Advertisement

ಕನ್ನಡ ರಾಜ್ಯೋತ್ಸವ ವ್ಯವಸ್ಥಿತ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

01:21 PM Oct 19, 2017 | |

ಮೈಸೂರು: ಜಿಲ್ಲಾಡಳಿತದ ವತಿಯಿಂದ ನ. 1ರಂದು ನಡೆಸಲಾಗುವ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಿ.ರಂದೀಪ್‌ ಸೂಚಿಸಿದರು.

Advertisement

ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರ ಹಾಗೂ ಕನ್ನಡ ಧ್ವಜಾರೋಹಣ ನೆರವೇರಿಸಲಿದ್ದು, ಬೆಳಗ್ಗೆ 9ಕ್ಕೆ ಭುವನೇಶ್ವರಿಗೆ ಪೂಜೆ ನೆರವೇರಿಸಲಾಗುವುದು. ಬಳಿಕ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಆವರಣದಿಂದ ತಾಯಿ ಭುವನೇಶ್ವರಿ ಭಾವಚಿತ್ರದ ಬೃಹತ್‌ ಮೆರವಣಿಗೆ ನಡೆಯಲಿದೆ.

ಮೆರವಣಿಗೆಯಲ್ಲಿ ಬೆಮೆಲ್‌, ಸಾರಿಗೆ ಸಂಸ್ಥೆ, ವಿವಿಧ ಕನ್ನಡಪರ ಸಂಘಟನೆಗಳು, ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳ ಸ್ತಬ್ಧಚಿತ್ರಗಳು, ಹಲವು ಸಾಂಸ್ಕೃತಿಕ ಕಲಾತಂಡಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಿದೆ ಎಂದು ಸೂಚಿಸಿದರು.

ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಗೈರು ಹಾಜರಾಗದಂತೆ ಕಡ್ಡಾಯವಾಗಿ ಹಾಜರಾಗಬೇಕಿದೆ. ಇನ್ನೂ ಕಾರ್ಯಕ್ರಮದ ಅಂಗವಾಗಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮ ಕಲಾಮಂದಿರದಲ್ಲಿ ನಡೆಯಲಿದ್ದು, ಪ್ರಶಸ್ತಿ ವಿಜೇತರಿಗೆ ಸನ್ಮಾನ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರು ನೆರವೇರಿಸಲಿದ್ದಾರೆ. 

ಇನ್ನೂ ರಾಜ್ಯೋತ್ಸವದ ಅಂಗವಾಗಿ ನಗರದ ಪ್ರಮುಖ ವೃತ್ತಗಳಲ್ಲಿ ಕನ್ನಡ ಭಾವುಟಗಳನ್ನು ಅಳವಡಿಸುವ ಜತೆಗೆ ಕನ್ನಡಪರ ಹೋರಾಟಗಾರರಿಗೆ ಹೆಚ್ಚು ಸಂಖ್ಯೆಯಲ್ಲಿ ಪ್ರಶಸ್ತಿ ನೀಡಬೇಕು ಎಂದರು. ಇದೇ ವೇಳೆ ಮಾತನಾಡಿದ ಕೆಲವು ಸಂಘಟನೆಗಳ ಪದಾಧಿಕಾರಿಗಳು, ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಚಿತ್ರಮಂದಿರಗಳಲ್ಲಿ ಕನ್ನಡ ಚಲನಚಿತ್ರಗಳನ್ನು ಪ್ರದರ್ಶಿಸಬೇಕು.

Advertisement

ಒಂದು ವಾರಗಳ ಕಾಲ ಕಡ್ಡಾಯವಾಗಿ ಕನ್ನಡ ಚಿತ್ರಗಳು ಪ್ರದರ್ಶನಗೊಳ್ಳುವ ಬಗ್ಗೆ ಪರಿಶೀಲಿಸಬೇಕಿದೆ. ಜತೆಗೆ ನಾಮಪಲಕಗಳು ಕನ್ನಡದಲ್ಲಿರುವ ಬಗ್ಗೆ ನಗರ ಪಾಲಿಕೆಯಿಂದ ಎಲ್ಲಾ ಸಂಸ್ಥೆಗಳಿಗೆ ಸೂಚನೆ ನೀಡುವಂತೆ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಟಿ.ಯೋಗೇಶ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಚನ್ನಪ್ಪ, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳಾದ ಮೂಗೂರು ನಂಜುಂಡಸ್ವಾಮಿ, ತಾಯೂರು ವಿಠಲಮೂರ್ತಿ, ಕನ್ನಡ ವೇದಿಕೆ ಕಾರ್ಯದರ್ಶಿ ಪಾಪಣ್ಣ, ಕರ್ನಾಟಕ ಸರ್ವೋದ್ಯಯ ಸೇನೆಯ ಅಧ್ಯಕ್ಷ ರವಿಶಂಕರ್‌, ಅಖೀಲ ಕರ್ನಾಟಕ ಡಾ.ರಾಜ್‌ಕುಮಾರ್‌ ಸಂಘದ ಸಂಸ್ಥಾಪಕ ಅಧ್ಯಕ್ಷ ರಮೇಶ್‌ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಅಧಿಕಾರಿಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next