Advertisement

Congress ಅಭ್ಯರ್ಥಿ ಮೆರವಣಿಗೆಯಲ್ಲಿ ಹಣ ಹಂಚಿದ ವಿಡಿಯೋ ವೈರಲ್

11:36 PM Apr 15, 2024 | Vishnudas Patil |

ವಿಜಯಪುರ : ವಿಜಯಪುರ ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆಗಾಗಿ ಕಾಂಗ್ರೆಸ್ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಮಹಿಳೆಯರಿಗೆ ಹಣ ಹಂಚಿದ ವಿಡಿಯೋ ವೈರಲ್ ಆಗಿದೆ.

Advertisement

ಸೋಮವಾರ ಕಾಂಗ್ರೆಸ್ ಅಭ್ಯರ್ಥಿ ರಾಜು ಆಗಲೂರ ಕಾಂಗ್ರೆಸ್ ಬೃಹತ್ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಲು ಹೊರಟಿದ್ದಾಗ ಮೆರವಣಿಗೆಯಲ್ಲಿ ನೃತ್ಯದಲ್ಲಿ ಪಾಲ್ಗೊಂಡಿದ್ದ ಮಹಿಳೆಯರಿಗೆ ವ್ಯಕ್ತಿಯೊಬ್ಬ ಕೈಲ್ಲಿ ಕಂತೆ ಹಣ ಹಿಡಿದು ನೋಟುಗಳನ್ನು ಹಂಚಿಕೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ.

ವಿಜಯಪುರ ನಗರದ ಸಿದ್ದೇಶ್ವರ ದೇಗುಲದಿಂದ ಅಂಬೇಡ್ಕರ್ ವೃತ್ತದವರೆಗೆ ನಡೆದ ಬೃಹತ್ ಮೆರವಣಿಗೆ ನಡೆದಾಗ ನೃತ್ಯ ಮಾಡುತ್ತಿದ್ದ ಪ್ರತಿಯೊಬ್ಬ ಲಂಬಾಣಿ ಮಹಿಳೆಯರಿಗೆ ವ್ಯಕ್ತಿಯೊಬ್ಬ ಹಣ ಹಂಚಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಈ ಕುರಿತು ದೂರು ದಾಖಲಾಗಿರುವ ಕುರಿತು ಜಿಲ್ಲಾ ಚುನಾವಣಾಧಿಕಾರಿ ಭೂಬಾಲನ್ ಅವರಿಂದ ಮಾಧ್ಯಮವರು ಸ್ಪಷ್ಟೀಕರಣ ಕೇಳಿದ್ದು, ಅಂಥ ವಿಡಿಯೋ ಇದ್ದರೆ ತಮಗೆ ಹಂಚಿಕೊಳ್ಳಿ ಎಂದು ಮನವಿ ಮಾಡಿದ್ದು, ವಿಡಿಯೋ ಲಭ್ಯವಾದಲ್ಲಿ ಎಂ.ಸಿ.ಸಿ. ತಂಡದಿಂದ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next