ಮಲ್ಪೆ: ದೀಪಾವಳಿ ಸಂಭ್ರಮಾಚರಣೆಯ ಅಂಗವಾಗಿ ಮಲ್ಪೆ ಬೀಚ್ ಫ್ರೆಂಡ್ಸ್ ವತಿಯಿಂದ ಪ್ರತೀ ವರ್ಷದಂತೆ ಈ ಬಾರಿಯೂ ಮಂಗಳವಾರ ಸಾಮಾಜಿಕ ಹಾಗೂ ಮನೋರಂಜನೆಯ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಡಾ| ಜಿ. ಶಂಕರ್ ಕಾರ್ಯ ಕ್ರಮವನ್ನು ಉದ್ಘಾಟಿಸಿ ಕಳೆದ 15 ವರ್ಷಗಳಿಂದ ನಿರಂತರ ಮತ್ತು ವ್ಯವಸ್ಥಿತವಾಗಿ ಸಮಾಜಮುಖೀ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿರು ವುದು ಶ್ಲಾಘನೀಯ, ಇಂತಹ ಕಾರ್ಯಗಳಿಗೆ ಪೂರ್ಣ ಸಹಕಾರ ನೀಡಲಾಗುವುದು ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ಜನರನ್ನು ಹೆಚ್ಚು ಹೆಚ್ಚು ಅಕರ್ಷಿಸುವಲ್ಲಿ ಹೊಸಹೊಸ ಯೋಜನೆಗಳನ್ನು ತರಿಸುವ ಮೂಲಕ ಬೀಚ್ ಅನ್ನು ಅಭಿವೃದ್ಧಿಗೊಳಿಸುವಲ್ಲಿ ಯತ್ನಿಸಲಾಗುವುದು. ಬೀಚ್‌ನ ಯಾವುದೇ ಚಟುವಟಿಕೆಗಳು ನಡೆಸುವಲ್ಲಿ ಸ್ಥಳೀಯರಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುವಂತಾಗಬೇಕು ಎಂದರು.
ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಉದ್ಯಮಿಗಳಾದ ಆನಂದ ಸಿ. ಕುಂದರ್, ನಾಗರಾಜ್ ಸುವರ್ಣ, ಉದಯ್ ಕುಮಾರ್, ಯುವರಾಜ್ ಮಸ್ಕತ್, ಗಣೇಶ್ ಮಲ್ಪೆ, ಪ್ರಸಾದ್‌ರಾಜ್ ಕಾಂಚನ್, ಹರಿಯಪ್ಪ ಕೋಟ್ಯಾನ್, ಆನಂದ ಪಿ. ಸುವರ್ಣ, ಅಜಯ್ ಪಿ. ಶೆಟ್ಟಿ, ಸುದೇಶ್ ಶೆಟ್ಟಿ, ದಯಾನಂದ ಕಾಂಚನ್, ಯೋಗೀಶ್ ಎಸ್. ಕೋಟ್ಯಾನ್, ಸಾಧು ಸಾಲ್ಯಾನ್, ಜಯಕರ್ ಶೆಟ್ಟಿ ಇಂದ್ರಾಳಿ, ಮನೋಹರ್ ಶೆಟ್ಟಿ ತೋನ್ಸೆ, ಬೈಕಾಡಿ ಸುಪ್ರಸಾದ್ ಶೆಟ್ಟಿ, ನಗರಸಭಾ ಸದಸ್ಯೆ ಲಕ್ಷ್ಮೀ ಮಂಜುನಾಥ್, ಮಲ್ಪೆ ಶ್ರೀ ಜ್ಞಾನಜ್ಯೋತಿ ಭಜನ ಮಂದಿರದ ಅಧ್ಯಕ್ಷ ಜ್ಞಾನೇಶ್ವರ ಕೋಟ್ಯಾನ್, ಮಾತೃ ಮಂಡಳಿ ಅಧ್ಯಕ್ಷೆ ಸುಮಂಗಲಾ ಎಸ್. ಮೆಂಡನ್ ಉಪಸ್ಥಿತರಿದ್ದರು.
ಗೌರವಾಧ್ಯಕ್ಷ ಪಾಂಡುರಂಗ ಮಲ್ಪೆ ಸ್ವಾಗತಿಸಿ, ಕಾರ್ಯದರ್ಶಿ ರಾಧಾಕೃಷ್ಣ ಮೆಂಡನ್ ವಂದಿಸಿದರು. ದಾಮೋದರ ಶರ್ಮ ನಿರೂಪಿಸಿದರು.