Advertisement
ಸಿಬಿಐ ತನಿಖೆ ರದ್ದುಕೋರಿ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯು ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.ಈ ವೇಳೆ ಡಿ.ಕೆ. ಶಿವಕುಮಾರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಸಂದೇಶ ಚೌಟ, ಮುಚ್ಚಿದ ಲಕೋಟೆಯಲ್ಲಿ ತನಿಖಾ ವರದಿಯನ್ನು ಸಲ್ಲಿಸಿದ ಸಿಬಿಐ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.ಅಲ್ಲದೇ ಸುಪ್ರೀಂಕೋರ್ಟ್ ಸಹ ಈ ಹಿಂದೆ ಆಕ್ಷೇಪ ವ್ಯಕ್ತಪಡಿಸಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.ಇದಕ್ಕೆ ಸ್ಪಷ್ಟನೆ ನೀಡಿದ ಸಿಬಿಐ ಪರ ವಕೀಲ ಪಿ. ಪ್ರಸನ್ನಕುಮಾರ್, ನ್ಯಾಯಾಲಯದ ಆದೇಶದಂತೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲಾಗಿದೆ ಎಂದರು.