Advertisement

ಜೂನ್‌ ಪಡಿತರ ವಿತರಣೆ

06:56 AM Jun 11, 2020 | Suhan S |

ಗದಗ: ಕೋವಿಡ್‌ -19ರ ತಡೆಗಟ್ಟುವ ಹಿನ್ನೆಲೆಯಲ್ಲಿ ಆರ್ಥಿಕ ಕ್ರಮಗಳ ಪ್ರಯುಕ್ತ ರಾಜ್ಯ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಮತ್ತು ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆ ಮತ್ತು ಆತ್ಮ ನಿರ್ಭರ್‌ ಭಾರತ ಯೋಜನೆಯಡಿ ಪಡಿತರ ಆಹಾರ ಧಾನ್ಯ ನೀಡುತ್ತಿದ್ದು, ಜೂನ್‌ ತಿಂಗಳ ಪಡಿತರ ಧಾನ್ಯಗಳನ್ನು ಬಿಡುಗಡೆ ಮಾಡಲಾಗಿದೆ.

Advertisement

ಅಂತ್ಯೋದಯ ಪಡಿತರ ಚೀಟಿ ಹೊಂದಿದ ಪ್ರತಿ ಕುಟುಂಬಕ್ಕೆ ಉಚಿತವಾಗಿ 35 ಕೆ.ಜಿ. ಅಕ್ಕಿ (ಎನ್‌ಎಫ್‌ಎಸ್‌ಎ ಯೋಜನೆ ಅಡಿ) ಪ್ರತಿ ಸದಸ್ಯರಿಗೆ 5 ಕೆ.ಜಿ. ಅಕ್ಕಿ) ಹಾಗೂ ಪ್ರತಿ ಕುಟುಂಬಕ್ಕೆ 2 ಕೆ.ಜಿ. ತೊಗರಿಬೇಳೆ ನೀಡಲಾಗುತ್ತಿದೆ. ಬಿಪಿಎಲ್‌ ಪಡಿತರ ಚೀಟಿಗೆ ಉಚಿತವಾಗಿ 10 ಕೆ.ಜಿ. ಅಕ್ಕಿ ಹಾಗೂ ಪ್ರತಿ ಕುಟುಂಬಕ್ಕೆ 2 ಕೆ.ಜಿ. ಗೋಧಿ  ಹಾಗೂ 2 ಕೆ.ಜಿ. ತೊಗರಿಬೇಳೆ ವಿತರಿಸಲಾಗುತ್ತಿದೆ. ಜೂನ್‌ ತಿಂಗಳಲ್ಲಿ ನ್ಯಾಯಬೆಲೆ ಅಂಗಡಿಕಾರರು ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ನ್ಯಾಯ ಬೆಲೆ ಅಂಗಡಿ ತೆರೆದು, ಪಡಿತರ ಧಾನ್ಯ ವಿತರಣೆ ಮಾಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next