Advertisement

ದೌರ್ಜನ್ಯ ಸಂತ್ರಸ್ತರಿಗೆ ಪರಿಹಾರ ವಿತರಣೆ

11:25 AM Mar 23, 2018 | Team Udayavani |

ಚಿತ್ರದುರ್ಗ: ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ದೌರ್ಜನ್ಯ ತಡೆ ನಿಯಂತ್ರಣ ಕಾಯ್ದೆಯಡಿ ದಾಖಲಾದ 17 ಪ್ರಕರಣಗಳಲ್ಲಿ ನೊಂದ ಸಂತ್ರಸ್ತರಿಗೆ ಪರಿಹಾರ ಹಾಗೂ ಪುನರ್ವಸತಿ ಕಲ್ಪಿಸಲು 23.10 ಲಕ್ಷ ರೂ. ವಿತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ನಾ ತಿಳಿಸಿದರು.

Advertisement

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ 2018ನೇ ಸಾಲಿನ ಮೊದಲ ತ್ತೈಮಾಸಿಕ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರಿಹಾರ ನೀಡಿದ ಪ್ರಕರಣಗಳಲ್ಲಿ ತಲಾ ಒಂದು ಕೊಲೆ ಮತ್ತು ಅತ್ಯಾಚಾರ, 15 ಜಾತಿ ನಿಂದನೆ ಪ್ರಕರಣಗಳು ಸೇರಿವೆ ಎಂದರು.

2017ರ ಜನವರಿಯಿಂದ ಫೆಬ್ರವರಿ 2018 ರವರೆಗೆ 48 ವಿವಿಧ ಪ್ರಕರಣಗಳು ದಾಖಲಾಗಿದ್ದು, 2017ರ ಜೂನ್‌ ತಿಂಗಳಲ್ಲಿಯೇ ಅಧಿಕ 15 ಪ್ರಕರಣಗಳು ದಾಖಲಾಗಿವೆ. ಒಂದು ತಿಂಗಳಲ್ಲಿ ಇಷ್ಟೊಂದು ಪ್ರಕರಣಗಳು ಏತಕ್ಕಾಗಿ ದಾಖಲಾಗಿವೆ ಎಂಬ ವಿವರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ದಾಖಲಾದ ಒಟ್ಟು ಪ್ರಕರಣಗಳಲ್ಲಿ ಇಲ್ಲಿಯವರೆಗೆ 47 ಪ್ರಕರಣಗಳ ವಿಲೇ ಆಗಿವೆ. ಇದರಲ್ಲಿ ಮೂರು ಪ್ರಕರಣಗಳಿಗೆ ಶಿಕ್ಷೆಯಾಗಿದೆ. 25 ಪ್ರಕರಣಗಳು ಮಾತ್ರ ನ್ಯಾಯಾಲಯದಲ್ಲಿ ಇತ್ಯರ್ಥಕ್ಕಾಗಿ ಬಾಕಿ ಇವೆ ಎಂದರು. ಸಮಾಜ ಕಲ್ಯಾಣ ಇಲಾಖೆಯಿಂದ ನಡೆಸಲಾಗುತ್ತಿದ್ದ
ಹೊಲಿಗೆ ತರಬೇತಿ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ 30 ಜನ ಕೂಲಿಕಾರರಲ್ಲಿ ಏಳು ಜನರಿಗೆ ನಿವೇಶನ ನೀಡಲಾಗಿದೆ. ನಗರದಲ್ಲಿ ವಾಸಿಸುವ 11 ನಿವೇಶನ ರಹಿತರಿಗೆ ನೀಡಲು ಕಳೆದ ಹಲವು ಸಭೆಯಲ್ಲಿ ಚರ್ಚಿಸಲಾಗಿದ್ದರೂ ನೀಡಲಾಗಿಲ್ಲ ಎಂದು ಸಮಿತಿ ಸದಸ್ಯರು ಪ್ರಸ್ತಾಪಿಸಿದರು.

ಶಾಸಕರ ಅಧ್ಯಕ್ಷತೆಯಲ್ಲಿ ನಡೆಯುವ ಆಶ್ರಯ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಸೇರ್ಪಡೆ ಮಾಡಿ ನಿವೇಶನ ಒದಗಿಸಲಾಗುತ್ತದೆ ಎಂದು ಪೌರಾಯುಕ್ತರು ಸಭೆಗೆ ತಿಳಿಸಿದರು. ಹಿಂದಿನ ಹಲವು ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದ್ದು ಮುಂದಿನ ಸಭೆಯೊಳಗೆ ಇತ್ಯರ್ಥ
ಮಾಡಲು ಪೌರಾಯುಕ್ತರಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

Advertisement

ಚಳ್ಳಕೆರೆ ತಾಲೂಕಿನ ನೇರ್ಲಗುಂಟೆಯಲ್ಲಿ 2015 ರಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡಿದ್ದರೂ ನೀರು ಪೂರೈಕೆ ಮಾಡದ ಕಾರಣ ಜನರಿಗೆ ತೊಂದರೆಯಾಗಿದೆ. ಈ ಬಗ್ಗೆ ಗ್ರಾಮ ಪಂಚಾಯತ್‌ದ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳಿಂದ ಮಾಹಿತಿ ಪಡೆದು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪಂಚಾಯತ್‌ ಯೋಜನಾ ನಿರ್ದೇಶಕ ಪ್ರಭುಸ್ವಾಮಿ ತಿಳಿಸಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ರಾಮ ಎಲ್‌. ಅರೆಸಿದ್ದಿ, ಉಪವಿಭಾಗಾಧಿಕಾರಿ ವಿಜಯಕುಮಾರ್‌, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಂಜುಳಮ್ಮ, ಸದಸ್ಯರಾದ ನಿರಂಜನಮೂರ್ತಿ, ನೇ.ಹ. ಮಲ್ಲೇಶ್‌, ಬೈಲಮ್ಮ ಹಾಗೂ ವಿವಿಧ ಇಲಾಖೆಗಳ
ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next