Advertisement
ಕರಾವಳಿ ಪ್ರದೇಶದಲ್ಲಿ ಪ್ರತಿಯೊಂದು ಹಬ್ಬಗಳಿಗೆ ಭಿನ್ನವಾದ ವಿಶೇಷತೆಗಳಿದ್ದು ಎಲ್ಲಾ ಹಬ್ಬಗಳನ್ನು ಸಂಪ್ರದಾಯದಂತೆ ಆಚರಿಸುತ್ತಾ ಬಂದಿರುತ್ತಾರೆ. ಅದರಂತೆ ದೀಪಾವಳಿ ಹಬ್ಬದಲ್ಲಿಯು ವಿಶೇಷತೆಗಳಿವೆ. ದಿಪಾವಳಿ ಹಬ್ಬದ ಬಲಿಪಾಡ್ಯಮಿಯಂದು ತಾಲೂಕಿನ ಕ್ಷತ್ರೀಯ ಕೋಮಾರಪಂಥ ಸಮಾಜದ ವಿಶಿಷ್ಠ ಆಚರಣೆಯ ಹಬ್ಬವೆ ಹೊಂಡೆ ಹಬ್ಬ.
Related Articles
Advertisement
ಈ ಹೊಂಡೆ ಹಬ್ಬದಲ್ಲಿ ಕೋಮಾರಪಂಥ ಸಮಾಜದ ಲಕ್ಷ್ಮೇಶ್ವರ ಹಾಗೂ ಹೊನ್ನೇಕೇರಿಯ ಊರಿನ ಎರಡು ತಂಡಗಳು ಪಾಲ್ಗೊಳ್ಳುತ್ತದೆ. ಕುಂಬಾರಕೇರಿಯ ಕಳಸದೇವಸ್ಥಾನದಿಂದ ಹೊರಟ ಲಕ್ಷ್ಮೇಶ್ವರ ತಂಡವು ವೀರಾವೇಶದಿಂದ ಹೊಂಡೆ ಹೊಂಡೆ ಎನ್ನುತ್ತಾ ಎದುರಾಳಿಯನ್ನು ಎದುರಿಸಲು ನಗರದ ಶ್ರೀ ಶಾಂತಾದುರ್ಗ ದೇವಸ್ಥಾನದ ಎದುರಿನಲ್ಲಿ ಹೊನ್ನೇಕೇರಿ ತಂಡದ ನಡುವೆ ಮುಖಾಮುಖಿಗೊಂಡು ಎರಡು ಗ್ರಾಮ ಹಿರಿಯರಿಂದ ಹೊಂಡೆ ಆಟಕ್ಕೆ ಚಾಲನೆ ದೊರೆಯುತ್ತದೆ.
ಈ ಹೊಂಡೆ ಹಬ್ಬದ ನಿಯಮದಂತೆ ಯಾವುದೇ ಕಾರಣಕ್ಕೆ ಮಂಡಿಯ ಕೆಳಭಾಗಕ್ಕೆ ಹೊಡೆಯಬೇಕೆನ್ನುವ ನಿಯಮ ಪಾಲಿಸಬೇಕಾಗುತ್ತದೆ. ಆದರೂ ಕೆಲವೊಮ್ಮೆ ಗುರಿಕಾರನ ಗುರಿತಪ್ಪಿ ಎದುರಾಳಿಯು ತೀವೃ ತರಹದ ಹೊಡೆತಕ್ಕೆ ಗುರಿಯಾಗುವ ಸಾಧ್ಯತೆ ಇರುತ್ತದೆ. ಇವುಗಳನ್ನು ನಿಯಂತ್ರಿಸಲು ಸಮಾಜದ ಮುಖಂಡರು ನಿರ್ಣಾಯಕರಾಗಿರುತ್ತಾರೆ. ಎರಡು ಪಂಗಡಗಳಲ್ಲಿ ಯಾರು ಸಮರ ವೀರರು ಎನ್ನುವುದನ್ನು ಈ ನಿರ್ಣಾಯಕರು ನಿರ್ಧರಿಸುತ್ತಾರೆ. ಹೊಂಡೆ ಹಬ್ಬದಲ್ಲಿ ಗೆದ್ದ ಪಂಗಡಕ್ಕೆ ದೊಡ್ಡ ಮೊಗ್ಗೆ ಕಾಯಿಯನ್ನು ನೀಡಿದರೆ, ಎರಡನೆ ಪಂಗಡಕ್ಕೆ ಸಣ್ಣ ಮೊಗ್ಗೆಕಾಯಿಯನ್ನು ನೀಡುವ ಸಂಪ್ರದಾಯ ಪಾರಂಪರಿಕವಾಗಿ ನಡೆದುಕೊಂಡು ಬಂದಿದೆ.
ನಗರದ ಮದ್ಯವರ್ತಿ ಸ್ಥಳ ನಾಲ್ಕು ಕಡೆಗಳಲ್ಲಿ ಹೊಂಡೆಯೊಂದಿಗೆ ಹೋರಾಟಕ್ಕಿಳಿದು ತಮ್ಮ ಕ್ಷತ್ರೀಯ ವರ್ಚಸನ್ನು ತರ‍್ಪಡಿಸಿದ್ದಾರೆ. ನಂತರ ಎರಡು ಪಂಗಡಗಳು ಒಂದಾಗಿ ಊರಿನ ದೊಡ್ಡ ದೇವರನಿಸಿಕೊಂಡ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಗೋವಿಂದ ಗೋವಿಂದ ಎನ್ನುತ್ತ ತೆರಳಿ ಹೋರಾಟದ ನೆನಪುಗಳನ್ನು ಮೆಲಕು ಹಾಕುತ್ತಾರೆ. ಅಲ್ಲದೆ ಹೊಂಡೆ ಹಬ್ಬದ ಸಮಯದಲ್ಲಿ ಆದ ಸಣ್ಣಪುಟ್ಟ ತಪ್ಪುಗಳನ್ನು ಒಪ್ಪಿಕೊಂಡು ಸಮಾಜದವರೆಲ್ಲ ಒಂದಾಗಿ ಬಾಳೋಣ ಎನ್ನುವ ಸಾಮರಸ್ಯ ಮೆರೆಯುತ್ತಾರೆ.
ಅನಾಕಾಲದಿಂದಲೂ ಕೋಮರಪಂಥ ಸಮಾಜ ಹೊಂಡೆ ಹಬ್ಬವನ್ನು ಐತಿಹಾಸಿಕವಾಗಿ ಆಚರಿಸಿಕೊಂಡು ಬಂದಿದ್ದೇವೆ. ಇದರಿಂದ ನಮ್ಮ ಸಮಾಜದದಲ್ಲಿ ಸಂಘಟನೆಯ ಜೊತೆಯ, ಇತರೆ ಸಮಾಜದ ಸೌಹಾರ್ದತೆಯ ಪ್ರತೀಕವಾಗಿ ಹೊಂಡೆಯಾಟ ಜರುಗುತ್ತದೆ.ವಿಜಯಕುಮಾರ ನಾಯ್ಕ
ಕೋಮಾರಪಂಥ ಸಮಾಜದ ಪ್ರಮುಖ