Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಬಿ.ಶಿವರಾಮು, ಮಾಜಿ ಸಚಿವ ಎ.ಮಂಜು ಬಿಜೆಪಿಯನ್ನು ಮುಳುಗಿಸಿ ಕಾಂಗ್ರೆಸ್‌ಗೆ ಬಂದಿದ್ದ ಎ.ಮಂಜು, ಕಾಂಗ್ರೆಸ್‌ನಲ್ಲಿ ಶಾಸಕರಾಗಿ, ಮಂತ್ರಿಯಾಗಿ ಯಾವ ಸಾಧನೆ ಮಾಡಿದರು? ಇವರಿಂದ ಕಾಂಗ್ರೆಸ್ ಪಕ್ಷ ಸಂಘಟನೆಯಾಗಲಿಲ್ಲ. ಈಗ ಅವರು ಪಕ್ಷ ಬಿಟ್ಟಿರುವುದರಿಂದ ಕಾಂಗ್ರೆಸ್‌ಗೆ ಹಾನಿಯೇನೂ ಇಲ್ಲ. ಈಗ ಬಿಜೆಪಿ ಸೇರಿರುವ ಇಂಥ ಅವಕಾಶವಾದಿ ರಾಜಕಾರಣಿಗಳಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
Related Articles
Advertisement
ಆದರೆ ಎ.ಮಂಜು ಮಂತ್ರಿಯಾಗಿ ವಸೂಲಿಗಿಳಿದಿದ್ದು ಬಿಟ್ಟರೆ ಏನನ್ನೂ ಮಾಡಲಿಲ್ಲ. ಅಧಿಕಾರ ಅನುಭವಿಸಿ ಪಕ್ಷವನ್ನು ಹಾಳು ಮಾಡುವ ಹುನ್ನಾರ ನಡೆಸಿದರು. ಅಧಿಕಾರದಲ್ಲಿದ್ದಾಗ ಸಾಧನೆ ಮಾಡದೆ ಈಗ ಮೋದಿ ನೋಡಿ ಮತಹಾಕಿ ಎಂದು ಜನರ ಮುಂದೆ ಹೋಗಿದ್ದಾರೆ ಎಂದು ಲೇವಡಿ ಮಾಡಿದರು.
ಮೈತ್ರಿ ಅಭ್ಯರ್ಥಿ ಗೆಲುವು: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಾವಗಲ್ ಮಂಜುನಾಥ್ ಮಾತನಾಡಿ, ಪಕ್ಷದ ವರಿಷ್ಠರು ತೆಗೆದುಕೊಂಡಿರುವ ತೀರ್ಮಾನದಂತೆ ಹಾಸನ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಕಾಂಗ್ರೆಸ್ ಸಜ್ಜಾಗಿದ್ದು, ಪ್ರಜ್ವಲ್ ರೇವಣ್ಣ ಭಾರೀ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು.
ಎ.ಮಂಜು ಕುಟುಂಬದಲ್ಲೂ ರಾಜಕಾರಣ: ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ನಡೆಸುತ್ತಿರುವುದಾಗಿ ಹೇಳುತ್ತಿರುವ ಎ.ಮಂಜು ಕುಟುಂಬ ರಾಜಕಾರಣ ಮಾಡಿದ್ದಾರೆ. ಎ.ಮಂಜು ಅವರ ಪತ್ನಿ ಜಿಲ್ಲಾ ಪರಿಷತ್ ಸದಸ್ಯರಾಗಿದ್ದರು. ಅವರ ಪುತ್ರ ಡಾ.ಮಂತರ್‌ಗೌಡ ಈಗ ಜಿ.ಪಂ ಸದಸ್ಯ. ಹಾಗಾಗಿ ಕುಟುಂಬ ರಾಕಾರಣದ ಬಗ್ಗೆ ಮಾತನಾಡಲು ಎ.ಮಂಜು ಅವರಿಗೆ ನೈತಿಕತೆ ಇದೆಯೇ ಎಂದು ವಿಧಾನ ಪರಿಷತ್ ಸದಸ್ಯ, ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಎಂ.ಎ.ಗೋಪಾಲಸ್ವಾಮಿ ಹೇಳಿದರು.
ಎಲ್ಲಾ ರಾಕಾರಣಿಗಳೂ ಕುಟುಂಬ ರಾಜಕಾರಣ ಮಾಡುತ್ತಾ ಬಂದಿದ್ದಾರೆ. ಹಾಗಾಗಿ ಕಟುಂಬ ರಾಜಕಾರಣದ ಆರೋಪ ಅಪ್ರಸ್ತುತ. ಹಿಂದಿನ ಸಿದ್ಧರಾಮಯ್ಯ ಅವರ ಸರ್ಕಾರದಲ್ಲಿ ಹಾಗೂ ಇಂದಿನ ಸಮ್ಮಿಶ್ರ ಸರ್ಕಾರದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳು ಮೈತ್ರಿ ಆಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಮತ ತಂದು ಕೊಡಲಿವೆ ಎಂದು ಹೇಳಿದರು.