Advertisement

16 ಮತ್ತು 17ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

05:44 PM Mar 04, 2020 | Team Udayavani |

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನ ನಗರದ ಬಸವ ಭವನದಲ್ಲಿ ಮಾ.16 ಮತ್ತು 17ರಂದು ನಡೆಯಲಿದ್ದು, ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ ತಾಲೂಕು ಅಧ್ಯಕ್ಷೆ ಪ್ರಮೀಳಾಮಹದೇವ್‌ ತಿಳಿಸಿದರು.

Advertisement

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೊಷ್ಠಿಯಲ್ಲಿ ಅವರು ಮಾತನಾಡಿದರು. ಎರಡು ದಿನಗಳ ಕಾಲ ನಡೆಯುವ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಹಿರಿಯ ಕನ್ನಡಪರ ಹೋರಾಟಗಾರ,ನಗರಸಭೆ ಮಾಜಿ ಅಧ್ಯಕ್ಷ ತ.ನ.ಪ್ರಭುದೇವ್‌ ಅವರನ್ನು ಆಯ್ಕೆ ಮಾಡಲಾಗಿದೆ.

ಮಾ.16ರಂದು ತಹಶೀಲ್ದಾರ್‌ ಟಿ.ಎಸ್‌.ಶಿವರಾಜ್‌ ದ್ವಜಾರೋಹಣ ನಡೆಸುವ ಮೂಲಕ ಕಾರ್ಯಾಕ್ರಮಕ್ಕೆ ಚಾಲನೆ ನೀಡಲಿದ್ದಾರೆ.ನಗರದ ನೆಲದಾಂಜನೇಯ ದೇವಾಲಯದಿಂದ ಪ್ರಮುಖ ಬೀದಿಗಳಲ್ಲಿ ಅಧ್ಯಕ್ಷರ ಮೆರವಣಿಗೆ ನಡೆಯಲಿದ್ದು,ಬಸವ ಭವನದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್‌. ಆಶೋಕ್‌ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ಇದೇ ವೇಳೆ ನಿವೃತ್ತ ಪ್ರಾಧ್ಯಾಪಕ ಎಂ.ಜಿ.ಚಂದ್ರಶೇಖರಯ್ಯ ಅಧ್ಯಕ್ಷತೆಯಲ್ಲಿ ನಾಡು,ನುಡಿ, ಸಂಸ್ಕೃತಿ ಕುರಿತಾದ ವಿಚಾರಗೋಷ್ಠಿ ನಡೆಯಲಿದೆ. ಮಾಜಿ ಸಚಿವೆ ರಾಣಿ ಸತೀಶ್‌ ಅಧ್ಯಕ್ಷತೆಯಲ್ಲಿ ಮಹಿಳಾಗೋಷ್ಠಿ ನಡೆಯಲಿದೆ.ಸಂಜೆ ಸಾಂಸ್ಕೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಸಮ್ಮೇಳನದ ಎರಡನೇ ದಿನದಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಜಿಲ್ಲಾ ಮುಖಂಡರಾದ ಸುಲೋಚನಮ್ಮವೆಂಕಟರೆಡ್ಡಿ ಅಧ್ಯಕ್ಷತೆಯಲ್ಲಿ ಕೃಷಿ,ನೀರಾವರಿ,ನೇಕಾರಿಕೆ ಕುರಿತಂತೆ ವಿಚಾರಗೋಷ್ಠಿ ನಡೆಯಲಿದೆ. ನಂತರ ಸಮ್ಮೇಳನದ ಅಧ್ಯಕ್ಷ ತ.ನ.ಪ್ರಭುದೇವ್‌ ಅವರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದ್ದು, ಪ್ರೊ. ಚಂದ್ರಪ್ಪ ಅಧ್ಯಕ್ಷತೆಯಲ್ಲಿ ನಡೆಯುವ ಕವಿಗೋಷ್ಠಿಯಲ್ಲಿ ಸ್ವಿಡ್ಜರ್‌ ಲ್ಯಾಂಡ್‌,ಕೀನ್ಯ ದೇಶದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಸಲ್ಲಿಸಿರುವ ಸುಮಾರು 40 ಮಂದಿಯನ್ನು ಸನ್ಮಾನಿಸಲಾಗುತ್ತಿದ್ದು,ಸಾಹಿತಿ ವಿ.ನಾಗೇಂದ್ರ ಪ್ರಸಾದ್‌ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.ಎರಡು ದಿನಗಳ ಸಮ್ಮೇಳನದಲ್ಲಿ ಚಿತ್ರ ನಟರು,ಸಾಹಿತಿಗಳು,ಕವಿಗಳು,ವಿಚಾರವಾದಿಗಳು ಭಾಗವಹಿಸುತ್ತಿದ್ದು ಸಾಂಸ್ಕೃತಿಕ ಕಾರ್ಯಕ್ರಮ,ಪುಸ್ತಕ ಮಳಿಗೆ,ಸ್ತ್ರೀ ಶಕ್ತಿ ಗುಂಪುಗಳು ತಯಾರಿಸಿರುವ ಕರಕುಶಲ ವಸ್ತು ಪ್ರದರ್ಶನಕ್ಕೆ ವೇದಿಕೆ ಕಲ್ಪಿಸಲಾಗಿದೆ ಎಂದರು.

Advertisement

ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷ ಡಿ.ಸಿ.ಶಶಿಧರ್‌,ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಗೌರವ ಕಾರ್ಯದರ್ಶಿ ವಿ.ಸಿ.ಜ್ಯೋತಿಕುಮಾರ್‌, ಕೋಶಾಧ್ಯಕ್ಷೆ ವಿ.ನಿರ್ಮಲ, ಕಾರ್ಯಾಧ್ಯಕ್ಷ ತರಿದಾಳ್‌ ಶ್ರೀನಿವಾಸ್‌, ಮಾಜಿ ಅಧ್ಯಕ್ಷ ಖಲೀಲ್‌ ಉಲ್ಲಾ ಖಾನ್‌,ಡಾ.ರಾಜ್‌ಕುಮಾರ್‌ ಅಭಿಮಾನಿಗಳ ಸಂಘದ ಅಧ್ಯಕ್ಷ ಸು.ನರಸಿಂಹಮೂರ್ತಿ,ಕರವೇ ಮುಖಂಡರಾದ ರಾಜಘಟ್ಟರವಿ, ಎಂ.ಮುನೇಗೌಡ,ಎನ್‌.ಹನುಮಂತರೆಡ್ಡಿ,ಕನ್ನಡ ಜಾಗೃತ ಪರಿಷತ್‌ ಅಧ್ಯಕ್ಷ ಡಿ.ವಿ.ಅಶ್ವತ್ಥಪ್ಪ, ಕಸಾಪ ಪದಾಧಿಕಾರಿಗಳಾದ ವತ್ಸಲ, ಗಿರಿಜಾ,ಮೀನಮ್ಮ,ಲಕ್ಷ್ಮೀ,ಶೋಭಾ ಮತ್ತಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next