Advertisement
ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಪಂ ಸಭಾಂಗಣದಲ್ಲಿ ಮಧ್ಯಾಹ್ನ 3 ರಿಂದ 4 ಗಂಟೆ ವರೆಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿ, ಚುನಾವಣೆಗೆ ಬೇಕಾದ ತಯಾರಿ, ಚುನಾವಣಾ ನೀತಿ ಸಂಹಿತೆ ಅನುಷ್ಠಾನದ ಕುರಿತು ಚರ್ಚೆ ನಡೆಸಿ ಅಧಿಕಾರಿಗಳು ಚುನಾವಣಾ ಆಯೋಗ ನೀಡಿರುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದರು.
Related Articles
Advertisement
ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅರಿವು ಮೂಡಿಸುವ ಕಾರ್ಯಗಳಿಗೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಆರತಿ, ಉಪವಿಭಾಧಿಕಾರಿ ಎ.ಎನ್.ರಘನಂದನ್, ಡಿವೈಎಸ್‌ಪಿ ಪ್ರಭುಶಂಕರ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಉಪ ಚುನಾವಣೆ ಯಾರ್ಯಾರಿಗೆ ಯಾವ ಹೊಣೆ?: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯ ಎಂ.ಸಿ.ಸಿ. ನೋಡಲ್ ಅಧಿಕಾರಿ ಹಾಗೂ ಚುನಾವಣಾ ನೀತಿ ಸಂಹಿತೆಯ ನಿರ್ವಹಿಸುವ ಹೊಣೆಯನ್ನು ಜಿಪಂ ಸಿಇಒ ಬಿ. ಫೌಜಿಯಾ ತರನ್ನುಮ್ ಕಾರ್ಯನಿರ್ವಹಿಸಲಿದ್ದಾರೆ. ಇವಿಎಂಗಳ ನಿರ್ವಹಣೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕರು, ಸಾರಿಗೆ ನಿರ್ವಹಣೆ ಪ್ರಾದೇಶಿಕ ಸಾರಿಗೆ ಅಧಿಕಾರಿ, ಚುನಾವಣಾ ತರಬೇತಿ ನಿರ್ವಹಣೆ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಇಲಾಖೆ ಜಿಲ್ಲಾ ಅಧಿಕಾರಿಗಳು.
ಚುನಾವಣಾ ಸಮಗ್ರಗಳ ನಿರ್ವಹಣೆಗೆ ಜಿಲ್ಲಾಡಳಿತದ ಸಹಾಯಕರು, ಚುನಾವಣಾ ಖರ್ಚು-ವೆಚ್ಚ ನಿರ್ವಹಣೆಯನ್ನು ಮುಖ್ಯ ಲೆಕ್ಕಾಧಿಕಾರಿಗಳು, ಕಾನೂನು ಆದೇಶಕ್ಕೆ ಡಿವೈಎಸ್‌ಪಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಘೋಷಣೆಯಾಗಿರುವ ಉಪ ಚುನಾವಣೆಯನ್ನು ಯಾವುದೇ ಗೊಂದಲಗಳಿಗೆ ಅವಕಾಶ ಇಲ್ಲದೇ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಲಿದೆ. ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಜಿಲ್ಲಾದ್ಯಂತ ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಲಾಗುವುದು.-ಆರ್.ಲತಾ, ಜಿಲ್ಲಾಧಿಕಾರಿ