ಜೇವರ್ಗಿ: ಕೊರೊನಾ ಸೋಂಕಿನಿಂದ ತೀವ್ರ ಸಂಕಷ್ಟಕ್ಕೆ ಈಡಾಗಿದ್ದ ಕಟ್ಟಡ ಕಾಮಿರ್ಕರು ಹಾಗೂ ಇತರೆ ಕಾರ್ಮಿಕರಿಗೆ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ ವತಿಯಿಂದ ಆಹಾರದ ಕಿಟ್‌ಗಳನ್ನು ನೀಡುತ್ತಿದ್ದು, ತಾಲೂಕಿನಲ್ಲಿರುವ ಐದು ಸಾವಿರ ಕಾರ್ಮಿಕರಿಗೆ ನೆರವಾಗಿದೆ ಎಂದು ಶಾಸಕ ಡಾ| ಅಜಯಸಿಂಗ್ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಶುಕ್ರವಾರ ಕಾರ್ಮಿಕ ಇಲಾಖೆ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಐದು ಸಾವಿರ ಕಾರ್ಮಿಕರಿಗೆ ಆಹಾರ ಧಾನ್ಯದ ಕಿಟ್ ಹಾಗೂ ಸುರûಾ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೋವಿಡ್ ಸೋಂಕು ಹರಡಿದ ಸಂದರ್ಭದಲ್ಲಿ ದೇಶದಲ್ಲಿರುವ ಲಕ್ಷಾಂತರ ಕಾರ್ಮಿಕರು ಉದ್ಯೋಗ ಕಳೆದುಕೊಂಡಿದ್ದರಿಂದ ದೈನಂದಿನ ಬದುಕು ಸಾಗಿಸಲು ತೀವ್ರ ಸಂಕಷ್ಟ ಅನುಭವಿಸಿದ್ದರು. ದುಡಿಯುವ ವರ್ಗಕ್ಕೆ ಕೋವಿಡ್ ಸೋಂಕು ಪೆಟ್ಟು ನೀಡಿದ್ದರಿಂದ ಆರ್ಥಿಕ ಸಂಕಷ್ಟ ಮಿತಿ ಮೀರಿತ್ತು. ಆದ್ದರಿಂದ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯಿಂದ ಆಹಾರದ ಕಿಟ್ ವಿತರಿಸಲಾಗುತ್ತಿದೆ.
ಪ್ರತಿಯೊಬ್ಬರು ಕಷ್ಟದಲ್ಲಿರುವ ಕಾರ್ಮಿಕರ ನೆರವಿಗೆ ಧಾವಿಸಬೇಕು. ಜಿಲ್ಲೆಯಲ್ಲಿ 1.65 ಲಕ್ಷ ನೋಂದಣಿ ಕಾರ್ಮಿಕರಿದ್ದು, ತಾಲೂಕಿನಲ್ಲಿ 16,834 ಜನ ಕಟ್ಟಡ ಕಾರ್ಮಿಕರಿದ್ದಾರೆ. ರಾಜ್ಯ ಸರ್ಕಾರದಿಂದ 5 ಸಾವಿರ ಜನರಿಗೆ ಕಿಟ್ ವಿತರಿಸಲಾಗಿದ್ದು, ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು.
ಕಾರ್ಮಿಕ ಇಲಾಖೆಯ ಸಹಾಯಕ ಆಯುಕ್ತೆ ಆರತಿ ಪೂಜಾರ, ತಹಶೀಲ್ದಾರ್ ವಿನಯಕುಮಾರ ಪಾಟೀಲ, ಕಾರ್ಮಿಕ ಇಲಾಖೆ ಅಧಿ ಕಾರಿ ಶ್ರೀಹರಿ ದೇಶಪಾಂಡೆ, ಹಿರಿಯ ಕಾರ್ಮಿಕ ನಿರೀಕ್ಷಕ ರವೀಂದ್ರಕುಮಾರ, ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ, ಪಿಎಸ್‌ಐ ಸಂಗಮೇಶ ಅಂಗಡಿ, ಜಿಪಂ ಮಾಜಿ ಉಪಾಧ್ಯಕ್ಷ ಗುರುಲಿಂಗಪ್ಪಗೌಡ ಮಾಲಿಪಾಟೀಲ ಆಂದೋಲಾ, ಜಿಪಂ ಮಾಜಿ ಸದಸ್ಯ ಖಾಸಿಂ ಪಟೇಲ ಮುದಬಾಳ, ಮುಖಂಡರಾದ ರಾಜಶೇಖರ ಸೀರಿ, ವಿಜಯಕುಮಾರ ಪಾಟೀಲ ಕಲ್ಲಹಂಗರಗಾ, ಸುಧೀಂದ್ರ ಆಲಬಾಳ, ರವಿ ಕೋಳಕೂರ, ಪರಶುರಾಮ, ಮರೆಪ್ಪ ಸರಡಗಿ, ಕಾಂತಪ್ಪ ಪೂಜಾರಿ ಚನ್ನೂರ, ಮೋಸಿನ್ ಪಟೇಲ, ರವಿಚಂದ್ರ ಗುತ್ತೇದಾರ, ಗಂಗಾಧರ ವಿಭೂತಿ ಸೇರಿದಂತೆ ಇಲಾಖೆ ಸಿಬ್ಬಂದಿ ಪಾಲ್ಗೊಂಡಿದ್ದರು.