಿ ಶಾಲೆ ಮತ್ತು ಕಾಲೇಜುಗಳನ್ನು ಸನ್ಮಾನಿಸಲಾಗುತ್ತಿದೆ. ಚುನಾವಣಾ ಆಯೋಗ ಆಧುನಿಕ ಚುನಾವಣಾ ಪರಿಸರ ವ್ಯವಸ್ಥೆಯತ್ತ, ಒಂದು ಹೆಜ್ಜೆ ಮುಂದಿಟ್ಟುಕೊಂಡು ಆಯೋಗವು ಹೊಸದಾಗಿ ದಾಖಲಾಗಿರುವ ಮತದಾರರು ತಮ್ಮ ಇ-ಎಪಿಕ್ ಕಾರ್ಡ್‌ನ್ನು ಜ.25ರಿಂದ 31ರವರೆಗೆ ಹಾಗೂ ಫೆ.1 ರಿಂದ ಎಲ್ಲ ಮತದಾರರು ಮೊಬೈಲ್ ಮೂಲಕ ECI/CEO website
ನಲ್ಲಿ ಸೃಜಿಸಲಾಗಿರುವ ಇ-ಎಪಿಕ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು ಅಥವಾ ಕಂಪ್ಯೂಟರ್‌ನಲ್ಲಿ ಇ-ಎಪಿಕ್‌ನ್ನು ಸ್ವಯಂ ಮುದ್ರಿಸಿಕೊಳ್ಳಬಹುದು ಎಂದು
ತಿಳಿಸಿದ್ದಾರೆ.