Advertisement

ಸ್ವಾತಂತ್ರ್ಯೋತ್ಸವಕ್ಕೆ ಜಿಲ್ಲಾಡಳಿತ ಸಿದ್ಧತೆ

11:22 AM Aug 04, 2019 | Suhan S |

ಬಾಗಲಕೋಟೆ: ಜಿಲ್ಲೆಯಲ್ಲಿ ಆ. 15ರಂದು ಜರುಗಲಿರುವ ಸಂಭ್ರಮದ ಸ್ವಾತಂತ್ರೋತ್ಸವಕ್ಕೆ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ದುರ್ಗೇಶ ರುದ್ರಾಕ್ಷಿ ಹೇಳಿದರು.

Advertisement

ನವನಗರದ ಜಿಪಂ. ಸಭಾಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

15ರಂದು ಬೆಳಗ್ಗೆ 8:30ಕ್ಕೆ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ, 9ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ಹಾಗೂ ಸ್ವಾತಂತ್ರ್ಯೋತ್ಸವದ ಸಂದೇಶದ ನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಪಥಸಂಚಲನ ಕಾರ್ಯಕ್ರಮದಲ್ಲಿ ಪೊಲೀಸ್‌, ಗೃಹರಕ್ಷಕ ದಳ, ಸೇವಾದಳ, ಸ್ಕೌಟ್ ಆ್ಯಂಡ್‌ ಗೈಡ್ಸ್‌ ಹಾಗೂ ಎನ್‌ಸಿಸಿ ಕೆಡೆಟ್‌ಗಳನ್ನು ಆಹ್ವಾನಿಸಲು ತಿಳಿಸಲಾಯಿತು. ಪಥ ಸಂಚಲನಕ್ಕೆ ವೇದಿಕೆ ಮುಂಭಾಗದಲ್ಲಿ ಮ್ಯಾಟ್ ಹಾಕುವ ವ್ಯವಸ್ಥೆ ಮಾಡಲು ತಿಳಿಸಿದರು. ಧ್ವಜಾರೋಹಣ ವ್ಯವಸ್ಥೆ ಮಾಡಲು ಭಾರತ ಸೇವಾದಳ, ಪೊಲೀಸ್‌ ಇಲಾಖೆ, ತಹಶೀಲ್ದಾರ್‌ ಹಾಗೂ ಯುವಜನ ಸೇವಾ ಹಾಗೂ ಕ್ರೀಡಾಧಿಕಾರಿಗಳಿಗೆ ವಹಿಸಲಾಯಿತು.

ಕಾರ್ಯಕ್ರಮ ಯಶಸ್ವಿಗೊಳಿಸಲು ವಿವಿಧ ಸಮಿತಿ ರಚಿಸಲಾಯಿತು. ಜಿಲ್ಲೆಯಲ್ಲಿ ಪ್ಲಾಸ್ಟಿಕ್‌ ಧ್ವಜ ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಶಾಲಾ ಮಕ್ಕಳು ಪ್ಲಾಸ್ಟಿಕ್‌ ಧ್ವಜ ತರುವುದನ್ನು ಕಡ್ಡಾಯವಾಗಿ ನಿರ್ಬಂದಿಸಬೇಕು. ಶಿಷ್ಟಾಚಾರಕ್ಕೆ ಲೋಪವಾಗದಂತೆ ಧ್ವಜ ಸಂಹಿತೆಗೆ ಯಾವುದೇ ತರಹ ಅಪಚಾರವಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

Advertisement

ಕ್ರೀಡಾಂಗಣದಲ್ಲಿ ಸ್ಟೇಜ್‌ ನಿರ್ಮಾಣ, ಸ್ವಾತಂತ್ರ ಯೋಧರಿಗೆ, ಗಣ್ಯರಿಗೆ, ಶಾಸಕರಿಗೆ, ಸಂಸದರುಗಳಿಗೆ ಸೂಕ್ತ ಆಸನಗಳ ವ್ಯವಸ್ಥೆ ಕಲ್ಪಿಸಬೇಕು. ಧ್ವನಿವರ್ಧಕ ಹಾಗೂ ಜನರೇಟರ್‌ ವ್ಯವಸ್ಥೆ ಕೈಗೊಳ್ಳಲು ಸೂಚಿಸಿದರು. ಜಿಲ್ಲಾಡಳಿತ ಭವನಕ್ಕೆ ಸೇರಿದಂತೆ ತಾಲೂಕು ಆಡಳಿತ ಭವನಕ್ಕೂ ವಿದ್ಯುತ್‌ ಅಲಂಕಾರ ಮಾಡುವಂತೆ ಸೂಚಿಸಲಾಯಿತು.

ಸರ್ಕಾರೇತರ ಇಲಾಖೆ, ಸಂಸ್ಥೆಗಳಲ್ಲಿಯೂ ಸಹ ಧ್ವಜ ಸಂಹಿತೆಗೆ ಯಾವುದೇ ತರಹದ ಲೋಪವಾಗದಂತೆ ಕಡ್ಡಾಯವಾಗಿ ಧ್ವಜಾರೋಹಣ ನೆರವೇರಿಸಬೇಕು. ರಾಷ್ಟ್ರಧ್ವಜ ಕಟ್ಟುವ, ಅರಳಿಸುವ ಶಿಷ್ಟಾಚಾರ ಕುರಿತು ಸಂಪೂರ್ಣ ಮಾಹಿತಿಗಾಗಿ ಭಾರತ ಸೇವಾದಳದ ಜಿಲ್ಲಾ ಸಂಚಾಲಕ ಮಹೇಶ ಪತ್ತಾರ (ಮೊ:9449953906) ಅವರನ್ನು ಸಂಪರ್ಕಿಸುವಂತೆ ಸಭೆಯಲ್ಲಿ ತಿಳಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಶಶಿಕಲಾ ಹುಡೇದ, ಡಿಎಸ್‌ಪಿ ಗೋಂಧ‌ಳೆ, ಆಹಾರ ಇಲಾಖೆಯ ಉಪನಿರ್ದೇಶಕ ಶ್ರೀಶೈಲ ಕಂಕಣವಾಡಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಎಚ್. ಗೋನಾಳ, ಡಾ|ಅನಂತ ದೇಸಾಯಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next