Advertisement
ನಗರದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಚುನಾವಣೆ ಘೋಷಣೆಯಾದ ಮಾ.10 ರ ಸಂಜೆಯಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಮೇ.23ರ ವರೆಗೂ ನೀತಿ ಸಂಹಿತೆ ಇರುತ್ತದೆ. ನೀತಿ ಸಂಹಿತೆ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಲಿದ್ದು, ನೀತಿ ಸಂಹಿತೆ ಉಲ್ಲಂಘಟನೆ ಪ್ರಕರಣಗಳಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
Related Articles
Advertisement
ಗೌರಿಬಿದನೂರಿಗೆ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಕುಮಾರಸ್ವಾಮಿ ಎಸ್.ಆರ್, ಬಾಗೇಪಲ್ಲಿಗೆ ನಗರಾಭಿವೃದ್ಧಿ ಯೋಜನಾ ನಿರ್ದೇಶಕರಾದ ನಟರಾಜ್, ಚಿಕ್ಕಬಳ್ಳಾಪುರಕ್ಕೆ ಉಪ ವಿಭಾಗಾಧಿಕಾರಿ ಬಿ.ಶಿವಸ್ವಾಮಿ ಅವರನ್ನು ಸಹಾಯಕ ಚುನಾವಣಾಧಿಕಾರಿಗಳಾಗಿ ನೇಮಿಸಲಾಗಿದೆ ಎಂದರು.
ಸೂಕ್ಷ್ಮ ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್: ಕ್ಷೇತ್ರದಲ್ಲಿ ಅತ್ಯಂತ ಸೂಕ್ಷ್ಮ ಮತಗಟ್ಟೆಗಳಿಗೆ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮತ್ತು ಮೈಕ್ರೋ ವೀಕ್ಷಕರನ್ನು ನೇಮಕ ಮಾಡಲು ಕ್ರಮಕೈಗೊಳ್ಳಲಾಗಿದೆ. ಜಿಲ್ಲಾ ಮಟ್ಟದಲ್ಲಿ ಎಂಸಿಎಂಸಿ ಸಮಿತಿ ಸ್ಥಾಪನೆ ಮಾಡಲಾಗಿದೆ. ಹೆಚ್ಚುವರಿಯಾಗಿ ಚುನಾವಣಾಧಿಕಾರಿಗಳ ಕಚೇರಿಗೆ ಸಹಾಯಕ ವೆಚ್ಚ ನಿರ್ವಹಣಾಧಿಕಾರಿಗಳು ಮತ್ತು ಲೆಕ್ಕಿಗರ ತಂಡವನ್ನು ನೇಮಕ ಮಾಡಲಾಗಿದೆ.
ಜಿಲ್ಲೆಯಲ್ಲಿ ಒಟ್ಟು 10,11,717 ಮತದಾರರಿದ್ದು, ಆ ಪೈಕಿ 5,05,104 ಪುರುಷ, , 506,488 ಮಹಿಳೆ ಹಾಗೂ ಇತರೆ 125 ಮತದಾರರು ಇದ್ದಾರೆ. ಜಿಲ್ಲೆಯಲ್ಲಿ ಒಟ್ಟು 45 ಅಧಿಕಾರಿಗಳನ್ನು ಫ್ಲೆಯಿಂಗ್ ಸ್ಕ್ವಾಡ್, 106 ಸೆಕ್ಟರ್ ಅಧಿಕಾರಿಗಳನ್ನು 11 ವಿಎಸ್ಟಿಟಿಗೆ ಐವರನ್ನು ನೇಮಿಸಲಾಗಿದೆ ಎಂದರು.
ಅರಿವು ಮೂಡಿಸಲು ಕ್ರಮ: ಜಿಪಂ ಸಿಇಒ ಗುರುದತ್ತ ಹೆಗಡೆ ಮಾತನಾಡಿ, ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕೆ ಶಾಲಾ ಕಾಲೇಜುಗಳಲ್ಲಿ, ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಿಲ್ಲಾದ್ಯಂತ ಗಾಯನ, ಬೀದಿ ನಾಟಕಗಳ ಪ್ರದರ್ಶನ, ರಂಗೋಲಿ, ಪ್ರಬಂಧ ಸ್ಪರ್ಧೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ರೂಪರೇಷೆಗಳನ್ನು ಸಿದ್ಧಪಡಿಸಲಾಗಿದೆ ಎಂದರು.
ಜಿಪಂ ಮೂಲಕ ಉದ್ಯೋಗ ಖಾತ್ರಿ ಹಾಗೂ ಬರ ನಿರ್ವಹಣೆಗೆ ಕುಡಿಯುವ ನೀರಿನ ಯೋಜನೆಗಳನ್ನು ಅನುಷ್ಠಾನಗೊಳಿಸಲು ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ ಬಾಬು, ಅಪರ ಜಿಲ್ಲಾಧಿಕಾರಿ, ಆರತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಅಕ್ರಮಗಳಿಗೆ ಕಂಡುಬಂದರೆ 08156-1950 ಸಂಪರ್ಕಿಸಿ: ಕ್ಷೇತ್ರದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಅಥವಾ ಚುನಾವಣಾ ಅಕ್ರಮಗಳು ಕಂಡು ಬಂದಲ್ಲಿ ಸಾರ್ವಜನಿಕರು ಟೋಲ್ ಫ್ರೀ ದೂರವಾಣಿ ಸಂಖ್ಯೆ 08156-1950 ರಂತೆ 24*7 ಕಂಟ್ರೋಲ್ ರೂಂನ್ನು ತೆರೆಯಲಾಗಿರುತ್ತದೆ. ಅಕ್ರಮಗಳ ಬಗ್ಗೆ ಮಾಹಿತಿ ಕೊಡುವವರ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ತಕ್ಷಣ ದೂರಿಗೆ ಸಂಬಂಧಿಸಿ ಕ್ರಮ ವಹಿಸಲಾಗುವುದು. ಜಿಲ್ಲಾ ಮಟ್ಟದಲ್ಲಿ ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸಬೇಕಾದರೆ ಅನುಮತಿ ಪಡೆಯಬೇಕು. ಸಾಮಾಜಿಕ ಜಾಲತಾಣಗಳ ಮೇಲೆ ಹೆಚ್ಚಿನ ನಿಗಾ ವಹಿಸಲಾಗುವುದು. ಜಿಲ್ಲೆಯಲ್ಲಿ ಯೂಟೂಬ್ ಚಾನಲ್‌ಗಳಿಗೆ ಕಡಿವಾಣ ಹಾಕಲಾಗುವುದು ಎಂದು ತಿಳಿಸಿದರು.
ಕ್ಷೇತ್ರದಲ್ಲಿ 20 ಚೆಕ್‌ಪೋಸ್ಟ್ ಸ್ಥಾಪನೆ: ಅಕ್ರಮ ಮದ್ಯ, ಹಣ ಮತ್ತಿತರ ಚುನಾವಣೆಗೆ ಸಂಬಂಧಿಸಿದಂತೆ ನಡೆಯುವ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಒಟ್ಟು 20 ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದ್ದು, ಜಿಲ್ಲೆಯ ಅಂತಾರಾಜ್ಯ ಗಡಿಯಲ್ಲಿ ಒಟ್ಟು 11 ಹಾಗೂ ಅಂತರ್ ಜಿಲ್ಲಾ ಗಡಿಯಲ್ಲಿ ಒಟ್ಟು 9 ಚೆಕ್‌ಪೋಸ್ಟ್‌ಗಳನ್ನು ಈಗಾಗಲೇ ಸ್ಥಾಪಿಸಲಾಗಿದೆ. ಪ್ರತಿ ಚೆಕ್‌ಪೋಸ್ಟ್‌ಗೂ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಮದುವೆ, ಮತ್ತಿತರ ಶುಭ, ಸಮಾರಂಭಗಳಿಗೆ ಅನುಮತಿ ಪಡೆಯುವ ಅಗತ್ಯವಿಲ್ಲ. ಆದರೆ ಸಭೆ, ಸಮಾರಂಭಗಳಲ್ಲಿ ರಾಜಕಾರಣಿಗಳ ಭಾಷಣಕ್ಕೆ ಅವಕಾಶ ಇಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಬರ ನಿರ್ವಹಣೆಗೆ ನೀತಿ ಸಂಹಿತೆ ಅಡ್ಡಿ ಇಲ್ಲ: ಜಿಲ್ಲೆಯಲ್ಲಿ ತೀವ್ರ ಬರಗಾಲ ಆವರಿಸಿರುವುದರಿಂದ ಕುಡಿಯುವ ನೀರು ಸರಬರಾಜು ಸಂಬಂಧಿಸಿದಂತೆ ಕಾಮಗಾರಿ ಹಾಗೂ ಈಗಾಗಲೇ ನಡೆಯುತ್ತಿರುವ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಮಗಾರಿಗಳನ್ನು ಮುಂದುವರಿಸಬಹುದಾಗಿದೆ. ಇದಕ್ಕೆ ಯಾವುದೇ ರೀತಿ ಚುನಾವಣಾ ನೀತಿ ಸಂಹಿತೆ ಅಡ್ಡಿ ಬರುವುದಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದರು.
ಈಗಾಗಲೇ ಟ್ಯಾಂಕರ್ ಮೂಲಕ 79 ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ನೀರಿನ ಸಮಸ್ಯೆಯನ್ನು ಸಮರೋಪಾದಿಯಲ್ಲಿ ಪರಿಹರಿಸಬೇಕೆಂಬ ದೃಷ್ಟಿಯಿಂದ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ಅಧಿಕಾರಿಗಳನ್ನು ಚುನಾವಣಾ ಕರ್ತವ್ಯಕ್ಕೆ ಬಳಸಿಕೊಳ್ಳುತ್ತಿಲ್ಲ ಎಂದರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮುಕ್ತ ಹಾಗೂ ಪಾರದರ್ಶಕ ಚುನಾವಣೆಗೆ ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಜ್ಜಾಗುತ್ತಿದೆ. ಅತಿ ಸೂಕ್ಷ್ಮ ಹಾಗೂ ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗುವುದು. ಮತದಾರರು ಆಸೆ, ಆಮಿಷಗಳಿಗೆ ಒಳಗಾಗದೇ ಮತದಾನದಲ್ಲಿ ಪಾಲ್ಗೊಳ್ಳಬೇಕು. 2014ರ ಚುನಾವಣೆಯಲ್ಲಿ ಒಟ್ಟು 76.06 ರಷ್ಟು ಮತದಾನವಾಗಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೇ.84.19 ರಷ್ಟು ಮತದಾನ ನಡೆದಿತ್ತು. ಈ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಾಗಬೇಕು.-ಅನಿರುದ್ಧ್ ಶ್ರವಣ್, ಜಿಲ್ಲಾಧಿಕಾರಿ