Advertisement

ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಪ್ರೇರಣಾ ಜಾರಿ: ಕುಮಾರ 

04:49 PM Jul 10, 2018 | |

ಧಾರವಾಡ: ವಿದ್ಯಾರ್ಥಿಗಳ ನಿರಂತರ ಹಾಜರಾತಿ ಮತ್ತು ಸಕ್ರಿಯ ಭಾಗವಹಿಸುವಿಕೆಗಾಗಿ ಶಿಕ್ಷಣ ಫೌಂಡೇಶನ್‌ ಮತ್ತು ಸಮಗ್ರ ಶಿಕ್ಷಣ ಅಭಿಯಾನ ಸಹಭಾಗಿತ್ವದ ಪ್ರೇರಣಾ ಯೋಜನೆಯನ್ನು ಪ್ರಸಕ್ತ ಸಾಲಿನಿಂದ ರಾಜ್ಯದ ಎಲ್ಲ ಶೈಕ್ಷಣಿಕ ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಧಾರವಾಡ ಅಪರ ಆಯುಕ್ತರ ಕಚೇರಿ ನಿರ್ದೇಶಕ ಎನ್‌.ಎಸ್‌. ಕುಮಾರ ಹೇಳಿದರು.

Advertisement

ಇಲ್ಲಿಯ ಶಹರ ಕ್ಷೇತ್ರಶಿಕ್ಷಣಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ಪ್ರೇರಣಾ ಕಾರ್ಯಕ್ರಮದ ಜಿಲ್ಲಾ ಹಂತದ ಅನುಷ್ಠಾನ ಮತ್ತು ಮೇಲ್ವಿಚಾರಣೆ ಸಮಿತಿ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು. ಈ ಮೊದಲು ಪ್ರಾಯೋಗಿಕವಾಗಿ ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಜಾರಿಗೊಳಿಸಲಾಗಿದ್ದ ಪ್ರೇರಣಾ ಯೋಜನೆಯನ್ನು ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರಾರಂಭದಿಂದ ರಾಜ್ಯದ ಎಲ್ಲ ಶೈಕ್ಷಣಿಕ ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲಾಗಿದೆ ಎಂದರು.

ಪ್ರೇರಣಾ ಕಾರ್ಯಕ್ರಮವು ಶಿಕ್ಷಣ ಇಲಾಖೆ ಯೋಜನೆಯಾಗಿದೆ. ಜಿಲ್ಲೆಯ ಎಲ್ಲ ಸರಕಾರಿ 4ರಿಂದ 9ನೇ ತರಗತಿಯ ಶಾಲೆಗಳ ಮುಖ್ಯ ಶಿಕ್ಷಕರಿಗೆ ಮತ್ತು ಸಹ ಶಿಕ್ಷಕರಿಗೆ ಕಾರ್ಯಕ್ರಮದ ಗುರಿ-ಉದ್ದೇಶ ಮತ್ತು ಮಹತ್ವವನ್ನು ಮನದಟ್ಟು ಮಾಡುವುದು ಅಗತ್ಯವಾಗಿದೆ. ಈ ಕಾರ್ಯಕ್ರಮದ ಮೂಲಕ ರಾಜ್ಯದ ಸುಮಾರು 48 ಸಾವಿರ ಸರಕಾರಿ ಶಾಲೆಗಳು ಹಾಗೂ 27ಲಕ್ಷಕ್ಕಿಂತ ಹೆಚ್ಚು ವಿದ್ಯಾರ್ಥಿಗಳನ್ನು ಇಲಾಖೆ ಶಿಕ್ಷಣ ಕಾರ್ಯಕ್ರಮಗಳು ತಲುಪಲಿವೆ ಎಂದು ಹೇಳಿದರು.

ಇಲಾಖೆಯ ಸಿಸ್ಲಿಪ್‌ನ ನಿರ್ದೇಶಕ ರಘುವೀರ, ಉಪನಿರ್ದೆಶಕ ಎನ್‌.ಎಚ್‌. ನಾಗೂರ, ಜಿಲ್ಲೆಯ ಎಲ್ಲ ಕ್ಷೇತ್ರಶಿಕ್ಷಣಾಧಿಕಾರಿಗಳು, ಸಮನ್ವಯಾಧಿ ಕಾರಿಗಳು, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು, ಶಿಕ್ಷಣ ಫೌಂಡೇಶನ್‌ ನಿರ್ದೆಶಕ ಶಂಭುಲಿಂಗ, ನಾರಾಯಣ ಕಿರ್ಲೋಸ್ಕರ ಪಾಲ್ಗೊಂಡಿದ್ದರು. ಪ್ರಮೋದ ಮಹಾಲೆ ಪ್ರಾಸ್ತಾವಿಕ ಮಾತನಾಡಿದರು. ಕೆ.ಎಂ. ಶೇಖ್‌ ನಿರೂಪಿಸಿದರು. ಶಹರ ಕ್ಷೇತ್ರಶಿಕ್ಷಣಾಧಿಕಾರಿ ಎ.ಎ. ಖಾಜಿ ವಂದಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next