Advertisement
ಶನಿವಾರ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಕೇಂದ್ರ ಸಂಘವು “ಗ್ರಾಮ ಆಡಳಿತ ಅಧಿಕಾರಿ’ ಪದನಾಮ ಘೋಷಣೆಗಾಗಿ ಏರ್ಪಡಿಸಿದ್ದ ಗ್ರಾಮ ಲೆಕ್ಕಾಧಿಕಾರಿಗಳ ರಾಜ್ಯಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಗ್ರಾಮಗಳಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಹೇಗೆ ಓಡಾಡುತ್ತಾರೆ. ಅವರಿಗೆ ಕಚೇರಿಯಲ್ಲಿ ಕುಳಿತು ಕೊಳ್ಳಲು ಕುರ್ಚಿ ಇದೆಯೋ, ಕಂದಾಯ ನಿರೀಕ್ಷಕರ ಕೆಲಸ ಹೇಗೆ ನಡೆದಿದೆ ಎನ್ನುವುದು ಜಿಲ್ಲಾಧಿಕಾರಿಯವರಿಗೂ ಅರ್ಥವಾಗಲಿ ಎನ್ನುವ ಉದ್ದೇಶದಿಂದ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. ಇದರ ಭಾಗವಾಗಿ ತಾಲೂಕು ಕಚೇರಿಯಲ್ಲಿ ಜಿಲ್ಲಾಧಿಕಾರಿ ಒಂದು ದಿನ ಕೆಲಸ ಮಾಡುವ ಕಾರ್ಯಕ್ರಮ ಹಾಕಿಕೊಳ್ಳಲಾಗುವುದು ಎಂದರು.
ಗ್ರಾಮ ಸಹಾಯಕರ ಸೇವಾ ಭದ್ರತೆ ಬಗ್ಗೆಯೂ ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು ಎಂದು ಸಚಿವರು ಹೇಳಿದರು. ಪದನಾಮ ಬದಲು ಚಿಂತನೆ
ಗ್ರಾಮ ಲೆಕ್ಕಾಧಿಕಾರಿಗಳನ್ನು “ಗ್ರಾಮ ಆಡಳಿತ ಅಧಿಕಾರಿ’ ಎಂದು ಘೋಷಿ ಸುವ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸ ಲಾಗುವುದು. ಪದನಾಮ ಬದಲಾಯಿಸುವ ಬೇಡಿಕೆ ದೊಡ್ಡದೇನಲ್ಲ. ಹಾಗಾಗಿ ಶೀಘ್ರದಲ್ಲೇ ಒಳ್ಳೆಯ ನಿರ್ಧಾರ ಕೈಗೊಳ್ಳಲಾಗುವುದು. ಹುದ್ದೆ ಹೆಸರು ಬದಲಾವಣೆಯಷ್ಟೇ ಅಲ್ಲ, ಕೆಲಸದಲ್ಲೂ ಉತ್ತಮ ಸುಧಾರಣೆ ತರಬೇಕು ಎಂದರು.