Advertisement
ಶಾಸಕ ಕೆ. ರಘುಪತಿ ಭಟ್ ಎರಡೂ ವಾರ್ಡ್‌ಗಳ ಫಲಾನುಭವಿಗಳ ಮನೆ ಮನೆಗೆ ತೆರಳಿ ಹಕ್ಕುಪತ್ರ ನೀಡಲಿರುವರು. ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ಸ್ಥಳೀಯ ವಾರ್ಡ್‌ಗಳ ನಗರಸಭಾ ಸದಸ್ಯರಾದ ಎಡ್ಲಿನ್ ಕರ್ಕಡ, ವಿಜಯ ಕುಂದರ್ ಹಾಗೂ ಪ್ರಮುಖ ಗಣ್ಯರು ಪಾಲ್ಗೊಳ್ಳಲಿದ್ದಾರೆ.
2013ರಲ್ಲಿ ರಾಜ್ಯದಲ್ಲಿ ಮೊದಲ ಬಾರಿಗೆ ನಿವೇಶನವನ್ನು ಸರ್ವೇ ನಂಬರ್ ಸಹಿತ ಕಂದಾಯ ಇಲಾಖೆಯಲ್ಲಿ ದಾಖಲಿಸಿ, ಅಧಿಸೂಚನೆಯನ್ನು ಹೊರಡಿಸಿ 358 ಕುಟುಂಬಗಳಿಗೆ ಪ್ರಾರಂಭಿಕ ಹಂತದಲ್ಲಿ ಹಕ್ಕು ಪತ್ರ ನೀಡಲಾಗಿತ್ತು. ಸಿಆರ್‌ಝಡ್‌ನ ನಿಯಮಾವಳಿಯಲ್ಲಿನ ಸಮಸ್ಯೆಯಿಂದಾಗಿ 143 ಕುಟುಂಬಗಳಿಗೆ ಹಕ್ಕುಪತ್ರ ನೀಡುವಲ್ಲಿ ತೊಡಕುಂಟಾಗಿತ್ತು. ಈ ಸಮಸ್ಯೆಯನ್ನು ಬಗೆಹರಿಸಿ ವಿಶೇಷ ಪ್ರಕರಣದಡಿಯಲ್ಲಿ ಖಾಯಂ ನಿವೇಶನ ಹಕ್ಕುಪತ್ರವನ್ನು 2ನೇ ಹಂತದಲ್ಲಿ ನೀಡಲಾಗುತ್ತದೆ. ಇದನ್ನೂ ಓದಿ: