ಚಿಕ್ಕಬಳ್ಳಾಪುರ: ಸರ್ಕಾರದ ಸೌಲಭ್ಯಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಸಲುವಾಗಿ ಆರಂಭಿಸಿರುವ ಸರ್ಕಾರದ ಮಹತ್ವಾಕಾಂಕ್ಷೆಯ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಜಿಲ್ಲೆಯ ಜರಬಂಡಹಳ್ಳಿ ಗ್ರಾಮದಲ್ಲಿ ಅದ್ದೂರಿಯಾಗಿ ನಡೆಯಿತು.
ಕಂದಾಯ ಸಚಿವ ಆರ್. ಅಶೋಕ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ ಎನ್.ನಾಗರಾಜ್ ಅವರಿಗೆ ಮಹಿಳೆಯರು ಪೂರ್ಣಕುಂಭದೊಂದಿಗೆ ಸ್ವಾಗತಿಸಿದರು. ಡೊಳ್ಳು ಕುಣಿತ ಕಲಾವಿದರು ತಮ್ಮ ಕಲೆಯನ್ನು ಪ್ರದರ್ಶನ ಮಾಡಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.
ಇದಕ್ಕೆ ಮುನ್ನ ನುಲುಗುಮ್ಮನಹಳ್ಳಿಯ ಶ್ರೀ ವೆಂಕರಮಣಸ್ವಾಮಿ ದೇವಾಲಯದಲ್ಲಿ ಸಚಿವರು ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮರಳುಕುಂಟೆ ಕೃಷ್ಣಮೂರ್ತಿ, ಜರಬಂಡಹಳ್ಳಿ ವಿ.ಎಸ್.ಎಸ್.ಎನ್ ಅಧ್ಯಕ್ಷ ಜೆ.ವಿ.ಹನುಮೇಗೌಡ, ಕೋಚಿಮುಲ್ ನಿರ್ದೇಶಕಿ ಸುನಂದಮ್ಮ, ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್, ಜಿ.ಪಂ. ಸಿ.ಇ.ಓ. ಪಿ. ಶಿವಶಂಕರ್, ಜಿಲ್ಲಾ ಎಸ್ಪಿ ಡಿ.ಎಮ್.ಎಲ್. ನಾಗೇಶ್, ಉಪ ವಿಭಾಗಾಧಿಕಾರಿ ಡಾ.ಸಂತೋಷ ಕುಮಾರ್, ಮುಖಂಡ ಎಸ್.ಆರ್.ಎಸ್.ದೇವರಾಜ್ ಮತ್ತಿತರರು ಉಪಸ್ಥಿತರಿದ್ದರು.