Advertisement

ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ವಿತರಣೆ

06:44 AM Jun 12, 2020 | Lakshmi GovindaRaj |

ತುಮಕೂರು: ಕೋವಿಡ್‌ 19 ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿ ನಿಂತಿರುವ ಆರೋಗ್ಯ ಇಲಾಖೆ ಸಿಬ್ಬಂದಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರ ಕಾರ್ಯ ಮೆಚ್ಚುವಂತದ್ದು ಎಂದು ಜಿಲ್ಲಾ ಉಸ್ತುವಾರಿ  ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು. ನಗರದ ಕನ್ನಡ ಭವನದಲ್ಲಿ ತುಮಕೂರು ಜಿಲ್ಲಾ ಸಹಕಾರ ಮತ್ತು ತುಮಕೂರು ಹಾಲು ಒಕ್ಕೂಟ, ಆರೋಗ್ಯ ಇಲಾಖೆ ಹಾಗೂ ಇತರೆ ಜಿಲ್ಲಾ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ನಡೆದ  ಕಾರ್ಯಕ್ರಮದಲ್ಲಿ ಕೋವಿಡ್‌ 19 ಸೋಂಕು ತಡೆಗಟ್ಟುವಲ್ಲಿ ಶ್ರಮಿಸಿದ ಆಶಾ ಕಾರ್ಯಕರ್ತೆಯರಿಗೆ ಮೂರು ಸಾವಿರ ಪ್ರೋತ್ಸಾಹ ಧನ ವಿತರಿಸಿ ಮಾತನಾಡಿದರು.

Advertisement

ಪ್ರೋತ್ಸಾಹ ಧನ: ಇಂತಹ ಮಹಾನ್‌ ಕಾರ್ಯದಲ್ಲಿ ಆಶಾ  ಕಾರ್ಯಕರ್ತೆಯರು ಶ್ರಮಿಸಿರುವುದು ಶ್ಲಾಘನೀಯ. ಅದಕ್ಕಾಗಿ ಸರ್ಕಾರ ರಾಜ್ಯದ ಪ್ರತಿಯೊಬ್ಬ ಆಶಾ ಕಾರ್ಯಕರ್ತೆಯರಿಗೂ ಮೂರು ಸಾವಿರ ಪ್ರೋತ್ಸಾಹಧನವನ್ನು ನೀಡುತ್ತಿದೆ ಎಂದರು. ಜಿಲ್ಲೆಯಲ್ಲಿ ಕಳೆದ 2 ತಿಂಗಳ ಕಾಲ ತಮ್ಮ ಯೋಗಕ್ಷೇಮ ಮರೆತು ಮನೆ-ಮನೆಗೆ ಭೇಟಿ ಮಾಡಿ ಕುಟುಂಬ ಸದಸ್ಯರ ಆರೋಗ್ಯ ಸಮೀಕ್ಷೆ ನಡೆಸಿ ಪ್ರತಿಯೊಬ್ಬರ ಮಾಹಿತಿಯನ್ನು ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತಕ್ಕೆ ನೀಡಿದ್ದಾರೆ ಎಂದರು.

ನೇರವಾಗಿ ಖಾತೆಗೆ ಹಣ: ಸಹಕಾರ  ಇಲಾಖೆ ಸಚಿವ ಎಸ್‌.ಟಿ ಸೋಮಶೇಖರ್‌ ಮಾತನಾಡಿ, ಜಿಲ್ಲೆಯ ಉಸ್ತುವಾರಿ ಸಚಿವರ ಖಡಕ್‌ ನಿರ್ದೇಶನ, ಜಿಲ್ಲಾಡಳಿತ ಅನುಸರಿಸಿದ ಕ್ರಮಗಳಿಂದ ತುಮಕೂರು ಜಿಲ್ಲೆಯಲ್ಲಿ ಕೋವಿಡ್‌ 19 ನಿಯಂತ್ರಣದಲ್ಲಿ ಯಶಸ್ವಿಯಾಗಿದೆ ಎಂದರು. ಅಲ್ಲದೇ ರಾಜ್ಯಾದ್ಯಂತ 40,250 ಆಶಾ ಕಾರ್ಯ  ಕರ್ತೆಯರಿದ್ದು, ಪ್ರತಿಯೊಬ್ಬರಿಗೂ 3 ಸಾವಿರ ರೂ. ಗಳಂತೆ ಸುಮಾರು 12.7 ಕೋಟಿ ರೂ.ಗಳನ್ನು ಹಣವನ್ನು ಸಹಕಾರ ಇಲಾಖೆ ವತಿಯಿಂದ ಪ್ರತಿ ಆಶಾ  ಕಾರ್ಯಕರ್ತೆಯರಿಗೆ ನೇರವಾಗಿ ಖಾತೆಗೆ ಜಮೆ ಮಾಡಲಾಗುತ್ತಿದೆ.

ಆಯಾ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಇದಕ್ಕೆ ಜಿಲ್ಲಾ ಮಟ್ಟದ ಸಹಕಾರಿ ಸಂಘಗಳು, ಡೇರಿ ಇನ್ನಿತರೆ ಸಹಕಾರ ಸಂಘಗಳು ಸಹಕಾರ ನೀಡುತ್ತಿವೆ. ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಆಶಾ  ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ನೀಡಲಾಗುವುದು. ಮುಂದಿನ ದಿನಗಳಲ್ಲಿ ಉಳಿದ ಆಶಾ ಕಾರ್ಯ ಕರ್ತೆಯರ ಖಾತೆಗೆ ಜಮೆ ಮಾಡಲಾಗುವುದು ಎಂದು ತಿಳಿಸಿದರು.

ಪ್ರಾಣದ ಹಂಗು ತೊರೆದು ಕಾರ್ಯನಿರ್ವಹಣೆ: ಸಂಸದ ಜಿ.ಎಸ್‌ ಬಸವರಾಜು ಮಾತನಾಡಿ, ಕೋವಿಡ್‌ 19 ಹೋರಾಟದಲ್ಲಿ ಆಶಾ ಕಾರ್ಯಕರ್ತೆ ಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿ ಪ್ರಾಣದ  ಹಂಗು ತೊರೆದು ಕಾರ್ಯನಿರ್ವಹಿಸಿದ್ದಾರೆ. ದೇಶದಲ್ಲಿ ಕೋವಿಡ್‌ 19 ನಿಯಂತ್ರಣಕ್ಕಾಗಿ ಪ್ರಧಾನ ಮಂತ್ರಿಗಳು ಕರ್ಫ್ಯೂ, ಲಾಕ್‌ಡೌನ್‌ ಮಾಡಿದ್ದರಿಂದ ದೇಶ ದಲ್ಲಿಯೇ ಕೋವಿಡ್‌ 19 ಸಾವಿನ ಸಂಖ್ಯೆ ಕಡಿಮೆಯಾಗಿದೆ.

Advertisement

ಇದಕ್ಕೆ ಜನರು ಉತ್ತಮ  ಸ್ಪಂದನೆ ನೀಡಿದ್ದಾರೆ ಎಂದು ತಿಳಿಸಿದರು. ಜಿಲ್ಲೆಯ 101 ಆಶಾ ಕಾರ್ಯಕರ್ತೆಯರಿಗೆ ಪ್ರಶಂಸನಾ ಪತ್ರ ಹಾಗೂ ಪ್ರೋತ್ಸಾಹಧನ ವಿತರಿಸಿದರು ಹಾಗೂ ಬೀದಿ ಬದಿ ವ್ಯಾಪಾರಿಗಳಿಗೆ ಚೆಕ್‌ ವಿತರಣೆ ಮಾಡಿದರು. ನಗರಾಭಿವೃದಿ ಸಚಿವ  ಭೈರತಿ ಬಸವರಾಜು, ಮಾಜಿ  ವಿಧಾನ ಪರಿಷತ್‌ ಸದಸ್ಯ ಹುಲಿನಾಯ್ಕರ್‌, ಡಿಸಿಸಿಬ್ಯಾಂಕ್‌ ಅಧ್ಯಕ್ಷ ಕೆ.ಎನ್‌ ರಾಜಣ್ಣ, ಜಿಲ್ಲಾಧಿಕಾರಿ ಡಾ. ಕೆ.ರಾಕೇಶ್‌ಕುಮಾರ್‌ ಮೊದಲಾದವರಿ ಕಾರ್ಯ ಕ್ರಮದಲ್ಲಿ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next