Advertisement

ಕುಡಿಯುವ ನೀರು ಕುರಿತು ಜಿಲ್ಲಾಧಿಕಾರಿ ಸಭೆ

12:30 AM Mar 16, 2019 | Team Udayavani |

ಉಡುಪಿ: ಬೇಸಗೆಯ ಹಿನ್ನೆಲೆಯಲ್ಲಿ ತುರ್ತು ಕುಡಿಯುವ ನೀರು ಪೂರೈಕೆ ಹಾಗೂ ಕೈಗೊಂಡ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಸಭೆ ಜರಗಿತು. 

Advertisement

ಗ್ರಾಮೀಣ  ಪ್ರದೇಶಗಳಲ್ಲಿ  ಕುಡಿಯುವ ನೀರಿನ ಪೂರೈಕೆ ಮಾಡುವ ಬಗ್ಗೆ ಪರಿಶೀಲನೆ ನಡೆಸಿ ಅವಶ್ಯಕತೆಗೆ ಅನುಗುಣವಾಗಿ ನಿಜವಾದ ಕಡೆಗಳಲ್ಲಿ  ಟ್ಯಾಂಕರ್‌ನ ಮೂಲಕ ಕುಡಿಯುವ ನೀರು ಸರಬರಾಜು ಮಾಡಲು  ಹಾಗೂ ಕುಡಿಯುವ ನೀರಿನ ಕೊರತೆ ಉಂಟಾಗದಂತೆ  ಎಚ್ಚರಿಕೆ ವಹಿಸಿ ಸಮಸ್ಯೆ ಉಲ್ಬಣಿಸದಂತೆ ನೋಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಕುಡಿಯುವ ನೀರು ಸರಬರಾಜು ಮಾಡುವ ಸಂದರ್ಭದಲ್ಲಿ  ಚುನಾವಣ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ  ನೋಡಿಕೊಳ್ಳುವಂತೆ   ತಹಶೀಲ್ದಾರರು ಮತ್ತು ಕಾರ್ಯನಿರ್ವಹಣಾಧಿಕಾರಿ ಅವರಿಗೆ ನಿರ್ದೇಶನ ನೀಡಿದರು.  ಈ ಕುರಿತು  ತಾಲೂಕು  ಮಟ್ಟದ ಸಮಿತಿಯನ್ನು ರಚಿಸಿದರು.

ಸಭೆಯಲ್ಲಿ  ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಿಂಧು ಬಿ. ರೂಪೇಶ್‌, ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next