Advertisement

ಅಪನಂಬಿಕೆ-ಅತಿ ಕಾಳಜಿಯಿಂದ ಸ್ಕಿಜೋಫ್ರೇನಿಯಾ

04:56 PM May 27, 2022 | Team Udayavani |

ಕಾರವಾರ: ಮಾನಸಿಕ ಕಾಯಿಲೆಯಿಂದ ಬಳಲುತ್ತಿರುವ ರೋಗಿಯನ್ನು ನಿರ್ಲಕ್ಷ್ಯ ಮಾಡದೆ ಅಗತ್ಯ ಚಿಕಿತ್ಸೆ ಔಷಧೋಪಚಾರ ಕೊಡಿಸುವ ಮೂಲಕ ಸಮಾಜದಲ್ಲಿ ಗೌರವಯುತವಾಗಿ ಬಾಳುವಂತೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹೆಚ್ಚುವರಿ ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ದರಗದ್‌ ಹೇಳಿದರು.

Advertisement

ಜಿಲ್ಲಾ ಆಡಳಿತ, ಜಿಪಂ, ಡಿಎಚ್‌ಒ ಇಲಾಖೆ, ವೈದ್ಯಕೀಯ ವಿಜ್ಞಾನ ಸಂಸ್ಥೆ, ಮಾನಸಿಕ ಆರೋಗ್ಯ ವಿಭಾಗ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಡಿಎಚ್‌ಒ ಕಚೇರಿ ಸಭಾಭವನದಲ್ಲಿ ನಡೆದ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸ್ಕಿಜೋಫ್ರೇನಿಯಾ ರೋಗವು ಮಾನಸಿಕ ಖನ್ನತೆಯಿಂದ ಬಳಲುವ ಕಾಯಿಲೆಯಾಗಿದ್ದು, ವಿಶ್ವದಾದ್ಯಂತ ಕಂಡುಬರುವ ರೋಗವಾಗಿದೆ. ಎಲ್ಲರೂ ಒಂದಿಲ್ಲೊಂದು ರೀತಿ ಈ ರೋಗಕ್ಕೆ ತುತ್ತಾಗುತ್ತಲೇ ಇರುತ್ತಾರೆ.

ಅನುಮಾನ, ಅಪನಂಬಿಕೆ, ಅತಿಯಾದ ಕಾಳಜಿ ಈ ರೋಗಕ್ಕೆ ರಹದಾರಿಯಾಗಿದ್ದು, ಮಾನಸಿಕವಾಗಿ ಗಟ್ಟಿತನ ಬೆಳೆಸಿಕೊಳ್ಳುವ ಮೂಲಕ ರೋಗ ಸುಳಿಯದಂತೆ ನೋಡಿಕೊಳ್ಳಬಹುದಾಗಿದೆ ಎಂದರು.

ಮಾನಸಿಕ ಕಾಯಿಲೆಗಳಿಗೆ ಅಗತ್ಯ ಚಿಕಿತ್ಸೆ, ಔಷಧೋಪಚಾರ ಲಭ್ಯವಿದ್ದು ಅದರ ಪ್ರಯೋಜನ ಪಡೆದು ಮುಖ್ಯವಾಹಿನಿಗೆ ಬರುವ ಕಾರ್ಯವಾಗಬೇಕು. ವೈದ್ಯಕೀಯ ನೆರವು ಪಡೆಯುವುದು ಹಾಗೂ ಕೊಡಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ. ಮಾನಸಿಕ ರೋಗದಿಂದ ಬಳಲುತ್ತಿರುವವರು ಕಂಡುಬಂದಲ್ಲಿ ಅಂತಹವರಿಗೆ ಚಿಕಿತ್ಸೆ ಕೊಡಿಸಲು ಸಂಬಂಧಿಸಿದವರು ಇಲ್ಲವೇ ಸುತ್ತಮುತ್ತಲಿನವರು ಅಗತ್ಯ ಕಾಳಜಿ ವಹಿಸಬೇಕು ಎಂದು ಹೇಳಿದರು.

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ| ಶಂಕರ್‌ರಾವ್‌ ಪ್ರಾಸ್ತಾವಿಕ ಮಾತನಾಡಿದರು. ಜಿಲ್ಲಾ ಶಸ್ತ್ರಚಿಕಿತ್ಸಕ ಹಾಗೂ ವೈದ್ಯಕೀಯ ಅಧಿಕಾರಿ ಶಿವಾನಂದ ಮಾತನಾಡಿ, ಈ ರೋಗವು ವ್ಯಕ್ತಿಯು ತನ್ನಿಂದ ತಾನೇ ತಂದುಕೊಳ್ಳುವಂತಹದ್ದು. ಎಷ್ಟೇ ಕಷ್ಟದ ಪರಿಸ್ಥಿತಿ ಎದುರಾದರೂ ಕುಗ್ಗದೇ ಗಟ್ಟಿಯಾಗಿ ನಿಲ್ಲಬೇಕು. ಬೇರೆಯವರ ನಕಾರಾತ್ಮಕ ಮಾತುಗಳಿಗೆ ನಿರ್ಲಕ್ಷ್ಯ  ವಹಿಸಬೇಕು. ಮಾದಕ ವಸ್ತುಗಳಿಂದ ದೂರವಿರಬೇಕು. ಮನಸಿನ ಕೊಳೆಯನ್ನು ತೊಡೆದು ಹಾಕಬೇಕು. ಸ್ವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು ಎಂದರು.

Advertisement

ಮಾನಸಿಕ ಖನ್ನತೆಯಿಂದ ಬಳಲುತ್ತಿರುವವರಿಗೆ ಅಗತ್ಯ ಚಿಕಿತ್ಸೆ ಹಾಗೂ ಔಷಧೋಪಚಾರ ನೀಡಲು ಆರೋಗ್ಯ ಇಲಾಖೆ ಸಿದ್ಧವಾಗಿದೆ. ಅಂತಹ ವ್ಯಕ್ತಿಗಳು ಕಂಡುಬಂದಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಚಿಕಿತ್ಸೆ ಕೊಡಿಸಲು ಮುಂದಾಗಬೇಕೆಂದರು.

ಡಿಎಚ್‌ಒ ಶರದ್‌ ಅಧ್ಯಕ್ಷತೆ ವಹಿಸಿ, ಸರಕಾರದ ವತಿಯಿಂದ ದೊರೆಯುವ ಆರೋಗ್ಯ ಸವಲತ್ತುಗಳನ್ನು ಅಗತ್ಯವಿರುವವರು ಪಡೆಯಬೇಕು ಎಂದು ಹೇಳಿದರು.

ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ| ಅನ್ನಪೂರ್ಣ ವಸ್ತ್ರದ, ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ| ರಮೇಶ್‌ರಾವ್‌, ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ| ಜಗದೀಶ ನಾಯ್ಕ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಅರ್ಚನಾ ನಾಯ್ಕ, ಜಿಲ್ಲಾ ಆಸ್ಪತ್ರೆ ಮನೋರೋಗ ತಜ್ಞ ಡಾ| ಅಕ್ಷಯ್‌ ಘಾಟಕ, ಟಿಎಚ್‌ಒ ಡಾ| ಸೂರಜ್‌ ನಾಯಕ್‌ ಸೇರಿದಂತೆ ನರ್ಸಿಂಗ್‌ ವಿದ್ಯಾರ್ಥಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next