ಬೆಳ್ತಂಗಡಿ: ಲೋಕಸಭಾ ಚುನಾವಣೆ ಹಿನ್ನೆಲೆ ದ.ಕ. ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಎ.25 ರಂದು 200- ಬೆಳ್ತಂಗಡಿಯ ಉಜಿರೆಯಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ರಚಿಸಲಾಗಿರುವ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಸ್ಟರಿಂಗ್ ಕೊಠಡಿಗಳನ್ನು ವೀಕ್ಷಿಸಿದ ಅವರು, ಸಿಬಂದಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿದರು. ಯಾವುದೇ ಗೊಂದಲಗಳಿದ್ದಲ್ಲಿ ಸೆಕ್ಟರ್ ಅಧಿಕಾರಿಗಳನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಸಲಹೆ ನೀಡಿದರು. ಸಿಬಂದಿಗಳಿಗೆ ನೀಡಲಾಗುವ ಊಟೋಪಚಾರದ ವಿಚಾರವಾಗಿಯು ಸ್ಥಳಕ್ಕೆ ಭೇಟಿ ನೀಡಿ ಮಜ್ಜಿಗೆ ಸವಿದರು.
ಈ ಸಂದರ್ಭದಲ್ಲಿ ಸಹಾಯಕ ಚುನಾವಣಾ ಅಧಿಕಾರಿ ಕೆಂಪೇಗೌಡ, ತಹಶೀಲ್ದಾರ್ ಪೃಥ್ವಿ ಸಾನಿಕಮ್ ಸಹಿತ ಪ್ರಮುಖ ಅಧಿಕಾರಿಗಳು, ಚುನಾವಣಾ ಕರ್ತವ್ಯ ನಿರತ ಅಧಿಕಾರಿ, ಸಿಬಂದಿ ಉಪಸ್ಥಿತರಿದ್ದರು.