Advertisement

ಗುಣಮಟ್ಟದ ಉಂಡೆ ಕೊಬ್ಬರಿ ಖರೀದಿ

01:13 PM Feb 14, 2023 | Team Udayavani |

ಮಂಡ್ಯ: ಕನಿಷ್ಠ ಬೆಂಬಲ ಯೋಜನೆಯಡಿ 2023ನೇ ಸಾಲಿನ ಎಫ್‌ಎಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿ ಖರೀದಿಗೆ ಸರ್ಕಾರ ಮುಂದಾಗಿದೆ. ಜಿಲೆಯಲ್ಲಿ ನೋಂ ದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ ರೈತರು ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಡಾ.ಎಚ್‌.ಎನ್‌.ಗೋಪಾಲಕೃಷ್ಣ ತಿಳಿಸಿದರು.

Advertisement

ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ರೈತರಿಂದ ನೇರವಾಗಿ ಉಂಡೆ ಕೊಬ್ಬರಿಯನ್ನು ಖರೀದಿಸುವ ಸಂಬಂಧ ಜಿಲ್ಲಾ ಟಾಸ್ಕ್ ಪೋರ್ಸ್‌ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡಿ, ಕೊಬ್ಬರಿ ಪ್ರತಿ ಕ್ವಿಂಟಾಲ್‌ ಗೆ ಸರ್ಕಾರ 11,750 ರೂ. ಕನಿಷ್ಟ ಬೆಂಬಲ ಬೆಲೆ ಘೋಷಿಸಿದೆ. ಸರ್ಕಾರದ ಆದೇಶದಂತೆ ಗುಣಮಟ್ಟದ ಉಂಡೆ ಕೊಬ್ಬರಿಯನ್ನು ರೈತರಿಂದ ನೇರವಾಗಿ ನಾಫೆಡ್‌ ಸಂಸ್ಥೆಯ ಕರ್ನಾಟಕ ಸರ್ಕಾರದ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತದಿಂದ ಖರೀದಿ ಪ್ರಕ್ರಿಯೆ ನಡೆಸಲಿದ್ದು, ನಾಗಮಂಗಲ ತಾಲೂಕಿನ ಕದಬಳ್ಳಿ ಹಾಗೂ ಕೆ.ಆರ್‌.ಪೇಟೆ ಎಪಿಎಂಸಿ ಆವರಣದಲ್ಲಿ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ತಿಳಿಸಿದರು.

ಖರೀದಿ ಕೇಂದ್ರದಲ್ಲಿ ಸೌಲಭ್ಯ ನೀಡಿ: ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್‌ ಉಂಡೆ ಕೊಬ್ಬರಿಯನ್ನು ಪ್ರತಿ ಎಕರೆಗೆ 6 ಕ್ವಿಂಟಾಲ್‌ನಂತೆ ಖರೀದಿಸಬೇಕು. ರೈತರ ನೋಂದಣಿ ಕಾಲಾವಧಿಯನ್ನು 45 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 6 ತಿಂಗಳವರೆಗೆ ನಿಗದಿಪಡಿಸಲಾಗಿದೆ. ನೋಂದಣಿ ಹಾಗೂ ಖರೀದಿಗೆ ಬೇಕಿರುವ ಸಿಬ್ಬಂದಿಗಳನ್ನು ನೇಮಕ ಮಾಡಲು, ಖರೀದಿ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ರೈತರಿಗೆ ನೆರವಾಗುವ ರೀತಿ ಸಹಾಯವಾಣಿ ಪ್ರಾರಂಭಿಸುವುದು ಸೂಕ್ತ ಎಂದರು.

ಜಿಲ್ಲೆಯಲ್ಲಿ ಪ್ರಮುಖವಾಗಿ ಕೆ.ಆರ್‌.ಪೇಟೆ ಹಾಗೂ ನಾಗಮಂಗಲ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದ ತೆಂಗಿನ ಮರಗಳಿದ್ದು, ಜಿಲ್ಲೆಯಲ್ಲಿ ಒಟ್ಟು 68,466 ಹೆಕ್ಟೇರ್‌ ಪ್ರದೇಶದಲ್ಲಿ ತೆಂಗಿನ ಮರಗಳಿವೆ. ಒಟ್ಟು ಉತ್ಪಾದನೆ 5096 ಲಕ್ಷ ಕಾಯಿಗಳಾಗಿವೆ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಎಪಿಎಂಸಿ ಉಪನಿರ್ದೆಶಕ ಕೆ.ಶ್ರೀನಿವಾಸರೆಡ್ಡಿ, ಕೆ.ಆರ್‌.ಪೇಟೆ ಎಪಿಎಂಸಿ ಕಾರ್ಯದರ್ಶಿ ರಫೀಕ್‌ ಅಹಮ್ಮದ್‌, ನಾಗಮಂಗಲ ಎಪಿಎಂಸಿಯ ಸೋಮಶೇಖರ್‌, ರಜೀತ್‌, ನಫೇಢ್‌ ಸಂಸ್ಥೆಯ ಸತೀಶ್‌, ತೋಟಗಾರಿಕೆ ಇಲಾಖೆಯ ಚಂದು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next