Advertisement

Govt School 45.45 ಲಕ್ಷ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಶೂ, ಸಾಕ್ಸ್‌ ವಿತರಣೆ

11:14 PM Dec 11, 2023 | Team Udayavani |

ಬೆಳಗಾವಿ: ರಾಜ್ಯದ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 55.43 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾ ವಿಕಾಸ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಉಚಿತವಾಗಿ ಪಠ್ಯಪುಸ್ತಕ ಮತ್ತು 45.45 ಲಕ್ಷ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಶೂ ಹಾಗೂ ಸಾಕ್ಸ್‌ಗಳನ್ನು ವಿತರಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್‌.ಮಧು ಬಂಗಾರಪ್ಪ ಹೇಳಿದರು.

Advertisement

ವಿಧಾನ ಪರಿಷ‌ತ್‌ನಲ್ಲಿ ಸೋಮವಾರ ಪ್ರಶ್ನೋತ್ತರ ವೇಳೆಯಲ್ಲಿ ಎನ್‌.ರವಿಕುಮಾರ್‌ ಪ್ರಶ್ನೆಗೆ ಉತ್ತರಿಸಿದ ಸಚಿವರು, 2023-24ನೇ ಸಾಲಿಗೆ ಪ್ರತಿ ವಿದ್ಯಾರ್ಥಿಗೆ ಪಠ್ಯ ಪುಸ್ತಕಕ್ಕೆ ಸರಾಸರಿ 397 ರೂ. ವ್ಯಯಿಸಲಾಗಿದೆ. ಶೂ ಮತ್ತು ಸಾಕ್ಸ್‌ಗಳಿಗೆ 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ತಲಾ 265 ರೂ., 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ 295 ರೂ., 9ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ 325 ರೂ.ಗಳನ್ನು ಖರ್ಚು ಮಾಡಲಾಗಿದೆ. 1ರಿಂದ 10ನೇ ತರಗತಿವರೆಗೆ ಗಂಡು ಮಕ್ಕಳು ಮತ್ತು ಹೆಣ್ಣು ಮಕ್ಕಳಿಗೆ ತಲಾವಾರು ವೆಚ್ಚ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

 

Advertisement

Udayavani is now on Telegram. Click here to join our channel and stay updated with the latest news.

Next