Advertisement
ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬಿ.ಎಸ್.ಶ್ವೇತಾ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಪಾಲ್ಗೊಂಡಿದ್ದ ಶಾಸಕರಾದ ಎಚ್.ಕೆ.ಕುಮಾರಸ್ವಾಮಿ, ಕೆ.ಎಂ.ಶಿವಲಿಂಗೇಗೌಡ, ಸಿ.ಎನ್. ಬಾಲಕೃಷ್ಣ, ಕೆ.ಎಸ್.ಲಿಂಗೇಶ್ ಅವರು ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದಿಂದ ಸಂಭ ವಿಸಿರುವ ಹಾನಿಯ ಬಗ್ಗೆ ಜಿಲ್ಲಾಧಿಕಾರಿಯವರು ವರದಿ ಸಲ್ಲಿಸುತ್ತಾರೆ. ಆದರೆ ಜಿಲ್ಲಾ ಪಂಚಾಯಿತಿ ಯಿಂದಲೂ ಪ್ರತ್ಯೇಕ ಪ್ರಸ್ತಾವನೆಯನ್ನು ಮುಖ್ಯ ಮಂತ್ರಿಯವರು, ಕಂದಾಯ ಸಚಿವರಿಗೆ ಸಲ್ಲಿಸಿದರೆ ಹೆಚ್ಚು ಪರಿಹಾರದ ಮೊತ್ತ ಪಡೆಯಲು ಸಾಧ್ಯ ವಾಗುತ್ತದೆ. ನಾವೂ ಸರ್ಕಾರದ ಮಟ್ಟದಲ್ಲಿ ಒತ್ತಡ ತರುತ್ತೇವೆ ಎಂದು ನೀಡಿದ ಸಲಹೆಗೆ ಸಮ್ಮತಿಸಿದ ಸಭೆಯು ಪರಿಹಾರ ಕಾರ್ಯಗಳಿಗೆ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಸಭೆಯು ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿತು.
Related Articles
Advertisement
ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಸಭೆ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ, ಶಿಕ್ಷಣ ಹಾಗೂ ಆರೋಗ್ಯ, ಹಣಕಾಸು ಲೆಕ್ಕ ಪರಿಶೋಧನೆ ಮತ್ತು ಯೋಜನಾ ಸ್ಥಾಯಿ ಸಮಿತಿಗಳ ನಿರ್ಣಯಗಳನ್ನು ಸಭೆಯು ಚರ್ಚೆ ಇಲ್ಲದೇ ಅನುಮೋದಿಸಿತು.
ಉಪಾಧ್ಯಕ್ಷ ಎಚ್.ಪಿ. ಸ್ವರೂಪ್, ಉಪ ಕಾರ್ಯ ದರ್ಶಿಗಳಾದ ಮಹೇಶ್, ಅರುಣ್ ಕುಮಾರ್, ಮುಖ್ಯ ಯೋಜನಾಧಿಕಾರಿ ಪರಪ್ಪಸ್ವಾಮಿ ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸ್‌ಗೌಡ ಮತ್ತಿತರು ಸಭೆಯಲ್ಲಿ ಹಾಜರಿದ್ದರು.