Advertisement

ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್: ತುಟ್ಟಿ ಭತ್ಯೆ ಹೆಚ್ಚಳ

08:54 PM Oct 07, 2022 | Team Udayavani |

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೊರೆಯಾಗಿ ಸಿಹಿ ಸುದ್ದಿ ನೀಡಿರುವ ರಾಜ್ಯ ಸರ್ಕಾರ “ತುಟ್ಟಿ ಭತ್ಯೆ’ಯನ್ನು ಶೇ.27.25ರಿಂದ 31ಕ್ಕೆ ಪರಿಷ್ಕರಿಸಿ ಆದೇಶ ಹೊರಡಿಸಿದೆ. ಇದರಿಂದ ಪ್ರಸಕ್ತ ವರ್ಷದ ತುಟ್ಟಿ ಭತ್ಯೆಯಲ್ಲಿ ಶೇ.3.75ರಷ್ಟು ಏರಿಕೆ ಆಗಲಿದೆ.

Advertisement

2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ 2022ರ ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ಜಾರಿಗೆ ಬರುವಂತೆ ಮೂಲ ವೇತನದ ಶೇ.27.25ರಿಂದ ಶೇ.31ಕ್ಕೆ ಪರಿಷ್ಕರಿಸಿ ತುಟ್ಟಿ ಭತ್ಯೆ ದರಗಳನ್ನು ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರು, ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನ ಪಡೆಯುತ್ತಿರುವ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ಈ ತುಟ್ಟಿ ಭತ್ಯೆ ಪರಿಷ್ಕರಣೆ ಅನ್ವಯವಾಗಲಿದೆ.

ಯುಜಿಸಿ, ಎಐಸಿಟಿಇ, ಐಸಿಎಎಆರ್‌ ವೇತನ ಶ್ರೇಣಿಗಳ ನಿವೃತ್ತ ನೌಕರರಿಗೂ ಈ ಆದೇಶ ಅನ್ವಯಿಸುತ್ತದೆ. ಸರ್ಕಾರದ ಮತ್ತು ಜಿಲ್ಲಾ ಪಂಚಾಯಿತಿಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್‌ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೆ ಈ ಆದೇಶ ಅನ್ವಯಿಸುತ್ತದೆ.

ಯುಜಿಸಿ, ಎಐಸಿಟಿಇ, ಐಸಿಎಎಆರ್‌, ಎನ್‌ಜೆಪಿಸಿ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ಪಿಂಚಣಿದಾರರಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next