Advertisement

D.J.ಹಳ್ಳಿ, K.G.ಹಳ್ಳಿ: ರಾಜಕೀಯ ಗಲಭೆ- ವಿವಾದವನ್ನು ಮೈಮೇಲೆ ಎಳೆದುಕೊಂಡ ಡಿ.ಕೆ.ಶಿ

01:02 AM Jan 07, 2024 | Team Udayavani |

ಬೆಂಗಳೂರು: ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಅಮಾಯಕರಿದ್ದಾರೆ ಎನ್ನುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಮತ್ತೆ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದು, ವಿಪಕ್ಷ ಬಿಜೆಪಿಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಹಿಂದೂ ಕಾರ್ಯಕರ್ತರನ್ನು ಅಪರಾಧಿಗಳಂತೆ ನೋಡುವ ಸರಕಾರ, ಬಾಂಬ್‌ ಸ್ಫೋಟಿಸಿದ ವರನ್ನು ಅಮಾಯಕರು ಎನ್ನುತ್ತದೆ ಎಂದು ಬಿಜೆಪಿ ವಾಗ್ಧಾಳಿ ನಡೆಸಿದೆ.

Advertisement

ಈ ಹಿಂದೆ ಕಾಂಗ್ರೆಸ್‌ ಶಾಸಕ ತನ್ವೀರ್‌ ಸೇಠ್‌ ಸರಕಾರಕ್ಕೆ ಪತ್ರ ಬರೆದು ಅಮಾಯಕರನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೂ ವಿವಾದವಾಗಿತ್ತು. ಶಾಸಕರು ಪತ್ರ ಬರೆದ ಕೂಡಲೇ ಯಾರನ್ನೂ ಬಿಡಲು ಸಾಧ್ಯವಿಲ್ಲ. ಪೊಲೀಸ್‌ ಅಧಿಕಾರಿಗಳು ಪ್ರಕರಣಗಳ ತನಿಖಾ ಪ್ರಗತಿಯನ್ನು ಸಂಪುಟ ಉಪಸಮಿತಿ ಮುಂದೆ ಮಂಡಿಸಿದಾಗ ಪರಿಶೀಲಿಸಿ ಕ್ರಮ ವಹಿಸುವುದಾಗಿ ಗೃಹಸಚಿವ ಡಾ| ಜಿ. ಪರಮೇಶ್ವರ್‌ ಹೇಳಿದ್ದರು.

ಆದರೆ ಆಗ ಆರೋಪಿಗಳ ಕುಟುಂಬ ಸ್ಥರು ನೀಡಿದ ಮನವಿ ಪತ್ರ ಸ್ವೀಕರಿಸಿ ಪ್ರತಿಕ್ರಿಯಿಸಿರುವ ಡಿಸಿಎಂ ಶಿವಕುಮಾರ್‌, ಕಾನೂನು ಕೈಗೆತ್ತಿಕೊಂಡವರಿಗೆ ಶಿಕ್ಷೆಯಾಗುವ ಬಗ್ಗೆ ನಮ್ಮ ಅಭ್ಯಂತರ ಇಲ್ಲ. ಆದರೆ ಕೆಲವರು ಅಮಾಯಕರಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಸಂಬಂಧಿಸಿ ಪೊಲೀಸ್‌ ಅಧಿಕಾರಿಗಳ ಜತೆಗೆ ಮಾತನಾಡುವ ಭರವಸೆ ನೀಡಿದ್ದಾರೆ. ಇದಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next