Advertisement
ಹೌದು, ನಗರದ ಸಾರ್ವಜನಿಕ ಬಸ್ ನಿಲ್ದಾಣ ಎದುರು ಇರುವ ಜಿಲ್ಲಾ ಕೇಂದ್ರ ಗ್ರಂಥಾಲಯ ಪಕ್ಕದಲ್ಲಿನ ಹಳೆ ಜಿಲ್ಲಾ ಕೇಂದ್ರ ಗ್ರಂಥಾಲಯ ಕಟ್ಟಡವನ್ನು ಜಿಲ್ಲಾಡಳಿತ ಅದರಲ್ಲೂ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ವಿಶೇಷ ಕಾಳಜಿ ವಹಿಸಿ ಇಡೀ ಕಟ್ಟಡವನ್ನು ಸಂಪೂರ್ಣ ಮಕ್ಕಳ ಗ್ರಂಥಾಲಯವಾಗಿ ಮಾರ್ಪಡಿಸುವ ಮಹತ್ವಕಾಂಕ್ಷಿ ಕಾರ್ಯಕ್ಕೆ ಕೈ ಹಾಕಿದ್ದು, ಇಡೀ ಕಟ್ಟಡ ಮಕ್ಕಳ ಗ್ರಂಥಾಲಯಕ್ಕೆ ಪೂರಕವಾಗಿ ಅಣಿಯಾಗುತ್ತಿದೆ.
Related Articles
Advertisement
ವೃತ್ತಕಾರದಲ್ಲಿರುವ ಇಡೀ ಕಟ್ಟಡವನ್ನು ಮಕ್ಕಳ ಗ್ರಂಥಾಲಯವಾಗಿ ಪರಿವರ್ತಿಸಿ ಮಕ್ಕಳ ಮನೋವಿಕಾಸಕ್ಕೆ, ಮಕ್ಕಳಿಗೆ ಮಾಹಿತಿ ತಂತ್ರಜ್ಞಾನದ ಜೊತೆಗೆ ಕೌಶಲ್ಯಗಳನ್ನು ಬಿತ್ತುವ ಕೇಂದ್ರವಾಗಿ ಗ್ರಂಥಾಲಯವನ್ನು ಜಿಲ್ಲಾಡಳಿತ ಅಭಿವೃದ್ಧಿಪಡಿಸುತ್ತಿದೆ. ಈಗಾಗಲೇ ಮಕ್ಕಳ ತಜ್ಞರನ್ನು ಸಂಪರ್ಕಿಸಿ ಮಕ್ಕಳು ಓದುವಂತ ಪುಸ್ತಕಗಳನ್ನು ಪಟ್ಟಿ ಮಾಡಿ ಗ್ರಂಥಾಲಯಕ್ಕೆ ಬೇಕಾಗುವಷ್ಟು ಪುಸ್ತಕಗಳ ಖರೀದಿಗೂ ಜಿಲ್ಲಾ ಗ್ರಂಥಾಲಯ ಇಲಾಖೆ ಅಗತ್ಯ ಸಿದ್ಧತೆ ಕೈಗೊಂಡಿದೆ.
ನೆಹರು ಉದ್ಘಾಟಿಸಿದ್ದ ಗ್ರಂಥಾಲಯ: ಭಾರತ ರತ್ನ ಸರ್ ಎಂ.ವಿಶೇಶ್ವರಯ್ಯ ಹೆಸರಿನಲ್ಲಿ ಆರಂಭಗೊಂಡಿದ್ದ ಈ ಸಾರ್ವಜನಿಕ ಗ್ರಂಥಾಲವನ್ನು 1962 ಜುಲೈ 17 ರಂದು ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಖುದ್ದು ಚಿಕ್ಕಬಳ್ಳಾಪುರ ನಗರಕ್ಕೆ ಆಗಮಿಸಿ ಜಿಲ್ಲಾ ಕೇಂದ್ರ ಗ್ರಂಥಾಲಯವನ್ನು ಉದ್ಘಾಟಿಸಿ ಜಿಲ್ಲೆಗೆ ಲೋಕಾರ್ಪಣೆಗೊಳಿಸಿದ್ದರು. ನೆಹರು ಸವಿನೆನಪಿಗಾಗಿಯೇ ಈಗ ಈ ಕಟ್ಟಡವನ್ನು ಮಕ್ಕಳ ಗ್ರಂಥಾಲಯವಾಗಿ ಮಾರ್ಪಡಿಸುವ ಕೆಲಸವನ್ನು ಸಾರ್ವಜನಿಕ ಗ್ರಂಥಾಲಯ ಇಲಾಖೆ ಕೈಗೆತ್ತಿಕೊಂಡು ಅದನ್ನು ಸಾಕಾರಗೊಳಿಸುವ ಹಂತಕ್ಕೆ ತಲುಪಿದೆ.
ಹಳೆ ಜಿಲ್ಲಾ ಕೇಂದ್ರ ಗ್ರಂಥಾಲಯ ಕಟ್ಟಡವನ್ನು ಸಂಪೂರ್ಣವಾಗಿ ಬಳಸಿಕೊಂಡು ಮಕ್ಕಳ ಗ್ರಂಥಾಲಯವನ್ನಾಗಿ ಸ್ಥಾಪಿಸಲಾಗುತ್ತಿದೆ. ಇಡೀ ಗ್ರಂಥಾಲಯವನ್ನು ಕೇವಲ ಮಕ್ಕಳಿಗೆ ಮಾತ್ರ ಮೀಸಲಿಡಲಾಗುವುದು. ಕಟ್ಟಡ ನವೀಕರಣ ಕಾರ್ಯ ಪೂರ್ಣಗೊಂಡಿದ್ದು, ಚಿತ್ರಗಳು ಬಿಡಿಸುವ ಕಾರ್ಯ ನಡೆಯುತ್ತಿದೆ. ಆ.15ಕ್ಕೆ ಜಿಲ್ಲೆಗೆ ಗ್ರಂಥಾಲಯವನ್ನು ಲೋಕಾರ್ಪಣೆಗೊಳಿಸುವ ಉದ್ದೇಶ ಹೊಂದಲಾಗಿದೆ.-ಅನಿರುದ್ಧ್ ಶ್ರವಣ್, ಜಿಲ್ಲಾಧಿಕಾರಿ * ಕಾಗತಿ ನಾಗರಾಜಪ್ಪ