ಉಡುಪಿ: ರಾಷ್ಟ್ರೀಯ ಜಂತುಹುಳ ನಿವಾರಣೆ ದಿನದ ಅಂಗವಾಗಿ ಮಾ. 13ರಂದು ಜಿಲ್ಲೆಯ 1ರಿಂದ 19 ವರ್ಷದೊಳಗಿನ 2,73,548 ಮಕ್ಕಳಿಗೆ ಅಲೆºಂಡಜೋಲ್ ಮಾತ್ರೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದ್ದಾರೆ.
ಜಂತುಹುಳ 1ರಿಂದ 19 ವರ್ಷ ದೊಳಗಿನ ಮಕ್ಕಳಲ್ಲಿ ಕಾಣಿಸಿಕೊಳ್ಳು ವುದರಿಂದ ಮಕ್ಕಳಲ್ಲಿ ಹೊಟ್ಟೆನೋವು, ಭೇದಿ, ಹಸಿವಿಲ್ಲದಿರುವುದು ಹಾಗೂ ಸುಸ್ತಿನಂತಹ ಲಕ್ಷಣಗಳು ಕಂಡುಬರು ತ್ತವೆ. ಇದರಿಂದಾಗಿ ಅವರಲ್ಲಿ ರಕ್ತ ಹೀನತೆ, ಪೌಷ್ಟಿಕತೆಯ ಕೊರತೆ ಉಂಟಾಗುತ್ತಿದ್ದು, ದೈಹಿಕ ಹಾಗೂ ಬೌದ್ಧಿಕ ಬೆಳವಣಿಗೆಗೆ ತೊಂದರೆ ಕಾಣಿಸಿ ಕೊಳ್ಳಬಹುದು. ಈ ಮಾತ್ರೆ ನೀಡುವು ದರಿಂದ ಈ ಜಂತುಹುಳಗಳು ನಾಶವಾಗುತ್ತವೆ.
ಕಾರ್ಯಕ್ರಮದಲ್ಲಿ ಸರಕಾರಿ, ಅನು ದಾನಿತ, ಖಾಸಗಿ ಶಾಲೆ, ಅಂಗನವಾಡಿ, ರೆಸಿಡೆನ್ಶಿಯಲ್ ಸ್ಕೂಲ್, ಐಟಿಐ, ನರ್ಸಿಂಗ್ ಕಾಲೇಜು, ಮೊದಲ ವರ್ಷದ ಪದವಿ ಹಾಗೂ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಆಯಾಯ ಶಾಲೆ/ ಕಾಲೇಜುಗಳಲ್ಲಿ ಮಾತ್ರೆಗಳನ್ನು ನೀಡಲಾಗುವುದು. ಅಂಗನವಾಡಿ ಮಕ್ಕಳಿಗೆ ಮತ್ತು ಶಾಲೆಯಿಂದ ಹೊರಗುಳಿದ 19 ವರ್ಷದೊಳಗಿನ ಮಕ್ಕಳಿಗೆ ಅಂಗನವಾಡಿಗಳಲ್ಲಿ ಮಾತ್ರೆ ವಿತರಣೆ ಮಾಡಲಾಗುತ್ತಿದೆ.
ನೈರ್ಮಲ್ಯ ಹಾಗೂ ವೈಯಕ್ತಿಕ ಶುಚಿತ್ವದ ಕೊರತೆಯಿಂದ ಮತ್ತು ಜಂತುಹುಳ ಸೋಂಕಿನ ಮಣ್ಣನ್ನು ಸ್ಪರ್ಶಿಸುವುದರಿಂದ ಜಂತುಹುಳು ಭಾದೆ ಹರಡುತ್ತದೆ. ಇದರಿಂದ ತಪ್ಪಿಸಿಕೊಳ್ಳಲು ಉಗುರುಗಳನ್ನು ಕತ್ತರಿಸಿ ಶುಚಿಯಾಗಿಡಬೇಕು. ಊಟ /ತಿಂಡಿ ಮಾಡುವ ಮೊದಲು ಹಾಗೂ ಶೌಚಾಲಯವನ್ನು ಬಳಸಿದ ಅನಂತರ ಕೈಗಳನ್ನು ಸಾಬೂನಿನಿಂದ ತೊಳೆಯಬೇಕು. ಶುದ್ಧೀಕರಿಸಿದ ನೀರನ್ನೇ ಕುಡಿಯಬೇಕು. ಹಣ್ಣು, ಹಂಪಲು, ತರಕಾರಿಗಳನ್ನು ಬಳಸುವ ಮುನ್ನ ತೊಳೆಯಬೇಕು. ಸುತ್ತಮುತ್ತಲಿನ ಪರಿಸರವನ್ನು ಸ್ವತ್ಛವಾಗಿಡುವುದು ಮುಖ್ಯ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ದ.ಕ.: 5.42 ಲಕ್ಷ ಮಾತ್ರೆ ವಿತರಣೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5.42 ಲಕ್ಷ ಮಕ್ಕಳಿಗೆ ಅಲ್ಬೆಂಡಜೋಲ್ ಮಾತ್ರೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ| ರಾಜೇಶ್ ಮಾಹಿತಿ ನೀಡಿದ್ದಾರೆ.