Advertisement

5 Guarantees ಮೇಲ್ವಿಚಾರಣೆಗೆ ಜಿಲ್ಲಾ ಸಮಿತಿ: ಸಚಿವ ಎಚ್.ಕೆ.ಪಾಟೀಲ್

05:50 PM Jan 21, 2024 | Team Udayavani |

ಗದಗ : ರಾಜ್ಯದಲ್ಲಿ ಅನುಷ್ಠಾನಗೊಂಡಿರುವ ಪಂಚ ಗ್ಯಾರಂಟಿಗಳ ಮೇಲ್ವಿಚಾರಣೆ ಮಾಡುವುದಕ್ಕೆ ಜಿಲ್ಲಾ ಸಮಿತಿಗಳನ್ನು ರಚಿಸಲು ನಿರ್ಣಯಿಸಲಾಗಿದೆ. ರಾಜ್ಯಮಟ್ಟದ ಸಮಿತಿ ಅಧ್ಯಕ್ಷರಿಗೆ ಕ್ಯಾಬಿನೆಟ್ ದರ್ಜೆ ನೀಡಲಾಗುತ್ತಿದೆ. ಐವರು ಉಪಾಧ್ಯಕ್ಷರು ಇರುತ್ತಾರೆ ಎಂದು ಸಚಿವ ಎಚ್.ಕೆ. ಪಾಟೀಲ್ ಹೇಳಿದರು.

Advertisement

ನಗರದ ಕಾಟನ್ ಸೇಲ್ ಸೊಸೈಟಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚ ಗ್ಯಾರಂಟಿಗಳ ಅನುಷ್ಠಾನದಿಂದ ರಾಜ್ಯದಲ್ಲಿ 1 ಕೋಟಿಗೂ ಹೆಚ್ಚು ಜನರು ಬಡತನ ರೇಖೆಗಿಂತ ಮೇಲೆ ಬಂದಿದ್ದಾರೆ ಎಂದರು.

ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಲವು ಚರ್ಚೆ ನಡೆಸಲಾಗಿದೆ. ಸಭೆಯಲ್ಲಿ ನಾಯಕರು ಹಲವು ಸಲಹೆಗಳನ್ನು ಕೊಟ್ಟಿದ್ದಾರೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಚರ್ಚಿಸಲಾಯಿತು ಎಂದರು.

ರಾಮ ಮಂದಿರ ಉದ್ಘಾಟನೆ ಕುರಿತು ಮಾತನಾಡಿ, ಎಲ್ಲರಲ್ಲಿ ಭ್ರಾತೃತ್ವ ಭಾವನೆಯಿಂದ ಇರುವುದಕ್ಕೆ, ದ್ವೇಷ ಅಳಿಸಿ, ಪ್ರೀತಿ ಬೆಳೆಸುವ ಆ ರಾಮನ ವ್ಯಕ್ತಿತ್ವ ನಮ್ಮೆಲ್ಲರಲ್ಲಿಯೂ ಮೂಡಲಿ. ಯಾರಿಗೆ ಆ ರೀತಿಯ ಜ್ಞಾನದ ಕೊರತೆಯಿದೆ ಅವರಿಗೆ ಸದ್ಬುದ್ಧಿ ನೀಡಲಿ ಎಂದು ಶ್ರೀರಾಮನಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next