Advertisement
ಸಿಬಿಐ ತನಿಖೆಗೆ ಅನುಮತಿ ನೀಡಿ ಹಿಂದಿನ ಬಿಜೆಪಿ ಸರಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ತಾವು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಏಕಸದಸ್ಯ ನ್ಯಾಯಪೀಠದ ತೀರ್ಪನ್ನು ಪ್ರಶ್ನಿಸಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಲ್ಲಿಸಿರುವ ಮೇಲ್ಮನವಿಗೆ ಮಧ್ಯಂತರ ಅರ್ಜಿ ಸಲ್ಲಿಸಿರುವ ಯತ್ನಾಳ್, ಪ್ರಕರಣದಲ್ಲಿ ತಮ್ಮ ವಾದವನ್ನು ಆಲಿಸುವಂತೆ ಕೋರಿದ್ದಾರೆ.
ಇದೇವೇಳೆ ಡಿ.ಕೆ. ಶಿವಕುಮಾರ್ ಸಲ್ಲಿಸಿರುವ ಮೇಲ್ಮನವಿಯು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಲೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿರುವ ವಿಭಾಗೀಯ ನ್ಯಾಯಪೀಠದಲ್ಲಿ ನ. 29ರಂದು ವಿಚಾರಣೆಗೆ ಬರಲಿದೆ. ಇದೇ ಸಂದರ್ಭದಲ್ಲಿ ಯತ್ನಾಳ್ ಅವರ ಮಧ್ಯಂತರ ಅರ್ಜಿಯನ್ನು ಪರಿಗಣಿಸುವ ಸಾಧ್ಯತೆಯಿದೆ. ಹಿಂದಿನ ಬಿಜೆಪಿ ಸರಕಾರವು ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆವ ನಿರ್ಣಯವನ್ನು ನ. 23ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿತ್ತು. ಅದನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ. ಡಿಕೆಶಿ ವಿರುದ್ಧದ ತನಿಖೆಗೆ ನೀಡಿದ್ದ ಅನುಮತಿಯನ್ನು ವಾಪಸ್ ಪಡೆಯುವ ಮೂಲಕ ರಾಜ್ಯ ಸರಕಾರವು ಹೈಕೋರ್ಟ್ ವಿಚಾರಣೆಯನ್ನು ನಿಷ್ಫಲಗೊಳಿಸುವ ಪ್ರಯತ್ನ ಮಾಡುತ್ತಿದೆ. ಸಿಬಿಐ ಶೇ. 90ರಷ್ಟು ತನಿಖೆ ಪೂರ್ಣಗೊಳಿಸಿದೆ ಎಂದು ಇದೇ ಪ್ರಕರಣದ ವಿಚಾರಣೆ ನಡೆಸಿದ ಏಕ ಸದಸ್ಯ ನ್ಯಾಯಪೀಠ ತಿಳಿಸಿದೆ. ಈ ಹಂತದಲ್ಲಿ ಸರಕಾರ ಕೈಗೊಂಡಿರುವ ಕ್ರಮ ಸಿಬಿಐ ತನಿಖೆಯನ್ನು ಮೊಟಕುಗೊಳಿಸುತ್ತಿದೆ. ಆ ಮೂಲಕ ನ್ಯಾಯಾಂಗದ ಪ್ರಕ್ರಿಯೆಯಲ್ಲಿ ಸರಕಾರ ಹಸ್ತಕ್ಷೇಪ ಮಾಡಿದೆ. ಆದ್ದರಿಂದ ಸಿಬಿಐಗೆ ನೀಡಲಾಗಿದ್ದ ಅನುಮತಿಯನ್ನು ವಾಪಸ್ ಪಡೆದ ಸರಕಾರದ ನಿರ್ಧಾರಕ್ಕೆ ಸೀಮಿತವಾಗಿ ತಮ್ಮ ವಾದವನ್ನು ಆಲಿಸಬೇಕು ಎಂದು ಅರ್ಜಿಯಲ್ಲಿ ಯತ್ನಾಳ್ ಕೋರಿ¨ªಾರೆ.
Related Articles
ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿ ಹಿಂಪಡೆದ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಸರಕಾರದ ಪರ ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಹಾಗೂ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ವಾದ ಮಂಡಿಸಲಿದ್ದಾರೆ. ಬುಧವಾರ ಹೈಕೋರ್ಟ್‌ಗೆ ಹಾಜರಾಗಲಿರುವ ಸಿಬಲ್ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ರಾಜ್ಯ ಸರಕಾರದ ಪರವಾಗಿ ವಾದ ಮಂಡಿಸಲಿದ್ದಾರೆ ಎಂದು ಹೆಚ್ಚುವರಿ ಅಡ್ವೊಕೇಟ್ ಜನರಲ್ ಶೇಖ್ ಇಸ್ಮಾಯಿಲ್ ಜಬಿವುಲ್ಲಾ ಮಾಹಿತಿ ನೀಡಿದ್ದಾರೆ.
Advertisement