Advertisement

ದಿವ್ಯಾ ಹಾಗರಗಿ ಬಂಧನ: ಸಿಎಂ ಬೊಮ್ಮಾಯಿ ಭೇಟಿಯಾದ ಡಿಜಿಪಿ ಪ್ರವೀಣ್ ಸೂದ್

10:14 AM Apr 29, 2022 | Team Udayavani |

ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದ ಕಿಂಗ್ ಪಿನ್ ದಿವ್ಯಾ ಹಾಗರಗಿ ಬಂಧನ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಡಿಜಿಪಿ ಪ್ರವೀಣ್ ಸೂದ್ ಭೇಟಿ ಮಾಡಿದರು.

Advertisement

ಆರ್ ಟಿ ನಗರದ ನಿವಾಸದಲ್ಲಿ ಸಿಎಂ ಭೇಟಿಯಾದ ಪ್ರವೀಣ್ ಸೂದ್, ಅಕ್ರಮದ ತನಿಖೆ, ಆರೋಪಿ ದಿವ್ಯಾ ಹಾಗರಗಿ ಬಂಧನದ ಬಗ್ಗೆ ಮಾಹಿತಿ ನೀಡಿದ್ದಾರೆ.

ಪುಣೆಯಲ್ಲಿ ಬಂಧನ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಸಂಬಂಧಿಸಿದಂತೆ ಪ್ರಮುಖ ಆರೋಪಿ, ದಿವ್ಯಾ ಹಾಗರಗಿಯನ್ನು ಸಿಐಡಿ ತಂಡ ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿದೆ.

ದಿವ್ಯಾ ಹಾಗರಗಿ ಒಡೆತನಕ್ಕೆ ಸೇರಿದ ಜ್ಞಾನ ಜ್ಯೋತಿ ಶಾಲೆಯ ಪರೀಕ್ಷೆ ಕೇಂದ್ರದಲ್ಲಿ ಒಎಂಆರ್ ಶೀಟ್ ತಿದ್ದುಪಡಿ ಹಾಗೂ ಬ್ಲೂಟೂತ್ ಮೂಲಕ ಅಕ್ರಮ ಎಸಗಿದ ಹಿನ್ನೆಲೆಯಲ್ಲಿ ಕಳೆದ ಏ. 9 ರಂದು ಎಫ್ ಐಆರ್ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದ ದಿವ್ಯಾಳನ್ನು ಕೊನೆಗೂ ಬಂಧಿಸಲಾಗಿದೆ.

ಇದನ್ನೂ ಓದಿ:ಸದ್ಯದಲ್ಲೇ 6ರಿಂದ 12 ವರ್ಷದ ಮಕ್ಕಳಿಗೆ ಲಸಿಕೆ ಅಭಿಯಾನ ಆರಂಭ: ಸಚಿವ ಸುಧಾಕರ್

Advertisement

ಕಳೆದ ಎರಡುವರೆ ವಾರಗಳಿಂದ ನಾಪತ್ತೆಯಾಗಿದ್ದ ದಿವ್ಯಾ ಬಂಧನ ಪೊಲೀಸರಿಗೆ ದೊಡ್ಡ ಸವಾಲಾಗಿತ್ತು.‌ ಸಿಐಡಿ ಡಿಜಿಪಿ ಪಿ.ಎಸ್.‌ಸಂಧು ಕಲಬುರಗಿಗೆ ಆಗಮಿಸಿ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿ ನಾಲ್ಕು ತಂಡಗಳನ್ನು ರಚಿಸಲಾಗಿತ್ತು.  ಪುಣೆಯ ಹೊಟೇಲೊಂದರದಲ್ಲಿ ರಾತ್ರಿ ಊಟ ಮಾಡುವ ಸಮಯದಲ್ಲಿ ಸಿಐಡಿ ತಂಡ ದಾಳಿ ನಡೆಸಿ ಬಂಧಿಸಿದೆ.

ದಿವ್ಯಾಗೆ ಆಶ್ರಯ ನೀಡಿದ್ದ ಸೊಲ್ಲಾಪುರ ಉದ್ಯಮಿ ಸುರೇಶ ಹಾಗೂ ಜ್ಞಾನಜ್ಯೋತಿ ಶಾಲೆಯ ಮುಖ್ಯೋಧ್ಯಾಪಕ ಕಾಶೀನಾಥ್, ಮೇಲ್ವಿಚಾರಕರಾದ ಅರ್ಚನಾ, ಸುನಂದಾ ಹಾಗೂ ಅಕ್ರಮವಾಗಿ ಪರೀಕ್ಷೆ ಬರೆದ ಶಾಂತಾಬಾಯಿ ಸೇರಿ ಆರು ಜನರನ್ನು ಬಂಧಿಸಲಾಗಿದೆ. ಗುರುವಾರದವರೆಗೂ 17 ಆರೋಪಿಗಳನ್ನು ಬಂಧಿಸಲಾಗಿತ್ತು ಈಗ ಆರು ಆರೋಪಿಗಳನ್ಬು ಬಂಧಿಸುವುದರ ಮೂಲಕ ಸಂಖ್ಯೆ 23ಕ್ಕೆ ಏರಿದಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next