Advertisement
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ಭವನ ಸಮಿ ತಿಯ ಸಹಯೋಗದೊಂದಿಗೆ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ “ಜಿಲ್ಲೆಯ ಕುಡಿ ಯುವ ನೀರಿನ ಸಮಸ್ಯೆ ಹಾಗೂ ಮಳೆಗಾಲದ ಸಿದ್ಧತೆ’ ಕುರಿತ ಸಂವಾದದಲ್ಲಿ ಅವರು ಮಾತನಾಡಿದರು.
Related Articles
Advertisement
ನೀರಿನ ಸಮಸ್ಯೆ ಇರದುಜಿ.ಪಂ. ಸಿಇಒ ಪ್ರತೀಕ್ ಬಾಯಲ್ ಮಾತನಾಡಿ, ಕೆಲವೆಡೆ ಬಹು ಗ್ರಾಮ ಕುಡಿಯುವ ನೀರಿನ ಯೋಜ ನೆಯ ಕಾಮಗಾರಿ ಸಮಸ್ಯೆ ಬಗೆಹರಿ ಸಿದ್ದೇವೆ. ಜಲ್‌ಜೀವನ್ ಮಿಷನ್ ಕಾಮಗಾರಿ ಯೂ ವೇಗವಾಗಿ ಸಾಗುತ್ತಿದೆ. ಮುಂದಿನ ವರ್ಷದೊಳಗೆ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ. ವಾರಾಹಿಯಿಂದಲೂ ಕೆಲವು ಭಾಗಕ್ಕೆ ನೀರು ಪೂರೈಕೆಯಾಗಲಿದೆ ಎಂದರು. ನಗರಸಭೆ ಪೌರಾಯುಕ್ತ ರಾಯಪ್ಪ, ವಾರ್ತಾಧಿಕಾರಿ ಮಂಜುನಾಥ್, ಡಿಎಚ್‌ಒ ಡಾ| ಐ.ಪಿ.ಗಡಾದ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ| ಪ್ರಶಾಂತ್ ಭಟ್ ಮತ್ತಿತರರು ಉಪಸ್ಥಿತರಿದ್ದರು. 27 ಸಾವಿರ ರೈತರಿಗೆ ಪರಿಹಾರ
ಕಾರ್ಕಳ, ಹೆಬ್ರಿ ಮತ್ತು ಬ್ರಹ್ಮಾವರ ತಾಲೂಕನ್ನು ಬರ ಪೀಡಿತ ಪ್ರದೇಶವಾಗಿ ಘೋಷಿಸಿದ್ದು, ಈ ಮೂರು ತಾಲೂಕಿನ 27 ಸಾವಿರ ರೈತರಿಗೆ 4.86 ಕೋಟಿ ಪರಿಹಾರ ಬಿಡುಗಡೆ ಮಾಡಿದೆ. ಸುಮಾರು 11 ಕೋ.ರೂ. ಪ್ರಸ್ತಾವನೆ ಸಲ್ಲಿಸಿದ್ದೇವೆ. ಈಗಾಗಲೇ ಮೊದಲ ಹಂತದಲ್ಲಿ ರೈತರಿಗೆ ತಲಾ 2 ಸಾವಿರ ಹಾಗೂ ಈಗ ಮತ್ತೆ ತಲಾ 2 ಸಾವಿರ ಪರಿಹಾರ ನೀಡಲಿದ್ದೇವೆ. ಭತ್ತ ಬೆಳೆಹಾನಿಯಾದ ಎಲ್ಲ ರೈತರಿಗೂ ಪರಿಹಾರ ನೀಡಲಾಗುವುದು ಎಂದರು. ಡೆಂಗ್ಯೂ ಹಾಗೂ ಮಲೇರಿಯಾದ ಬಗ್ಗೆ ಹೆಚ್ಚು ಜಾಗೃತಿ ವಹಿಸಬೇಕು. ಮಳೆ ಆರಂಭವಾಗಲು ಕೆಲವು ದಿನಗಳು ಬಾಕಿ ಇರುವುದರಿಂದ ಸಾರ್ವಜನಿಕರು ತಾವಿರುವ ಪರಿಸರದ ಸುತ್ತ ಸ್ವತ್ಛತೆಗೆ ಆದ್ಯತೆ ನೀಡಬೇಕು. ಸಾಂಕ್ರಾಮಿಕ ರೋಗ ಗಳ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಬೇಕು. 2024ರ ಜನವರಿಯಿಂದ ಈವರೆಗೂ ಸುಮಾರು 77 ಡೆಂಗ್ಯೂ ಪ್ರಕರಣ ದಾಖಲಾಗಿದೆ. ಅದು ನಗರ ಪ್ರದೇಶದಲ್ಲಿ ಹೆಚ್ಚಿದೆ ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಮಾಹಿತಿ ನೀಡಿದರು.