Advertisement

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ; ಅಪಾಯಕಾರಿ ಕಟ್ಟಡಗಳ ತೆರವಿಗೆ ಸೂಚನೆ

12:18 PM Aug 07, 2020 | mahesh |

ಮಂಗಳೂರು: ಜಿಲ್ಲೆಯಲ್ಲಿ ಮಳೆ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಅಪಾಯಕಾರಿ ಮನೆ, ತಡೆಗೋಡೆ,  ಕಟ್ಟಡ, ವಿದ್ಯುತ್‌ ಕಂಬಗಳನ್ನು ಗುರುತಿಸಿ ತೆರವಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜರಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Advertisement

ಗುಡ್ಡವನ್ನು ಅವೈಜ್ಞಾನಿಕವಾಗಿ ಕಡಿದು ಕಟ್ಟಡ ನಿರ್ಮಿಸುವ ಪ್ರವೃತ್ತಿ ಜಿಲ್ಲೆಯಲ್ಲಿ ಹೆಚ್ಚುತ್ತಿದೆ. ಅಪಾಯಕಾರಿ ಜಾಗಗಳಲ್ಲಿ ಯಾವುದೇ ರೀತಿಯ ನಿರ್ಮಾಣ ಚಟುವಟಿಕೆಗಳಿಗೆ ಅನುಮತಿ ನೀಡ ಬಾರದು. ಪರಿಹಾರ ಕಾರ್ಯಾಚರಣೆ ಯಲ್ಲಿ ಯಾವುದೇ ವಿಳಂಬವನ್ನು ಸಹಿಸಲು ಸಾಧ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹೇಳಿದರು.

ಕಾಮಗಾರಿ ಪೂರ್ಣಗೊಳಿಸಿ
ಕಳೆದ ವರ್ಷ ಅತಿವೃಷ್ಟಿಯಿಂದ ಮನೆ ಕಳೆದುಕೊಂಡವರಿಗೆ ಪರಿಹಾರ ಸಿಕ್ಕಿದರೂ ಇನ್ನೂ ಮನೆ ಪೂರ್ತಿಯಾಗಿಲ್ಲ. ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಫ‌ಲಾನುಭಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಯವರು, ಪರಿಹಾರ ಮೊತ್ತವನ್ನು ಸಕಾಲದಲ್ಲಿ ವಿತರಿಸುವಂತೆ ತಿಳಿಸಿದರು.

ರೋಗಗಳ ನಿಯಂತ್ರಣಕ್ಕೆ ಕ್ರಮ
ಮಳೆಗಾಲದಲ್ಲಿ ಡೆಂಗ್ಯೂ, ಚಿಕೂನ್‌ಗುನ್ಯಾ, ಇಲಿಜ್ವರದಂತಹ ಸಾಂಕ್ರಾಮಿಕ ರೋಗಗಳು ಹೆಚ್ಚಾಗಿ ಕಂಡುಬರುತ್ತಿವೆ. ಕೋವಿಡ್‌ ಜತೆಗೆ ಇತರ ಕಾಯಿಲೆಗಳ ನಿಯಂತ್ರಣಕ್ಕೂ ಆದ್ಯತೆ ನೀಡಬೇಕು ಎಂದು ಆರೋಗ್ಯ ಇಲಾಖೆಗೆ ಸೂಚಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್‌, ಉಪ ಅರಣ್ಯ ಸಂರಕ್ಷಣಾಧಿಕಾರಿ ಕರಿಕಲನ್‌, ಡಿಸಿಪಿ ಅರುಣಾಂಶುಗಿರಿ, ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next