ಮಂಗಳೂರು: ದಿಯಾ ಖ್ಯಾತಿಯ ನಟ ಪೃಥ್ವಿ ಅಂಬಾರ್ ಅವರ ತಾಯಿ ಸುಜಾತ ವೀರಪ್ಪ ಅಂಬರ್ ಹೃದಯ ಸಂಬಂಧಿ ಕಾಯಿಲೆಯಿಂದ ಶುಕ್ರವಾರ ಮಂಗಳೂರಿನಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ತಾಯಿ ಸುಜಾತ ವೀರಪ್ಪ ಅಂಬರ್ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಜುಲೈ 15 ರಂದು ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಶನಿವಾರ ಅವರ ಅಂತ್ಯಕ್ರಿಯೆ ಕಾಸರಗೋಡಿನ ಉಪ್ಪಳ ಸಮೀಪದ ಐಲದಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಸುಜಾತ ಅವರು ವೀರಪ್ಪ ಅಂಬರ್ ಅವರ ಧರ್ಮಪತ್ನಿಯಾಗಿದ್ದು, ಸುಜಾತ ಅವರು ಹಲವು ರೀತಿಯ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.
ಇದನ್ನೂ ಓದಿ: ಫೋಟೋ ವಿಡಿಯೋ ನಿಷೇಧದ ಆದೇಶ ನನ್ನ ಗಮನಕ್ಕೆ ಬಂದಿರಲಿಲ್ಲ: ಸಿಎಂ ಬೊಮ್ಮಾಯಿ
ಇನ್ನೂ ಇವರ ಪುತ್ರ ನಟ ಪೃಥ್ವಿ ಅಂಬರ್ ಸಿನಿಮಾ ರಂಗದಲ್ಲಿ ತೊಡಗಿಸಿಕೊಂಡಿದ್ದು, ದಿಯಾ ಸಿನಿಮಾ ಮೂಲಕ ಸಾಕಷ್ಟು ಹೆಸರು ಮಾಡಿದ್ದಾರೆ. ಇತ್ತೀಚೆಗೆ ತೆರೆಕಂಡ ಬೈರಾಗಿ ಮತ್ತು ಶುಗರ್ ಲೆಸ್ ಚಿತ್ರದಲ್ಲಿ ಪೃಥ್ವಿ ಅಂಬರ್ ನಟಿಸಿದ್ದಾರೆ. ಚಿತ್ರಗಳ ಸಕ್ಸಸ್ನ್ನು ಖುಷಿ ಪಡೋ ಸಮಯದಲ್ಲಿ ನಟ ತಮ್ಮ ತಾಯಿಯನ್ನು ಕಳೆದುಕೊಂಡಿದ್ದಾರೆ.