Advertisement

ಹಾನಿಗೊಂಡ ಕುಟುಂಬಕ್ಕೆ ಆಹಾರ ಕಿಟ್‌

09:51 AM Aug 01, 2020 | Suhan S |

ಯಳಂದೂರು: ಈಚೆಗೆ ತಾಲೂಕಿನ ಗುಂಬಳ್ಳಿ ಗ್ರಾಮದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಕಲಹದಿಂದ ಹಾನಿಗೊಳಗಾದ ಮನೆಗಳು ಹಾಗೂ ಗಾಯಗೊಂಡ ಕುಟುಂಬದವರಿಗೆ ವಾಲ್ಮೀಕಿ ಸಮಾಜ ಸೇವಾ ಸಮಿತಿಯಿಂದ ಆಹಾರದ ಕಿಟ್‌ಗಳನ್ನು ವಿತರಿಸಲಾಯಿತು.

Advertisement

ಸಮಿತಿಯ ಪ್ರಧಾನ ಕಾರ್ಯದರ್ಶಿ ಅಗ್ರಹಾರ ರಂಗಸ್ವಾಮಿ ಮಾತನಾಡಿ, ಗ್ರಾಮದಲ್ಲಿ ನಡೆದ ಗಲಭೆಯಿಂದ ಕೆಲವರ ಮನೆಗಳಿಗೆ ಹಾನಿಯಾಗಿದೆ. ಕೆಲವರಿಗೆ ಗಾಯಗಳಾಗಿವೆ. ಈ ಹಿನ್ನೆಲೆಯಲ್ಲಿ ಕೆಲವರನ್ನು ಬಂಧಿಸಲಾಗಿದೆ. ಈ ಕುಟುಂಬಗಳು ಬಡ ಕುಟುಂಬಗ ಳಾಗಿವೆ ಹೀಗಾಗಿ ಆಹಾರ ಕಿಟ್‌ಗಳನ್ನು ವಿತರಿಸಲಾಗು ತ್ತಿದೆ. ಗ್ರಾಮದಲ್ಲಿ ಕೋಮು ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಪ್ರತಿಯೊಬ್ಬರೂ ಸಹಕರಿಸಬೇಕು.ಪೊಲೀಸರಿಗೆ ಸಹಕರಿಸಬೇಕು. ಈ ಸಂಬಂಧ ಬಂಧಿಸಿರುವ ವ್ಯಕ್ತಿಗಳನ್ನು ಕಾನೂನು ರೀತಿ ಕರೆತರಲು ಸಮಿತಿಯಿಂದ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಇದರಿಂದನೊಂದಿರುವ ಪರಿವಾರಗಳಿಗೆ ಸೂಕ್ತ ಪರಿಹಾರ ಒದಗಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು. ಸಮಿತಿಯ ಕಂದಹಳ್ಳಿ ಮಹೇಶ್‌ ಮಾತನಾಡಿ, ಗ್ರಾಮದಲ್ಲಿ ನಡೆದ ಘಟನೆ ಆಕಸ್ಮಿಕವಾಗಿದೆ. ಇದರಲ್ಲಿ ಬಂಧಿಯಾಗಿರುವವರು ಅಮಾಯಕರಾಗಿದ್ದಾರೆ. ಮುಂದಿನ ದಿನಗಳಲ್ಲಿ ಸಮಿತಿಯ ವತಿಯಿಂದ ಮತ್ತಷ್ಟು ಅನುಕೂಲ ಮಾಡಿಕೊಡಲಾಗುವುದು ಎಂದರು.

ಎಸ್‌ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಜುನಾಯಕ್‌, ಪಪಂ ಮಾಜಿ ಉಪಾಧ್ಯಕ್ಷ ಭೀಮಪ್ಪ ಸದಸ್ಯ ವೈ.ವಿ. ಉಮಾಶಂಕರ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next