Advertisement

ಉಪಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ

08:56 PM Nov 09, 2019 | Lakshmi GovindaRaju |

ಚಾಮರಾಜನಗರ: ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ ಜಿಲ್ಲಾ ಪಂಚಾಯ್ತಿ, ಗ್ರಾಮ, ತಾಲೂಕು ಪಂಚಾಯ್ತಿ ಹಾಗೂ ನಗರಸಭೆಯ ಸದಸ್ಯ ಸ್ಥಾನಕ್ಕೆ ನ.12ರಂದು ಚುನಾವಣೆ ನಡೆಯಲಿದ್ದು, ಚುನಾವಣೆ ನ್ಯಾಯಸಮ್ಮತವಾಗಿ, ಶಾಂತಿಯುತವಾಗಿ ನಡೆಯಲು ಜಿಲ್ಲಾಡಳಿತ ಎಲ್ಲಾ ಅಗತ್ಯ ಕ್ರಮ ಕೈಗೊಂಡಿದೆ.

Advertisement

ಚಾಮರಾಜನಗರ ತಾಲೂಕಿನ ಹರದನಹಳ್ಳಿ ಜಿಲ್ಲಾ ಪಂಚಾಯ್ತಿ ಕ್ಷೇತ್ರ, ಯಳಂದೂರು ತಾಲೂಕು ಪಂಚಾಯ್ತಿಯ ಯರಿಯೂರು ಕ್ಷೇತ್ರ ಹಾಗೂ ಕೊಳ್ಳೇಗಾಲ ನಗರಸಭೆಯ 19ನೇ ವಾರ್ಡ್‌, ಕೊಳ್ಳೇಗಾಲ ತಾಲೂಕಿನ ತೆಳ್ಳನೂರು ಗ್ರಾಮ ಪಂಚಾಯ್ತಿಯ ಬಾಣೂರು ಕ್ಷೇತ್ರ, ಹನೂರು ತಾಲೂಕಿನ ಚಿಕ್ಕಮಾಲಾಪುರ ಗ್ರಾಮ ಪಂಚಾಯ್ತಿಯ ಚಿಕ್ಕಮಾಲಾಪುರ ಕ್ಷೇತ್ರ, ಗುಂಡ್ಲುಪೇಟೆ ತಾಲೂಕಿನ ಮಂಗಲ ಗ್ರಾಮ ಪಂಚಾಯ್ತಿಯ ಬಂಡೀಪುರ ಕ್ಷೇತ್ರ, ರಾಘವಾಪುರ ಗ್ರಾಮ ಪಂಚಾಯ್ತಿಯ ಹಸಗೂಲಿ ಕ್ಷೇತ್ರಗಳಿಗೆ ನ.12ರಂದು ಚುನಾವಣೆ ನಡೆಯಲಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.

ಹರದಹಳ್ಳಿ ಜಿಪಂ ಕ್ಷೇತ್ರ: ಹರದನಹಳ್ಳಿ ಜಿಲ್ಲಾ ಪಂಚಾಯ್ತಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಟ್ಟು 38 ಮತಗಟ್ಟೆಗಳಿದ್ದು, 29602 ಮತದಾರರಿದ್ದಾರೆ. ಈ ಪೈಕಿ 14512 ಪುರುಷರು, 15088 ಮಹಿಳೆಯರು ಮತ್ತು ಇತರೆ 02 ಮತದಾರರಿದ್ದಾರೆ.

ಯರಿಯೂರು ತಾಪಂ ಕ್ಷೇತ್ರ: ಯಳಂದೂರು ತಾಲೂಕು ಪಂಚಾಯ್ತಿಯ ಯರಿಯೂರು ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಟ್ಟು 07 ಮತಗಟ್ಟೆಗಳಿದ್ದು, 6360 ಮತದಾರರಿದ್ದು, ಈ ಪೈಕಿ 3190 ಪುರುಷರು ಮತ್ತು 3170 ಮಹಿಳಾ ಮತದಾರದಿದ್ದಾರೆ.

ಕೊಳ್ಳೇಗಾಲ ನಗರಸಭೆ 19ನೇ ವಾರ್ಡ್‌: ಕೊಳ್ಳೇಗಾಲ ನಗರಸಭೆಯ 19ನೇ ವಾರ್ಡ್‌ಗೆ ಸಂಬಂಧಿಸಿದಂತೆ 1 ಮತಗಟ್ಟೆಯಿದ್ದು, 1434 ಮತದಾರರಿದ್ದು, ಈ ಪೈಕಿ 724 ಪುರುಷರು ಮತ್ತು 710 ಮಹಿಳಾ ಮತದಾರರಿದ್ದಾರೆ. ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಹೊರತುಪಡಿಸಿ, ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಮತ್ತು ಕೊಳ್ಳೇಗಾಲ ನಗರ ಸಭೆಯ 19ನೇ ವಾರ್ಡಿನ ಉಪ ಚುನಾವಣೆಗೆ ವಿದ್ಯುನ್ಮಾನ ಮತಯಂತ್ರಗಳನ್ನು ಉಪಯೋಗಿಸಲಾಗುತ್ತಿದೆ.

Advertisement

ನ್ಯಾಯ ಸಮ್ಮತ ಮತ್ತು ಪಾರದರ್ಶಕವಾಗಿ ಚುನಾವಣೆ ನಡೆಸಲು ಎಲ್ಲಾ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ಮತದಾನದ ನಂತರ ಮತದಾನವಾದ ವಿದ್ಯುನ್ಮಾನ ಮತಯಂತ್ರಗಳನ್ನು ಆಯಾ ತಾಲೂಕು ಕೇಂದ್ರದಲ್ಲಿ ಸ್ಥಾಪಿಸಿರುವ ಭದ್ರತಾ ಕೊಠಡಿಯಲ್ಲಿ ಪೊಲೀಸ್‌ ಬಂದೋಬಸ್ತ್ನೊಡನೆ ಸುರಕ್ಷಿತವಾಗಿಡಲಾಗುತ್ತದೆ. ನ.14ರಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯವನ್ನು ಆಯಾ ತಾಲೂಕು ಕೇಂದ್ರದಲ್ಲಿ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ.ಕಾವೇರಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next