Advertisement

ಸೂಕ್ತ ರೀತಿಯಲ್ಲಿ ಕಾರ್ಯ ನಿರ್ವಹಿಸಲು ಜಿಲ್ಲಾಧಿಕಾರಿ ಸೂಚನೆ

01:18 AM Apr 09, 2019 | sudhir |

ಮಡಿಕೇರಿ: ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನವು ಏಪ್ರಿಲ್‌, 18 ರಂದು ನಡೆಯಲಿದ್ದು, ಜಿಲ್ಲೆಯ 543 ಮತಗಟ್ಟೆಗಳಿಗೆ ನಿಯೋಜಿಸಿರುವ ಪಿಆರ್‌ಒ, ಎಪಿಆರ್‌ಒ ಹಾಗೂ ಮತಗಟ್ಟೆ ಅಧಿಕಾರಿಗಳಿಗೆ ನಗರದ ಸಂತ ಜೋಸೆಫ‌ರ ಶಾಲೆ ಹಾಗೂ ವಿರಾಜಪೇಟೆಯ ಸಂತ ಅನ್ನಮ್ಮ ಶಾಲೆಯಲ್ಲಿ ಎರಡನೇ ಹಂತದ ತರಬೇತಿ ರವಿವಾರ ನಡೆಯಿತು.

Advertisement

ಮಸ್ಟರಿಂಗ್‌ ದಿನ ಮತ್ತು ಮತಗಟ್ಟೆ ಕೇಂದ್ರದಲ್ಲಿ ನಿರ್ವಹಿಸಬೇಕಾದ ಕಾರ್ಯ ಹಾಗೂ ಡಿಮಸ್ಟರಿಂಗ್‌ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು, ಸಹಾಯಕ ಚುನಾವಣಾಧಿಕಾರಿಗಳಾದ ಟಿ.ಜವರೇಗೌಡ, ಶ್ರೀನಿವಾಸ್‌ ಮತ್ತು ಮಾಸ್ಟರ್‌ ತರಬೇತಿದಾರರು ಹಲವು ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಅವರು ಮಾತನಾಡಿ ಮಸ್ಟರಿಂಗ್‌ ದಿನದಂದು ಮತಗಟ್ಟೆಯ ಎಲ್ಲಾ ಸಿಬ್ಬಂದಿಗಳು ಕಡ್ಡಾಯವಾಗಿ ನಿಗಧಿತ ಸಮಯಕ್ಕೆ ಹಾಜರಾಗಬೇಕು. ತಮ್ಮ ತಮ್ಮ ಮತಗಟ್ಟೆಗೆ ಸಂಬಂಧಿಸಿದ ಸಿಬ್ಬಂದಿಗಳನ್ನು ಸೇರಿಸಿಕೊಂಡು ಪರಸ್ಪರ ಪರಿಚಯ ಮಾಡಿಕೊಳ್ಳಬೇಕು, ಹಾಜರಾತಿ ಪುಸ್ತಕದಲ್ಲಿ ಕಡ್ಡಾಯವಾಗಿ ಸಹಿ ಮಾಡುವುದು. ಯಾವುದೇ ಮತಗಟ್ಟೆ ಅಧಿಕಾರಿ ಇತರೆ ಸಿಬ್ಬಂದಿ ಗೈರು ಆದಲ್ಲಿ ಸಹಾಯಕ ಚುನಾವಣಾಧಿಕಾರಿ ಹಾಗೂ ತಹಶೀಲ್ದಾರರಿಗೆ ತಿಳಿಸುವುದು. ರಜೆ ಹೋದಲ್ಲಿ ಬದಲಿ ವ್ಯವಸ್ಥೆ ಮಾಡಿಕೊಳ್ಳುವುದು ಮಸ್ಟರಿಂಗ್‌ ಪಟ್ಟಿಯಿಂದ ದೃಢಪಡಿಸಿಕೊಳ್ಳಬೇಕು ಎಂದರು. ಉಪ ವಿಭಾಗಾಧಿಕಾರಿ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಟಿ.ಜವರೇಗೌಡ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಶ್ರೀನಿವಾಸ್‌ ಮಾಸ್ಟರ್‌ ತರಬೇತಿದಾರರಾದ ವಾಲ್ಟರ್‌ ಡಿಮೆಲ್ಲೊ, ಷಂಶುದ್ದಿನ್‌ ಮತ್ತು ದಿವಾಕರ ಅವರು ಮಾಹಿತಿ ನೀಡಿದರು. ತಹಶೀಲ್ದಾರಾದ ನಟೇಶ್‌, ಗೋವಿಂದರಾಜು ಉಪಸ್ಥಿತರಿದ್ದರು.

ಇನ್ನಷ್ಟು ಮಾಹಿತಿ: ಮತಗಟ್ಟೆ ಅಧಿಕಾರಿಗಳು ಕಂಟ್ರೊಲ್‌ ಯೂನಿಟ್‌, ಬ್ಯಾಲೆಟ್‌ ಯೂನಿಟ್‌, ವಿವಿಪ್ಯಾಟ್‌, ವಿಎಸ್‌ಡಿಯು ಆಡ್ರಸ್‌ ಟ್ಯಾಗ್‌, ವಿಶೇಷ ಟ್ಯಾಗ್‌, ಗ್ರೀನ್‌ ಪೇಪರ್‌ ಸೀಲ್‌, ಸೀಲ್‌ ವಿಶೇಷ ಸ್ಟೀಪ್‌ ಸ್ಟೀಲ್‌ ಇದೆಯೇ ಎಂದು ಖಾತರಿ ಪಡಿಸಿಕೊಳ್ಳುವುದು. ಗುರುತು ಮಾಡಿದ ಮತದಾರರ ಪಟ್ಟಿಗಳು, ಗುರುತು ಮಾಡಿದ ವರ್ಗೀಕೃತ ಸೇವಾ ಮತದಾರರಪಟ್ಟಿ, ರಬ್ಬರ್‌, ಮೊಹರು, ಪಿಆರ್‌ಒ ದಿನಚರಿ. ಮತದಾರರ ರಿಜಿಸ್ಟ್ರಾರ್‌, ಮತದಾರರ ಚೀಟಿಗಳು ಟೆಂಡರ್‌x ಮತದಾರರ ಪತ್ರಗಳು ಆಕ್ಷೇಪಿತ ಮತದಾರರ ಪಟ್ಟಿ, ಅಂಧ ಮತ್ತು ದುರ್ಬಲರ ಮತದಾರರ ಪಟ್ಟಿ,ಬಳಸಿದ ಸೀಲ್‌ ಪೇಪರ್‌ ಬಗ್ಗೆ ಗಮನಹರಿಸಬೇಕಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next