ರಾಮನಗರ: ಜೆಡಿಎಸ್ ವತಿಯಿಂದ ರಾಮನಗರ ಮತ್ತು ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಬಡ ಕುಟುಂಬಗಳಿಗೆ ಒಂದು ಲಕ್ಷಕ್ಕೂ ಅಧಿಕ ಆಹಾರ ಕಿಟ್ ಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ನಗರದ ಮಂಜುನಾಥ ಕಲ್ಯಾಣ ಮಂದಿರದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮ್ಯೂಚುವಲ್ ಫಂಡ್ ಗೆ ರಿಸರ್ವ್ ಬ್ಯಾಂಕ್ 50 ಕೋಟಿ ಹಣ ತುಂಬುವುದರಿಂದ ದೊಡ್ಡ ಕಂಪನಿಗಳಿಗೆ ಉಪಯೋಗವಾಗುತ್ತದೆ ಹೊರತು ಸಾಮಾನ್ಯ ಜನಕ್ಕಲ್ಲ ಎಂದರು.
ಸ್ಯಾನಿಟೈಸರ್ ಖರೀದಿ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಇಂತಹ ಪ್ರಕರಣಗಳಿಗೆ ಸರ್ಕಾರ ಅವಕಾಶ ನೀಡಬಾರದು ಎಂದರು.
ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ಗ್ರಾಮೀಣ ಪ್ರದೇಶದ ಜನತೆ ಆಸ್ಪತ್ರೆಗಳಿಗೆ ಬರಲಾಗುತ್ತಿಲ್ಲ. ಹೀಗಾಗಿ ಇಂತಹ ನಾಗರೀಕರ ಅರೋಗ್ಯದ ಬಗ್ಗೆ ಸರ್ಕಾರ ಕಾಳಜಿ ವಹಿಸಬೇಕಾಗಿದೆ ಎಂದರು.
ಈ ವೇಳೆ ಪತ್ನಿ ಹಾಗೂ ರಾಮನಗರ ಶಾಸಕಿ ಅನಿತಾ, ಪುತ್ರ ನಿಖಿಲ್ ಸೊಸೆ ರೇವತಿ ಮತ್ತು ಸ್ಥಳೀಯ ಮುಖಂಡರು ಹಾಜರಿದ್ದರು