Advertisement
ಯುವಜನರು ಇದರ ಸದುಪಯೋಗ ಪಡೆದುಕೊಳ್ಳಲು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.
Related Articles
Advertisement
ಯೋಜನೆ ತಲುಪಿಸಲು ಸೂಚನೆಸಾಂಪ್ರದಾಯಿಕ ಕರಕುಶಲ ಕಲೆಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ಪ್ರೋತ್ಸಾಹಿಸಲು ಜಾರಿಗೆ ತಂದಿರುವ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕು. ಆಯ್ಕೆಯಾದ ಫಲಾನುಭವಿಗಳಿಗೆ ಡಿಜಿಟಲ್ ಐಡಿ ಕಾರ್ಡ್ ಹಾಗೂ ಪಿ.ಎಂ ವಿಶ್ವಕರ್ಮ ಪ್ರಮಾಣ ಪತ್ರ, ತರಬೇತಿ, ಉಪಕರಣ ನೀಡುವ ಜತೆಗೆ 1 ಲಕ್ಷ ರೂ. ವರೆಗೆ ಸಾಲ ಸೌಲಭ್ಯ ಒದಗಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಕೌಶಲಾಭಿವೃದ್ಧಿ ತರಬೇತಿಯನ್ನು ಐಟಿಐ, ಡಿಪ್ಲೊಮಾ ಹಾಗೂ ಕೈಗಾರಿಕಾ ತರಬೇತಿ ಸಂಸ್ಥೆಗಳ ಮೂಲಕ ನೀಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದರು. ಜಿಪಂ ಸಿಇಒ ಪ್ರತೀಕ್ ಬಾಯಲ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅರುಣ್ ಬಿ., ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನಾಗರಾಜ ವಿ.ನಾಯಕ್, ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕ ಸೀತಾರಾಮ ಶೆಟ್ಟಿ, ಸಾಮಾನ್ಯ ಸೇವಾ ಕೇಂದ್ರದ ಜಿಲ್ಲಾ ವ್ಯವಸ್ಥಾಪಕ ಗೋವರ್ಧನ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಸರಕಾರಿ, ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆ, ಪಾಲಿಟೆಕ್ನಿಕ್ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು.