Advertisement
ಜಿಪಂ ಸಭಾಂಗಣದಲ್ಲಿ ಜಿಲ್ಲೆಯ ಅಭಿವೃದ್ಧಿ ಚಟುವಟಿಕೆಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಂಸದರು ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿ ಧಿಯಡಿ ಕೈಗೊಳ್ಳುವ ಕಾಮಗಾರಿಗಳನ್ನು ವಿಳಂಬ ಮಾಡಬಾರದು. ಆರೋಗ್ಯ ನಂದನ ಕಾರ್ಯಕ್ರಮದ ಮೂಲಕ ಶಾಲಾ ಮಕ್ಕಳ ಆರೋಗ್ಯ ತಪಾಸಣೆ ನಿರಂತರವಾಗಿ ನಡೆಯಬೇಕು. ಹಿಂಗಾರು ಹಂಗಾಮಿನ ಬೀಜ, ರಸಗೊಬ್ಬರ ವಿತರಣೆ ಸಮರ್ಪಕವಾಗಿ ಜರುಗಬೇಕು. ವಿವಿಧ ಇಲಾಖೆ ಹಾಸ್ಟೆಲ್‌ಗಳಿಗೆ ಹಾಪ್‌ಕಾಮ್ಸ್ ನಿಗದಿ ಪಡಿಸಿದ ದರಗಳಲ್ಲಿ ನೇರವಾಗಿ ರೈತರಿಂದ ತರಕಾರಿ-ಹಣ್ಣುಗಳನ್ನು ಖರೀದಿಸಿ ಪೂರೈಸಬಹುದು. ಜಿಪಂ ಜಲಶಕ್ತಿ ಅಭಿಯಾನದಡಿ ಹಾಸ್ಟೆಲ್ ಕಟ್ಟಡಗಳಿಗೆ ಮಳೆನೀರು ಕೊಯ್ಲು ಸೌಲಭ್ಯ ಕಲ್ಪಿಸಬೇಕು. ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಮ್ಯಾನ್ಯುವಲ್ ಸ್ಕಾ ವೆಂಜಿಂಗ್ ನಿಷೇಧ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜೆಟ್ಟಿಂಗ್ ಅಥವಾ ಸಕ್ಕಿಂಗ್ ಯಂತ್ರಗಳನ್ನು ಬಳಸಬೇಕು ಎಂದು ಸೂಚಿಸಿದರು.
Advertisement
ಪರಿಹಾರ ವಿತರಣೆಗೆ ನೀಡಿ ಮೊದಲ ಆದ್ಯತೆ
08:08 PM Oct 14, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.