Advertisement

ಮೃತ ರೈತನ ಕುಟುಂಬಕ್ಕೆ ಜಿಲ್ಲಾಧಿಕಾರಿ ಸಾಂತ್ವನ

05:04 AM May 12, 2020 | Suhan S |

ಬೆಳಗಾವಿ/ಚಿಕ್ಕೋಡಿ: ಜಮೀನಿನಲ್ಲಿ ಕೊರೆಸಿದ್ದ ಕೊಳವೆ ಬಾವಿಯಲ್ಲಿ ನೀರು ಬಂದಿಲ್ಲ ಎಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ರಾಯಬಾಗ ತಾಲೂಕಿನ ಸುಲ್ತಾನಪುರ ಗ್ರಾಮದ ಲಕ್ಕಪ್ಪ ಸಂಗಪ್ಪ ದೊಡಮನಿ ಕುಟುಂಬಕ್ಕೆ ಜಿಲ್ಲಾಧಿಕಾರಿ ಹಾಗೂ ಹಿರಿಯ ಅಧಿಕಾರಿಗಳು ಸಾಂತ್ವನ ಹೇಳಿದರು.

Advertisement

ರೈತನ ಆತ್ಮಹತ್ಯೆ ವಿಷಯ ತಿಳಿದು ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ|ಎಸ್‌.ಬಿ.ಬೊಮ್ಮನಹಳ್ಳಿ, ಎಸ್‌ಪಿ ಲಕ್ಷ್ಮಣ ನಿಂಬರಗಿ, ರಾಯಬಾಗ ತಹಶೀಲ್ದಾರ ಚಂದ್ರಕಾಂತ ಭಜಂತ್ರಿ, ತಾ.ಪಂ. ಇಒ ಪ್ರಕಾಶ ವಡ್ಡರ, ಆರೋಗ್ಯಾಧಿಕಾರಿ ಎಸ್‌. ಎಸ್‌. ಬಾನೆ, ಡಿವೈಎಸ್‌ಪಿ ಎಸ್‌.ವಿ.ಗಿರೀಶ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ರೈತನಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದು, ಜಿಲ್ಲಾಧಿ ಕಾರಿ ಡಾ|ಬೊಮ್ಮನಹಳ್ಳಿ, ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ದೊರಕಿಸುವ ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next