Advertisement
ಜ.1ರಂದು ದೇವಸ್ಥಾನಕ್ಕೆ ಬರುವ ಭಕ್ತರಿಗೆ ಲಾಡುಗಳನ್ನು ವಿತರಿಸಲಾಗುತ್ತಿದ್ದು, ಅದಕ್ಕಾಗಿ ತಿರುಪತಿ ಮಾದರಿಯ 2 ಲಕ್ಷ ಲಾಡುಗಳು ಸಿದ್ಧವಾಗುತ್ತಿವೆ. ಅಂದು ಬೆಳಗ್ಗೆ 4 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಭಕ್ತಾದಿಗಳಿಗೆ ಲಾಡು ಗಳನ್ನು ವಿತರಿಸುವ ಕಾರ್ಯಕ್ರಮ ನಡೆಯಲಿದೆ ಎಂದು ಯೋಗಾನರಸಿಂಗಸ್ವಾಮಿ ದೇಗುಲದ ಸಂಸ್ಥಾಪಕ ಪ್ರೊ.ಭಾಷ್ಯಂ ಸ್ವಾಮೀಜಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
Related Articles
Advertisement
ಈ ವರ್ಷ ಅಂದಾಜು 2 ಕೆ.ಜಿ. ತೂಕದ 15 ಸಾವಿರ ಲಾಡುಗಳು ಹಾಗೂ 150 ಗ್ರಾಂ ತೂಕದ 2 ಲಕ್ಷ ಲಾಡುಗಳನ್ನು ದೇವಾಲಯಕ್ಕೆ ಬರುವ ಎಲ್ಲಾ ಭಕ್ತಾದಿಗಳಿಗೆ ಯಾವುದೇ ಜಾತಿ, ಮತ ಭೇದವಿಲ್ಲದೆ ಉಚಿತವಾಗಿ ವಿತರಿಸಲಾಗುವುದು. ಲಾಡು ಪ್ರಸಾದವನ್ನು ವಿಶೇಷವಾಗಿ 60 ಮಂದಿ ನುರಿತ ಬಾಣಸಿಗರಿಂದ ತಯಾರಿಸಲಾಗಿದ್ದು, ಡಿ.20 ರಿಂದ ಪ್ರಾರಂಭಿಸಿ 31ರವರೆಗೂ ಲಾಡು ತಯಾರಿ ಕಾರ್ಯ ನಡೆಯುತ್ತಿದೆ ಎಂದರು.
ವಿಶ್ವಶಾಂತಿ, ಜಾತೀಯತೆ, ಮತೀ ಯತೆ ತೊಲಗಿಸಿ ಸಮಾನತೆ, ಸರ್ವಧರ್ಮ ಸಮನ್ವಯತೆ ಆಚರಿಸುವ ಸಲುವಾಗಿ ಹೊಸ ವರ್ಸಾಚರಣೆ ಮಾಡಲಾಗುತ್ತಿದೆ. ವರ್ಷವನ್ನು ಒಳ್ಳೆಯ ಕಾರ್ಯದ ಮೂಲಕ ಆರಂಭಿಸಬೇಕಿರುವ ಹಿನ್ನೆಲೆಯಲ್ಲಿ ವಿಶೇಷ ಸಂಕಲ್ಪ ಮಾಡಿ ಸಾರ್ವಜನಿಕರಿಗೆ ಸಿಹಿ ವಿತರಿಸಲಾಗುತ್ತಿದೆ.-ಪ್ರೊ.ಭಾಷ್ಯಂ ಸ್ವಾಮೀಜಿ, ದೇವಸ್ಥಾನದ ಸಂಸ್ಥಾಪಕ
ರಾಜಕುಮಾರ್ ದಂಪತಿಗಳ ಪ್ರೇರಣೆ ಯಿಂದ 1994ರಲ್ಲಿ 1 ಸಾವಿರ ಲಾಡು ವಿತರಣೆಯೊಂದಿಗೆ ಆರಂಭವಾದ ಈ ಸೇವೆ ಇಂದು 2 ಲಕ್ಷ ಲಾಡು ವಿತರಣೆ ಯೊಂದಿಗೆ ನಿರಾಂತಕವಾಗಿ ನಡೆಯುತ್ತಿದೆ. ಕೊರೊನಾ ಅಲೆ ಮತ್ತೆ ಬಂದಿರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸ ಬೇಕು. ಹಿರಿಯ ನಾಗರಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಬರಬೇಕು.-ಎನ್.ಶ್ರೀನಿವಾಸನ್, ದೇವಸ್ಥಾನದ ಆಡಳಿತಾಧಿಕಾರಿ