Advertisement

ಪಿಎಸ್‍ಐ ನೇಮಕಾತಿ ಅಕ್ರಮ; ದಿವ್ಯಾ ಹಾಗರಗಿ ಬಿಜೆಪಿ ನಾಯಕಿಯಲ್ಲ: ತೇಲ್ಕೂರ ಸ್ಪಷ್ಟನೆ

01:34 PM Apr 18, 2022 | Team Udayavani |

ಬೆಂಗಳೂರು: ಪಿಎಸ್‍ಐ ನೇಮಕಾತಿ ಪರೀಕ್ಷೆಯ ಅಕ್ರಮದಲ್ಲಿ ಭಾಗಿಯಾದ ಆರೋಪಿ ಕಲಬುರ್ಗಿಯ ಶಾಲೆಯೊಂದರ ಮುಖ್ಯಸ್ಥೆ ದಿವ್ಯಾ ಹಾಗರಗಿ ಅವರಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಅವರು ಪಕ್ಷದ ನಾಯಕಿಯಲ್ಲ ಎಂದು ಬಿಜೆಪಿ ರಾಜ್ಯ ವಕ್ತಾರ ಮತ್ತು ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಸ್ಪಷ್ಟಪಡಿಸಿದ್ದಾರೆ.

Advertisement

ದಿವ್ಯಾ ಹಾಗರಗಿ ಅಥವಾ ಯಾರೇ ಅಕ್ರಮದಲ್ಲಿ ಭಾಗವಹಿಸಿದ್ದರೆ ಅದನ್ನು ಪಕ್ಷ ಮತ್ತು ಸರಕಾರ ಸಹಿಸಿಕೊಳ್ಳುವುದಿಲ್ಲ. ಅಕ್ರಮ ನಡೆದಿರುವುದು ಸಾಬೀತಾದರೆ ಶಿಕ್ಷೆ ಆಗಲಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ:ಕೋಮು ಗಲಭೆ ಯಾರ ಆಡಳಿತದಲ್ಲಿ ಹೆಚ್ಚಾಗಿತ್ತು… ಜೆಪಿ ನಡ್ಡಾ ಬಹಿರಂಗ ಪತ್ರದಲ್ಲಿ ಏನಿದೆ?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರಕಾರವು ಈ ವಿಷಯದ ಕುರಿತು ಸಿಒಡಿ ತನಿಖೆ ನಡೆಸಲು ಸೂಚಿಸಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next