Advertisement
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಒಲಂಪಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಕರ್ನಾಟಕದ ಹೆಮ್ಮೆಯ ಕ್ರೀಡಾಪಟು ಶ್ರೀಹರಿ ನಟರಾಜ್ ಅವರಿಗೆ ಪ್ರೋತ್ಸಾಹ ಧನ ಚೆಕ್ ವಿತರಿಸಿದರು. ಹಾಗೂ ಅಧಿತಿ ಅಶೋಕ್, ಪೌವಾದ್ ಮಿರ್ಜಾ ಇವರುಗಳಿಗೆ ಅವರ ಪರವಾಗಿ ಅವರ ಪಾಲಕರಿಗೆ ತಲಾ ಹತ್ತು ಲಕ್ಷ ರೂ. ನ ಚೆಕ್ ಅನ್ನು ಸಿಎಂ ಯಡಿಯೂರಪ್ಪ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರಾದ ಡಾ. ನಾರಾಯಣಗೌಡ ಅವರು ಹಸ್ತಾತಂತರಿಸಿ, ಶುಭಕೋರಿದರು.
Related Articles
Advertisement
ಖ್ಯಾತ ಈಜುಪಟು ಶ್ರೀಹರಿ ನಟರಾಜ್ 2016 ರಲ್ಲಿ ಸೌತ್ ಏಷಿಯನ್ ಚಾಂಪಿಯನ್ ಷಿಪ್ ನಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದರು. 2017 ರಲ್ಲಿ ಉಜೇಕಿಸ್ಥಾನ್ ನದಲ್ಲಿ ನಡೆದ 9ನೇ ಏಷಿಯನ್ ಚಾಂಪಿಯನ್ ಷಿಪ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. 2018 ರಲ್ಲಿ ಜಕಾರ್ತದಲ್ಲಿ ನಡೆದ ಏಷಿಯನ್ ಗೇಮ್ಸ್ ನಲ್ಲಿ ಪಾಲ್ಗೊಂಡಿದ್ದಾರೆ. 2016 ರಲ್ಲಿ ರಾಂಚಿಯಲ್ಲಿ ಆಯೋಜಿಸಿದ್ದ 70ನೇ ಸೀನಿಯರ್ ಚಾಂಪಿಯನ್ ಷಿಪ್ ನಲ್ಲಿ ಕಂಚು, 2017 ರಲ್ಲಿ ಇಂದೋರ್‌ನಲ್ಲಿ ನಡೆದ 71 ನೇ ಸೀನಿಯರ್ ನ್ಯಾಷನಲ್ ಚಾಂಪಿಯನ್ ಷಿಪ್‌ನಲ್ಲಿ ಚಿನ್ನ, ಹಾಗೂ 2018 ರಲ್ಲಿ ಕೇರಳದಲ್ಲಿ ನಡೆದ 72ನೇ ಸೀನಿಯರ್ ನ್ಯಾಷನಲ್ ಚಾಂಪಿಯನ್ ಷಿಪ್‌ನಲ್ಲಿ ಚಿನ್ನದ ಪದಕವನ್ನು ಪಡೆದಿದ್ದಾರೆ. ಪ್ರಸ್ತುತ ಟೋಕಿಯೋ ಓಲಂಪಿಕ್‌ಗೆ ಶ್ರೀಹರಿ ನಟರಾಜ್ ಆಯ್ಕೆಯಾಗಿದ್ದಾರೆ.
ಈಕ್ವೆಸ್ಟಿಯನ್ ಪಟು ಫೌವಾದ್ ಮಿರ್ಜಾ 2018ರಲ್ಲಿ ನಡೆದ 18ನೇ ಏಷಿಯನ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಗೆದಿದ್ದು, ಈಗ ಟೋಕಿಯೋ ಓಲಂಪಿಕ್‌ಗೆ ಅರ್ಹತೆ ಪಡೆದಿದ್ದಾರೆ.
ಈಜುಪಟು ಶ್ರೀಹರಿ ನಟರಾಜ್ ಹಾಗೂ ತರಬೇತುದಾರರು ಹಾಗೂ ಪಾಲಕರನ್ನು ಮುಖ್ಯಮಂತ್ರಿಗಳು ಗೌರವಿಸಿದರು. ಇದೇ ವೇಳೆ ಭಾರತ ತಂಡದ ಜೆರ್ಸಿಯನ್ನು ಮುಖ್ಯಮಂತ್ರಿಗಳು ಅನಾವರಣಗೊಳಿಸಿದರು. ಬಳಿಕ ಓಲಂಪಿಕ್ ನಲ್ಲಿ ಪಾಲ್ಗೊಂಡ ಕ್ರೀಡಾಪಟುಗಳಿಗೆ ಸೆಲ್ಫಿ ಪ್ರೇಮ್ ನಲ್ಲಿ ನಿಂತು ಸಿಎಂ ಹಾಗೂ ಸಚಿವರು ಚಿಯರಪ್ ಮಾಡಿದರು.
ಕರ್ನಾಟಕ ಓಲಂಪಿಕ್ ಅಸೋಸಿಯೇಶನ್ ಅಧ್ಯಕ್ಷ ಗೋವಿಂದರಾಜ್, ಅಪರಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಕ್ರೀಡಾ ಇಲಾಖೆ ಆಯುಕ್ತ ಡಾ. ಗೋಪಾಲಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.