Advertisement

2 ಲಕ್ಷ ಹೊಸ ರೈತರಿಗೆ ಬಡ್ಡಿ ರಹಿತ ಸಾಲ ವಿತರಣೆ

02:58 PM Oct 18, 2021 | Team Udayavani |

ಯಾದಗಿರಿ: ಕಲಬುರಗಿ-ಯಾದಗಿರಿ ಜಿಲ್ಲೆಗಳಲ್ಲಿರುವ ಸಣ್ಣ ಮತ್ತು ಮಧ್ಯಮ ವರ್ಗದ 2 ಲಕ್ಷ ಹೊಸ ರೈತರಿಗೆ 3 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ನೀಡುವ ಗುರಿ ಹೊಂದಿದ್ದೇವೆ ಎಂದು ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಡಾ| ಸುರೇಶ ಸಜ್ಜನ್‌ ಹೇಳಿದರು.

Advertisement

ಹತ್ತಿಕುಣಿ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಆವರಣದಲ್ಲಿ ಸಂಘವು ಹಮ್ಮಿಕೊಂಡಿದ ಸಂಘದ 2020-21ನೇ ಸಾಲಿನ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಕಲಬುರಗಿ-ಯಾದಗಿರಿ ಡಿಸಿಸಿ ಬ್ಯಾಂಕ್‌ ಈ ಹಿಂದೆ 56 ಕೋಟಿ ರೂ. ನಷ್ಟದಲ್ಲಿತ್ತು. ಹೊಸ ಆಡಳಿತ ಮಂಡಳಿ ಅಸ್ಥಿತ್ವಕ್ಕೆ ಬಂದ ಮೇಲೆ ಎಲ್ಲ ಶಾಸಕರ ಜೊತೆಗೂಡಿ ನಿಯೋಗ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ರೈತರ ವಾಸ್ತವಿಕ ಪರಿಸ್ಥಿತಿ ವಿವರಿಸಿದ ನಂತರ ತಕ್ಷಣ ಅಪೇಕ್ಸ್‌ ಬ್ಯಾಂಕ್‌ನಿಂದ 200 ಕೋಟಿ ರೂ. ಬಿಡುಗಡೆ ಮಾಡಿದರು ಎಂದು ತಿಳಿಸಿದರು.

ಸಂಘವು ಜಿಲ್ಲೆಯಲ್ಲಿಯೇ ಕ್ರಿಯಾಶೀಲವಾಗಿ ಕೆಲಸ ಮಾಡಿಕೊಂಡು ಬಂದಿದೆ. ಈ ವರ್ಷ 19 ಲಕ್ಷ ರೂ. ಆದಾಯ ಗಳಿಸಿರುವುದು ಸಂತಸ. ಕೇಂದ್ರ ಬ್ಯಾಂಕ್‌ನಿಂದ 199 ರೈತರಿಗೆ 1.14 ಕೋಟಿ ರೂ. ಬೆಳೆ ಸಾಲ ನೀಡಲಾಗಿದೆ. ರೈತರು ಸಕಾಲಕ್ಕೆ ಸಾಲ ಮರುಪಾವತಿಸಬೇಕು. ಅಂದಾಗ ಮಾತ್ರ ಸಂಘಗಳು ಆರ್ಥಿಕವಾಗಿ ಬದಲಾವಣೆಯಾಗುವ ಜೊತೆಗೆ ಇತರ ರೈತರಿಗೆ ಸಾಲ ನೀಡಲು ಅನುಕೂಲವಾಗುತ್ತದೆ ಎಂದು ಹೇಳಿದರು.

ಕೇಂದ್ರ ಬ್ಯಾಂಕ್‌ ನಿರ್ದೇಶಕ ಸಿದ್ರಾಮರೆಡ್ಡಿ ಪಾಟೀಲ್‌ ಕೌಳೂರ್‌ ಮಾತನಾಡಿ, ಎರಡು ತಾಲೂಕುಗಳ ರೈತರಿಗೆ ಆರ್ಥಿಕ ನೆರವು ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಅಲ್ಲದೇ ಇನ್ನೂ ಅಗತ್ಯ ಇರುವ ಕಡೆ ಸಹಕಾರ ಸಂಘಗಳ ಸ್ಥಾಪನೆಗೆ ಗಮನ ಹರಿಸಲಾಗುವುದು. ಇದರಿಂದ ಆ ಭಾಗದ ರೈತರಿಗೆ ಸಹಾಯಕವಾಗಲಿದೆ ಎಂದು ತಿಳಿಸಿದರು.

Advertisement

ಸಂಘದ ಅಧ್ಯಕ್ಷ ಮಹಿಪಾಲರೆಡ್ಡಿ ಪಾಟೀಲ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲರ ಸಹಕಾರದಿಂದ ಸರ್ಕಾರದ ಯೋಜನೆಗಳ ಲಾಭ ರೈತರಿಗೆ ತಲುಪಿಸಿದ್ದೇವೆ. ಸಂಘದ ಅಭಿವೃದ್ಧಿಗೆ ಒತ್ತು ನೀಡಿದ್ದೇವೆ ಎಂದು ತಿಳಿಸಿದರು.

ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಂಜೀವಕುಮಾರ ಪುಟಗಿ ವಾರ್ಷಿಕ ವರದಿ ವಾಚಿಸಿದರು. ಸಮಾರಂಭದಲ್ಲಿ ಮಹಿಳಾ ಸ್ವಸಹಾಯ ಸಂಘದ ಅಧ್ಯಕ್ಷ- ಕಾರ್ಯದರ್ಶಿ, ಹಣಸಂಗ್ರಹಗಾರರನ್ನು ಮತ್ತು ಠೇವಣಿದಾರರನ್ನು ಸನ್ಮಾನಿಸಲಾಯಿತು. ಸಂಘದ ಉಪಾಧ್ಯಕ್ಷ ತಿಮ್ಮಣ್ಣ ಇದ್ಲಿ, ಸಂಘದ ನಿರ್ದೇಶಕರಾದ ಶರಣಪ್ಪಗೌಡ ಮಾಲಿ ಪಾಟೀಲ್‌, ಅಮೀನರಡ್ಡಿ ಬಿಳ್ಹಾರ್‌, ಶರಣಪ್ಪ ಸೋಮಣೋರ್‌, ಬೋಜನಗೌಡ ಯಡ್ಡಳ್ಳಿ, ದೇವಿಂದ್ರಪ್ಪಗೌಡ ಪಾಟೀಲ್‌, ಸಾಬರಡ್ಡಿ ತಮ್ಮಣೋರ್‌, ಹಣಮವ್ವ ಸಾಬಣ್ಣ, ಗ್ರಾ.ಪಂ ಅಧ್ಯಕ್ಷ ಮಲ್ಲಿಕಾರ್ಜುನ, ಶರಣಪ್ಪ ಸಾಹು ಗಡೇದ್‌, ಬಸವರಾಜಪ್ಪ ನಾಯಕ, ಭೀಮರೆಡ್ಡಿ ರಾಂಪೂರಳ್ಳಿ, ಬಸವರಾಜ ಬಾಚವಾರ್‌, ಖುದಾನ ಸಾಬ್‌, ಕೆವೈಡಿಸಿಸಿ ಯಾದಗಿರಿ ವ್ಯವಸ್ಥಾಪಕರಾದ ಮಹ್ಮದ್‌ ರಫೀಕ್, ಸಹಕಾರ ಇಲಾಖೆ ಉಪನಿರ್ದೇಶಕ ಗೋವಿಂದಪ್ಪ ಸೇಡಂ ಸೇರಿದಂತೆ ಇತರರು ಇದ್ದರು. ಸಾಬಣ್ಣ ಯಾದಗಿರಿ ಸ್ವಾಗತಿಸಿ, ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next