ಸೋಮವಾರ 43 ಮಂದಿಗೆ ಸೋಂಕು ದೃಢಪಟ್ಟಿದ್ದರೆ ಮಂಗಳವಾರ 72 ಮಂದಿಗೆ ಸೋಂಕು ದೃಢಪಟ್ಟಿದೆ.
Advertisement
ಇದರಿಂದಾಗಿ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ. 3.34ಕ್ಕೇರಿದೆ.2,128 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದೆ. ಉಡುಪಿಯಲ್ಲಿ 66, ಕಾರ್ಕಳ-3, ಕುಂದಾಪುರ 2 ಮತ್ತು ಇತರ ಜಿಲ್ಲೆಯ ಒಬ್ಬರಿಗೆ ಸೋಂಕು ದೃಢಪಟ್ಟಿದೆ.
ತ್ತಿದ್ದು, ಕಳೆದ ಕೆಲ ತಿಂಗಳ ಬಳಿಕ ಮಂಗಳವಾರ 75 ಮಂದಿಗೆ ಕೊರೊನಾ ದೃಢಪಟ್ಟು ಒಬ್ಬರು ಸಾವನ್ನಪ್ಪಿದ್ದಾರೆ. ಈ ನಡುವೆ ಜಿಲ್ಲೆಯ ಪಾಸಿಟಿವಿಟಿ ದರವೂ ಶೇ. 1.13ಕ್ಕೆ ಜಿಗಿತ ಕಂಡಿದೆ. 7 ಮಂದಿ ಗುಣ ಮುಖರಾಗಿದ್ದಾರೆ. ಸದ್ಯ 341 ಸಕ್ರಿಯ ಪ್ರಕರಣಗಳಿವೆ.
Related Articles
Advertisement
ಒಂದೆಡೆ ವಾತಾವರಣ ಕೂಡ ಬದಲಾವಣೆಯಾಗಿದ್ದು, ಹಲ ವರಲ್ಲಿ ಶೀತ-ಜ್ವರ ಕಾಣಿಸಿ ಕೊಳ್ಳು ತ್ತಿದೆ. ಈ ವೇಳೆ ತಪಾಸಣೆ ವೇಳೆ ಕೆಲ ವರಲ್ಲಿ ಕೊರೊನಾ ದೃಢಪಡುತ್ತಿದೆ ಎನ್ನು ತ್ತಾರೆ ಆರೋಗ್ಯ ಇಲಾಖೆ ಅಧಿಕಾರಿ ಗಳು. ಮತ್ತೊಂದೆಡೆ, ಕ್ಲಸ್ಟರ್ ಪ್ರದೇಶ ಸೇರಿದಂತೆ ಕೊರೊನಾ ವ್ಯಕ್ತಿಯ ಪ್ರಾಥಮಿಕ, ದ್ವಿತೀಯ ಸಂಪರ್ಕದವರನ್ನು ಪರೀಕ್ಷೆ ನಡೆಸಲಾಗುತ್ತಿದೆ. ಈ ವೇಳೆಯೂ ಕೊರೊನಾ ಪಾಸಿಟಿವ್ ದೃಢಪಡು ತ್ತಿದೆ. ಈ ನಡುವೆ ಜಿಲ್ಲೆಯಲ್ಲಿ ಕೊರೊನಾ ಟೆಸ್ಟಿಂಗ್ ಅನ್ನು 15,000ಕ್ಕೆ ಏರಿಕೆ ಮಾಡಲಾಗಿದೆ.
ಕೊಡಗು: ಇಬ್ಬರಿಗೆ ಸೋಂಕುಮಡಿಕೇರಿ: ಜಿಲ್ಲೆಯಲ್ಲಿ ಮಂಗಳ ವಾರ ಇಬ್ಬರಿಗೆ ಸೋಂಕು ದೃಢಪಟ್ಟಿದೆ. 3 ಮಂದಿ ಗುಣಮುಖರಾಗಿದ್ದಾರೆ. 175 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ. 0.08 ಆಗಿದೆ ಎಂದು ಜಿಲ್ಲಾಧಿಕಾರಿ ಡಾ| ಬಿ.ಸಿ. ಸತೀಶ ತಿಳಿಸಿದ್ದಾರೆ. ಇದನ್ನೂ ಓದಿ:ಕೋವಿಡ್ ಹೆಚ್ಚಳ : ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ, ಬೆಂಗಳೂರಿನಲ್ಲಿ 2 ವಾರ ಶಾಲೆ ಬಂದ್ ಕಾಸರಗೋಡು: 49ಮಂದಿಗೆ ಸೋಂಕು
ಕಾಸರಗೋಡು: ಜಿಲ್ಲೆಯಲ್ಲಿ ಮಂಗಳವಾರ 49 ಮಂದಿಗೆ ಸೋಂಕು ದೃಢಪಟ್ಟಿದ್ದು 28 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 352 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೇರಳದಲ್ಲಿ 3,640 ಪ್ರಕರಣ
ಕೇರಳದಲ್ಲಿ ಮಂಗಳವಾರ 3,640 ಮಂದಿಗೆ ಸೋಂಕು ದೃಢ ಪಟ್ಟಿದ್ದು 2,363 ಮಂದಿ ಗುಣ ಮುಖರಾಗಿದ್ದಾರೆ.
30 ಮಂದಿ ಮೃತಪಟ್ಟಿದ್ದು ಒಟ್ಟು ಸಾವಿನ ಸಂಖ್ಯೆ 48,637ಕ್ಕೇರಿದೆ. 20,180 ಮಂದಿ ಚಿಕಿತ್ಸೆ ಪಡೆ ಯುತ್ತಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ 33,026 ಮಂದಿಗೆ ಲಸಿಕೆ
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮಂಗಳವಾರ 15ರಿಂದ 18 ವರ್ಷದ ಮಕ್ಕಳ ಸಹಿತ ಒಟ್ಟು 33,026 ಮಂದಿಗೆ ಲಸಿಕೆ ಹಾಕಲಾಗಿದೆ. ದ.ಕ. ಜಿಲ್ಲೆಯಲ್ಲಿ ಒಟ್ಟು 22,521 ಮಂದಿಗೆ ಲಸಿಕೆ ನೀಡಲಾಗಿದ್ದು 19,554 ಮಂದಿಗೆ ಮೊದಲ ಮತ್ತು 2,967 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ 10,505 ಮಂದಿಗೆ ಲಸಿಕೆ ಹಾಕಲಾಗಿದ್ದು 9,419 ಮಂದಿ ಮೊದಲ ಹಾಗೂ 1,086 ಮಂದಿ ಎರಡನೇ ಬಾರಿಗೆ ಲಸಿಕೆ ಪಡೆದುಕೊಂಡರು. 18,942 ವಿದ್ಯಾರ್ಥಿಗಳಿಗೆ ಲಸಿಕೆ
ದ.ಕ. ಜಿಲ್ಲೆಯಲ್ಲಿ ಮಂಗಳವಾರ 18,942 ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ. ಮಂಗಳೂರಿನಲ್ಲಿ ಅತೀ ಹೆಚ್ಚು 8,450 ವಿದ್ಯಾರ್ಥಿಗಳು, ಬಂಟ್ವಾಳ ತಾಲೂಕಿನಲ್ಲಿ 4,777, ಬೆಳ್ತಂಗಡಿಯಲ್ಲಿ 2,197, ಪುತ್ತೂರಿನಲ್ಲಿ 2,517 ಮತ್ತು ಸುಳ್ಯ ತಾಲೂಕಿನಲ್ಲಿ 1,001 ಮಂದಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ. 10 ಸಾವಿರಕ್ಕೂ ಅಧಿಕ ಮಂದಿ ಮಕ್ಕಳಿಗೆ ಲಸಿಕೆ
ಉಡುಪಿ ಜಿಲ್ಲೆಯಲ್ಲಿ ಸೋಮವಾರ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವ ಪ್ರಕ್ರಿಯೆ ಆರಂಭ ಗೊಂಡಿದ್ದು, ಮಂಗಳವಾರ 10 ಸಾವಿರಕ್ಕೂ ಅಧಿಕ ಮಂದಿ ಮಕ್ಕಳು ಲಸಿಕೆ ಪಡೆದುಕೊಂಡರು. ಸೋಮವಾರ ಜಿಲ್ಲೆಯಲ್ಲಿ ಲಸಿಕೆ ಪಡೆದ ಮಕ್ಕಳ ಸಂಖ್ಯೆ 14,500. ಉಡುಪಿ: ಇಂದು ಕೋವಿಡ್ ಜಾಗೃತಿ
ಉಡುಪಿ: ಎಲ್ಲ ನಗರಸಭೆ, ಪುರಸಭೆ, ಪ.ಪಂ., ಗ್ರಾ.ಪಂ.ವ್ಯಾಪ್ತಿಯಲ್ಲಿ ಜ. 5ರಂದು ಕೋವಿಡ್-19 ಕುರಿತು ಜಾಗೃತಿ ಮೂಡಿಸುವ ಅಭಿಯಾನ ಆಯೋಜಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಸೂಚಿಸಿದ್ದಾರೆ. ಸರ್ವೇಕ್ಷಣಾಧಿಕಾರಿ ಕಚೇರಿಯಲ್ಲಿ ಮಂಗಳ ವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಬಕಾರಿ, ಕಂದಾಯ, ಪೊಲೀಸ್, ಮೀನುಗಾರಿಕೆ, ಪ್ರವಾಸೋದ್ಯಮ, ಸಾರಿಗೆ, ಪ.ಪೂ.ಶಿಕ್ಷಣ ಇಲಾಖೆ ಅಧಿಕಾರಿಗಳು ಕೋವಿಡ್-19 ಕುರಿತು ಜನ ಜಾಗೃತಿ ಮೂಡಿಸುವ ಚಟುವಟಿಕೆಗಳನ್ನು ಜ. 5ರಂದು ಸಂಜೆ 5ರಿಂದ 6ರ ವರೆಗೆ ಆಯೋಜಿಸಲು ಅಗತ್ಯ ಕ್ರಮಕೈಗೊಳ್ಳಲು ಸೂಚಿಸಿದರು. ಮಾಸ್ಕ್ ಧರಿಸದೆ ಓಡಾಡುವವರು, ಸಾಮಾಜಿಕ ಅಂತರ ಕಾಪಾಡಿ ಕೊಳ್ಳದಿರು ವವರು, ರಸ್ತೆಯಲ್ಲಿ ಹಾಗೂ ಸಿಕ್ಕ ಸಿಕ್ಕ ಕಡೆ ಉಗುಳುವವರನ್ನು ಗುರುತಿಸಿ ಎಚ್ಚರಿಕೆ ನೀಡು ವುದು, ಮಾರ್ಗಸೂಚಿ ಉಲ್ಲಂ ಸಿ ರುವ ಸಾರ್ವಜನಿಕರಿಗೆ ದಂಡ ವಿಧಿಸಿ ಜನ ಜಾಗೃತಿ ಮೂಡಿಸುವಂತೆ ಸೂಚನೆ ನೀಡಿದರು. ಜಿ.ಪಂ. ಸಿಇಒ ಡಾ| ನವೀನ್ ಭಟ್, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಡಿಎಚ್‌ಒ ಡಾ| ನಾಗಭೂಷಣ ಉಡುಪ, ಜಿ.ಪಂ. ಉಪ ಕಾರ್ಯದರ್ಶಿ ಕಿರಣ್ ಪೆಡೆ°ಕರ್, ಆರೋಗ್ಯ ಇಲಾಖೆ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.