Advertisement

ಡಿಜೆ ಹಳ್ಳಿ-ಕೆಜಿ ಹಳ್ಳಿ ಪ್ರಕರಣ: ವಿಶೇಷ ಕೋರ್ಟ್‌ ಆದೇಶ ಸರಿ

11:26 PM Dec 19, 2020 | sudhir |

ಬೆಂಗಳೂರು: ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆ ಪ್ರಕರಣದ ಆರೋಪಿಗಳ ಚಾರ್ಜ್‌ಶೀಟ್‌ ಸಲ್ಲಿಕೆ ಅವಧಿಯನ್ನು 90ರಿಂದ 180 ದಿನಗಳಿಗೆ ವಿಸ್ತರಿಸಿ ಎನ್‌ಐಎ ವಿಶೇಷ ನ್ಯಾಯಾಲಯ ಹೊರಡಿಸಿರುವ ಆದೇಶ ಕಾನೂನು ಬದ್ಧವಾಗಿದೆ ಎಂದು ಹೈಕೋರ್ಟ್‌ ಹೇಳಿದೆ.

Advertisement

ಈ ಕುರಿತು ಪ್ರಕರಣದ ಆರೋಪಿಗಳು ಸಲ್ಲಿಸಿರುವ ಕ್ರಿಮಿನಲ್‌ ಮೇಲ್ಮನವಿಯು ಮುಖ್ಯ ನ್ಯಾ| ಎ.ಎಸ್‌. ಓಕ್‌ ಹಾಗೂ ನ್ಯಾ| ಎಸ್‌. ವಿಶ್ವಜಿತ್‌ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು.

ಎನ್‌ಐಎ ವಿಶೇಷ ನ್ಯಾಯಾಲಯದ ತೀರ್ಪು ಕಾನೂನುಬದ್ಧವಾಗಿರುವ ಕಾರಣ ಮೇಲ್ಮನವಿಯನ್ನು ಪರಿಗಣಿಸಲು ಸಾಧ್ಯವಿಲ್ಲ. ಅಲ್ಲದೆ ಯುಎಪಿಎ ಅಡಿ ದಾಖಲಾದ ಪ್ರಕರಣಗಳಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿಲ್ಲ ಎಂದು ಕೋರ್ಟ್‌ ಹೇಳಿದೆ.
ಈ ನಡುವೆ, ಮೇಲ್ಮನವಿಯನ್ನು ರಿಟ್‌ ಅರ್ಜಿಯಾಗಿ ಪರಿವರ್ತಿಸಿಕೊಳ್ಳುವುದಾಗಿ ಆರೋಪಿಗಳ ಪರ ವಕೀಲರು ಕೇಳಿಕೊಂಡ ಹಿನ್ನೆಲೆಯಲ್ಲಿ, 6 ವಾರಗಳಲ್ಲಿ ಮಾರ್ಪಡಿತ ಅರ್ಜಿ ಸಲ್ಲಿಸಲು ನ್ಯಾಯಪೀಠ ಅವಕಾಶ ನೀಡಿತು.

Advertisement

Udayavani is now on Telegram. Click here to join our channel and stay updated with the latest news.

Next