Advertisement

ಬಿಟ್ಟು ಹೊದ ಹೆಂಡತಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

08:22 PM Jan 06, 2023 | Team Udayavani |

ಕೊರಟಗೆರೆ: ಹೆಂಡತಿ ಬಿಟ್ಟು ಹೊಗಿದ್ದ ಕಾರಣ ಗಂಡ ಜೀವನದಲ್ಲಿ ಜಿಗುಪ್ಸೆ ಗೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಟಗೆರೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ತಾಲೂಕಿನ ಹೊಳವನಹಳ್ಳಿ ಹೋಬಳಿಯ ಸಿರುಗೋನಹಳ್ಳಿ ಗ್ರಾಮದ ಸಿದ್ದರಾಜು 45 ವರ್ಷ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಘಟನೆಯ ವಿವರ

ಮೃತ ವ್ಯಕ್ತಿಯು ತನ್ನ ವಾಸದ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ವಿಷ ಸೇವಿಸಿ ಒದ್ದಾಡುತ್ತಿದ್ದುದ್ದನ್ನು ಕಂಡು ಸಾರ್ವಜನಿಕರ ಸಹಾಯದಿಂದ ಚಿಕಿತ್ಸೆ ಗಾಗಿ ಹೊಸೂರಿಗೆ ಕರೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆಯನ್ನು ಕೊಡಿಸಿ, ನಂತರ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಅದರೆ ಚಿಕಿತ್ಸೆ ಫಲಕಾರಿಯಾಗದೇ ಅಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು‌ ಬಂದಿದೆ.

ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸ್ಐ ಚೇತನ್ ಕುಮಾರ್ ,ಎಎಸ್ಐ ಮಂಜುನಾಥ, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next